ಕಲ್ಪ ಮೀಡಿಯಾ ಹೌಸ್ | ಶಿವಮೊಗ್ಗ |
ಮಾವಿನಕೆರೆ ಮತ್ತು ಹೊಳೆನರಸೀಪುರ ರೈಲು ನಿಲ್ದಾಣಗಳಲ್ಲಿ ಹಳಿಗಳ ನವೀಕರಣ ಕಾಮಗಾರಿಯಿಂದಾಗಿ, ಕೆಳಗಿನ ರೈಲುಗಳ ಸಂಚಾರದಲ್ಲಿ ನಿಯಂತ್ರಣವಾಗಲಿದೆ.
ಈ ಕುರಿತಂತೆ ರೈಲ್ವೆ ಇಲಾಖೆ ಮಾಹಿತಿ ಪ್ರಕಟಿಸಿದ್ದು, ವಿವರಗಳು ಇಂತಿವೆ.
ಸೆಪ್ಟೆಂಬರ್ 22, 23 ಮತ್ತು 24ರಂದು ಮೈಸೂರಿನಿಂದ ಹೊರಡುವ 16225 ಸಂಖ್ಯೆಯ ಮೈಸೂರು – ಶಿವಮೊಗ್ಗ ಟೌನ್ ಎಕ್ಸ್’ಪ್ರೆಸ್ ರೈಲು, ಮಾರ್ಗ ಮಧ್ಯದಲ್ಲಿ 60 ನಿಮಿಷಗಳ ಕಾಲ ನಿಯಂತ್ರಣವಾಗಲಿದೆ. ಅದೇ ರೀತಿ, ಸೆಪ್ಟೆಂಬರ್ 26ರಂದು ಈ ರೈಲು 65 ನಿಮಿಷಗಳ ಕಾಲ ನಿಯಂತ್ರಣಕ್ಕೆ ಒಳಪಡಲಿದೆ. ಅಂದರೆ, ತಡವಾಗಿ ಸಂಚರಿಸಲಿದೆ.
ಸೆಪ್ಟೆಂಬರ್ 22, 23 ಮತ್ತು 24ರಂದು ಸಂಚರಿಸುವ 16221 ಸಂಖ್ಯೆಯ ತಾಳಗುಪ್ಪ – ಮೈಸೂರು ಎಕ್ಸ್’ಪ್ರೆಸ್ ರೈಲು ಕೂಡ, ಮಾರ್ಗ ಮಧ್ಯದಲ್ಲಿ 40 ನಿಮಿಷಗಳ ಕಾಲ ನಿಯಂತ್ರಣಕ್ಕೆ ಒಳಗಾಗಲಿದೆ. ಸೆಪ್ಟೆಂಬರ್ 26ರಂದು ಇದೇ ರೈಲು 15 ನಿಮಿಷಗಳ ಕಾಲ ನಿಯಂತ್ರಣಗೊಳ್ಳಲಿದೆ. ಅಂದರೆ ತಡವಾಗಿ ಸಂಚರಿಸಲಿದೆ.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
Discussion about this post