ಕಲ್ಪ ಮೀಡಿಯಾ ಹೌಸ್ | ಶಿವಮೊಗ್ಗ |
ನಿನ್ನೆ ಸಂಜೆ ದೆಹಲಿಯ ಕೆಂಪು ಕೋಟೆ ಬಳಿಯಲ್ಲಿ ಭೀಕರ್ ಬಾಂಬ್ ಸ್ಪೋಟ #BombBlast ಸಂಭವಿಸಿದ ಹಿನ್ನೆಲೆಯಲ್ಲಿ ರಾಜ್ಯದಾದ್ಯಂತ ಕಟ್ಟೆಚ್ಚರ ವಹಿಸಿರುವಂತೆಯೇ, ಶಿವಮೊಗ್ಗದಲ್ಲಿಯೂ ಸಹ ಹೈ ಅಲರ್ಟ್ ವಹಿಸಲಾಗಿದೆ.
ದೆಹಲಿ ಸ್ಫೋಟ ಹಿನ್ನೆಲೆಯಲ್ಲಿ ದೇಶದಾದ್ಯಂತ ಹೈಅಲರ್ಟ್ #HighAlert ಘೋಷಿಸಲಾಗಿದ್ದು, ರಾಜ್ಯದ ಎಲ್ಲ ನಗರಗಳಲ್ಲೂ ಸಹ ಕಟ್ಟೆಚ್ಚರ ವಹಿಸುವಂತೆ ಸಿಎಂ ಸಿದ್ದರಾಮಯ್ಯ ಸೂಚಿಸಿದ್ದರು. ಈ ಹಿನ್ನೆಲೆಯಲ್ಲಿ ಶಿವಮೊಗ್ಗದಲ್ಲೂ #Shivamogga ಸಹ ನಿನ್ನೆ ತಡರಾತ್ರಿಯಿಂದಲೇ ಕಟ್ಟೆಚ್ಚರ ವಹಿಸಲಾಗಿದ್ದು, ನಗರದಾದ್ಯಂತ ತಪಾಸಣೆಯನ್ನು ಹೆಚ್ಚಳ ಮಾಡಲಾಗಿದೆ.
ಎಲ್ಲೆಲ್ಲಿ ಪರಿಶೀಲನೆ?
ಶಿವಮೊಗ್ಗದ ಸರ್ಕಾರಿ ಬಸ್ ನಿಲ್ದಾಣ, ಖಾಸಗಿ ಬಸ್ ನಿಲ್ದಾಣ, ರೈಲ್ವೆ ನಿಲ್ದಾಣ, ಸಿಟಿ ಸೆಂಟರ್ ಮಾಲ್, ಸೇರಿದಂತೆ ಅತೀ ಹೆಚ್ಚು ಜನ ಸೇರುವ ಪ್ರದೇಶಗಳಲ್ಲಿ ತಪಾಸಣೆ ನಡೆಸಲಾಗಿದೆ.
ಅಲ್ಲದೇ, ರೈಲ್ವೆ ಹಾಗೂ ವಿಮಾನ ನಿಲ್ದಾಣದಲ್ಲಿ ಅಲರ್ಟ್ ಘೋಷಿಸಲಾಗಿದೆ.
ರೈಲ್ವೆ ಹಾಗೂ ವಿಮಾನ ನಿಲ್ದಾಣಕ್ಕೆ ಪ್ರವೇಶಿಸುವ ಪ್ರಯಾಣಿಕರ ಲಗೇಜ್’ಗಳ ತಪಾಸಣೆ ನಡೆಸುವಂತೆ ಪೊಲೀಸರಿಗೆ ಸೂಚನೆ ಬಂದಿದೆ. ಇನ್ನೊಂದೆಡೆ ಶಿವಮೊಗ್ಗ ವಿಮಾನ ನಿಲ್ದಾಣದ ಪ್ರವೇಶ ದ್ವಾರದಲ್ಲಿ ತಪಾಸಣೆ ಕಟ್ಟುನಿಟ್ಟಾಗಿ ಮಾಡಲು ಸೂಚಿಸಲಾಗಿದೆ ಎಂದು ವರದಿಯಾಗಿದೆ.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news




















