ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ
ಶಿವಮೊಗ್ಗ: ಕೊರೋನಾ ವೈರಸ್ ಹಿನ್ನೆಲೆಯಲ್ಲಿ ಜಾರಿಯಾಗಿರುವ ಲಾಕ್ ಡೌನ್’ನಿಂದಾಗಿ ಸಂಕಷ್ಟಕ್ಕೆ ಒಳಗಾದವರ ಸಹಾಯಕ್ಕಾಗಿ ಸಂಸದ ಬಿ.ವೈ ರಾಘವೇಂದ್ರ ಅವರ ಮಾರ್ಗದರ್ಶನ ಹಾಗೂ ನೇತೃತ್ವದಲ್ಲಿ ಸಹಾಯವಾಣಿಯನ್ನು ಆರಂಭಿಸಲಾಗಿದೆ.
ಈ ಕುರಿತಂತೆ ಸಂಸದರ ಕಚೇರಿಯಿಂದ ಮಾಹಿತಿ ನೀಡಿದ್ದು, ಶಿವಮೊಗ್ಗ ಲೋಕಸಭಾ ಕ್ಷೇತ್ರದ ವ್ಯಾಪ್ತಿಯಲ್ಲಿ ಕೊರೋನಾ ಸೋಂಕಿನ ನಿಯಂತ್ರಣಗೊಳಿಸುವ ನಿಟ್ಟಿನಲ್ಲಿ ಕೇಂದ್ರ ಸರ್ಕಾರವು ಏಪ್ರಿಲ್ 14ರವರೆಗೆ ಲಾಕ್’ಡೌನ್ ಘೋಷಿಸಿರುವುದರಿಂದ ಸಾರ್ವಜನಿಕರ ಆರೋಗ್ಯ ಕಾಪಾಡುವಲ್ಲಿ ಜಿಲ್ಲಾಡಳಿತ ಕಟ್ಟುನಿಟ್ಟಿನ ಕ್ರಮ ಕೈಗೊಂಡಿದೆ. ಇದರಿಂದಾಗಿ ಸಾರ್ವಜನಿಕ ಜನಜೀವನ ಅಸ್ತವ್ಯಸ್ತಗೊಂಡಿರುವುದು ಎಲ್ಲರಿಗೂ ತಿಳಿದ ಸಂಗತಿಯಾಗಿದೆ.
ಇಂತಹ ಸಂದಿಗ್ಧ ಸಂದರ್ಭದಲ್ಲಿ ಜನರ ಆರೋಗ್ಯ ಮತ್ತು ಸುರಕ್ಷತೆಯನ್ನು ಗಮನದಲ್ಲಿಟ್ಟುಕೊಂಡು ಅಗತ್ಯ ಮುಂಜಾಗ್ರತಾ ಕ್ರಮಗಳನ್ನು ಕೈಗೊಂಡಿವೆ ಮಾತ್ರವಲ್ಲ ಸರ್ಕಾರದ ನಿರ್ದೇಶನದಂತೆ ಆರೋಗ್ಯ, ಪೊಲೀಸ್ ಇಲಾಖೆ ಹಾಗೂ ಒಟ್ಟಾರೆಯಾಗಿ ಜಿಲ್ಲಾಡಳಿತ ಜನಜಾಗೃತಿಗಾಗಿ ಅನೇಕ ಕಾರ್ಯಕ್ರಮಗಳನ್ನು ರೂಪಿಸಿ ಅನುಷ್ಠಾನಗೊಳಿಸುತ್ತಿರುವುದು ಸಮಾಧಾನದ ಸಂಗತಿಯಾಗಿದೆ.
ಈ ಸಂದರ್ಭದಲ್ಲಿ ಸಂಕಷ್ಟಕ್ಕೊಳಗಾದವರಿಗೆ ಸಹಾಯಹಸ್ತ ಹಾಗೂ ಸೇವೆ ಒದಗಿಸಲು ಈ ಸಹಾಯವಾಣಿಯನ್ನು ಆರಂಭಿಸಲಾಗಿದ್ದು, ಕ್ಷೇತ್ರದ ವ್ಯಾಪ್ತಿಗೊಳಪಡುವ ಎಲ್ಲಾ ತಾಲೂಕುಗಳ ಉಸ್ತುವಾರಿಗೆ ಸಿಬ್ಬಂಧಿಗಳನ್ನು ನಿಯೋಜಿಸಿರುವುದಾಗಿ ಸಂಸದರು ತಿಳಿಸಿದ್ದಾರೆ.
ವಿಧಾನಸಭಾ ಕ್ಷೇತ್ರವಾರು ಉಸ್ತುವಾರಿಗಳ ನಂಬರ್ ಹೀಗಿದೆ
- ಶಿವಮೊಗ್ಗ ನಗರ ಮತ್ತು ಗ್ರಾಮಾಂತರ: ಡಾ॥ಟಿ.ಎಂ.ಸುರೇಶ್-ಮೊ.9886065835 8217680711,
- ಭದ್ರಾವತಿ: ಸಂತೋಷ್‌ಕುಮಾರ್-ಮೊ.9844101014,
- ತೀರ್ಥಹಳ್ಳಿ: ದತ್ತಕುಮಾರ್-ಮೊ.9886829063
- ಸಾಗರ: ಬಸವರಾಜ ಮಠದ್-ಮೊ.9980253645
- ಸೊರಬ: ಮಂಜುನಾಥ್-ಮೊ.9844534526
- ಶಿಕಾರಿಪುರ: ಕಾಶಿ ವಿಶ್ವನಾಥ್-ಮೊ.8088884087
- ಬೈಂದೂರು: ಶಿವಕುಮಾರ್-ಮೊ.9844242005 ಮತ್ತು ನವೀನ್‌ಕುಮಾರ್-ಮೊ.9964955979
ಸಾರ್ವಜನಿಕರು ತಮ್ಮ ಅಗತ್ಯ ಸೇವೆಗಳಿಗಾಗಿ ಇವರನ್ನು ಸಂಪರ್ಕಿಸಿ ಅಗತ್ಯ ಸೌಲಭ್ಯಗಳನ್ನು ಪಡೆದುಕೊಳ್ಳುವಂತೆ ಸಂಸದರು ಕೋರಿದ್ದಾರೆ.
Get in Touch With Us info@kalpa.news Whatsapp: 9481252093
Discussion about this post