ಬೆಂಗಳೂರು: ರಾಜ್ಯದ ಖ್ಯಾತ ಹಿರಿಯ ರಂಗಕರ್ಮಿ ಹೆಗ್ಗೋಡು ಪ್ರಸನ್ನ ಅವರನ್ನು 2018ನೆಯ ಸಾಲಿನ ಮಹಾತ್ಮ ಗಾಂಧಿ ಸೇವಾ ಪ್ರಶಸ್ತಿಗೆ ಆಯ್ಕೆ ಮಾಡಲಾಗಿದೆ.
ಈ ವಿಚಾರವನ್ನು ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ ಸ್ವತಃ ಟ್ವೀಟ್ ಮಾಡಿದ್ದು, ವಾರ್ತಾ ಮತ್ತು ಪ್ರಚಾರ ಇಲಾಖೆಯಿಂದ ನೀಡಲಾಗುವ ಈ ಪ್ರಶಸ್ತಿಯನ್ನು ಅಕ್ಟೋಬರ್ 2ರ ಗಾಂಧೀ ಜಯಂತಿಯಂದು ರವೀಂದ್ರ ಕಲಾ ಕ್ಷೇತ್ರದಲ್ಲಿ ನಡೆಯಲಿರುವ ಕಾರ್ಯಕ್ರಮದಲ್ಲಿ ಹಿರಿಯ ರಂಗಕರ್ಮಿ ಹೆಗ್ಗೋಡು ಪ್ರಸನ್ನ ಅವರಿಗೆ 5 ಲಕ್ಷ ರೂ. ನಗದು ಬಹುಮಾನ ಮತ್ತು ಪ್ರಶಸ್ತಿ ಪತ್ರ ನೀಡಿ ಗೌರವಿಸಲಾಗುವುದು ಎಂದಿದ್ದಾರೆ.
2018ನೇ ಸಾಲಿನ ಮಹಾತ್ಮಾಗಾಂಧಿ ಸೇವಾ ಪ್ರಶಸ್ತಿಗೆ ರಂಗಕರ್ಮಿ ಪ್ರಸನ್ನ ಅವರನ್ನು ಆಯ್ಕೆ ಮಾಡಲಾಗಿದೆ.
ಸುಪ್ರೀಂಕೋರ್ಟ್ ವಿಶ್ರಾಂತ ನ್ಯಾಯಮೂರ್ತಿ ವಿ ಗೋಪಾಲಗೌಡ ಅವರ ಅಧ್ಯಕ್ಷತೆಯ ಸಮಿತಿ ಪ್ರಸನ್ನ ಅವರನ್ನು ಆಯ್ಕೆ ಮಾಡಿದೆ ಎಂದು ಮುಖ್ಯಮಂತ್ರಿ ಹೆಚ್ ಡಿ ಕುಮಾರಸ್ವಾಮಿ ಅವರು ತಿಳಿಸಿದರು.
ಈ ಪ್ರಶಸ್ತಿ 5 ಲಕ್ಷ ರೂ. ಬಹುಮಾನ ಒಳಗೊಂಡಿದೆ. pic.twitter.com/XQ3riIbgTz
— CM of Karnataka (@CMofKarnataka) September 25, 2018
ಸುಪ್ರೀಂಕೋರ್ಟ್ ವಿಶ್ರಾಂತ ನ್ಯಾಯಮೂರ್ತಿ ವಿ. ಗೋಪಾಲಗೌಡ ಅವರ ಅಧ್ಯಕ್ಷತೆಯ ಸಮಿತಿ ಪ್ರಸನ್ನ ಅವರನ್ನು ಆಯ್ಕೆ ಮಾಡಿದೆ.
Discussion about this post