ಕಲ್ಪ ಮೀಡಿಯಾ ಹೌಸ್ | ಬೆಂಗಳೂರು/ಚಿತ್ತಾಪುರ |
RSS ವಿರುದ್ಧ ಮುಗಿಬಿದ್ದಿರುವ ಸಚಿವ ಪ್ರಿಯಾಂಕ್ ಖರ್ಗೆ ಪ್ರತಿನಿಧಿಸುವ ಚಿತ್ತಾಪುರ ಕ್ಷೇತ್ರದಲ್ಲಿ RSS ಪಥ ಸಂಚಲನ ನಡೆಸಲು ಹೈಕೋರ್ಟ್ ಅನುಮತಿ ನೀಡಿದೆ.
ನವೆಂಬರ್ 2 ರಂದು ನಗರದಲ್ಲಿ RSS ಪಥ ಸಂಚಲನ ನಡೆಸಲು ಅನುಮತಿ ಕೋರಿ ಅರ್ಜಿ ಸಲ್ಲಿಸಲಾಗಿತ್ತು. ಇದರ ವಿಚಾರಣೆ ನಡೆಸಿದ ನ್ಯಾಯಾಲಯ, ಅರ್ಜಿದಾರರ ಮನವಿಯನ್ನು ಪುರಸ್ಕರಿಸುವಂತೆ ಸೂಚನೆ ನೀಡಿದೆ.
ಜಿಲ್ಲಾಧಿಕಾರಿಗಳಿಗೆ ಅರ್ಜಿ ಸಲ್ಲಿಸಿ ಎಂದು ಅರ್ಜಿದಾರರಿಗೆ ಸೂಚನೆ ನೀಡಿದ ನ್ಯಾಯಾಲಯ, ವಿಚಾರಣೆಯನ್ನು ಅಕ್ಟೋಬರ್ 24ಕ್ಕೆ ಮುಂದೂಡಿದೆ.
ಸಚಿವ ಪ್ರಿಯಾಂಕ್ ಖರ್ಗೆ ಪ್ರತಿನಿಧಿಸುವ ವಿಧಾನಸಭಾ ಕ್ಷೇತ್ರ ಚಿತ್ತಾಪುರದಲ್ಲಿ RSS, ಭಾನುವಾರ ಬೃಹತ್ ಪಥಸಂಚಲನ ನಡೆಸಲು ಮುಂದಾಗುವ ಮೂಲಕ, ಶಕ್ತಿ ಪ್ರದರ್ಶನಕ್ಕೆ ಸಜ್ಜಾಗಿತ್ತು.
ನಗರದ ಮುಖ್ಯ ರಸ್ತೆಗಳಲ್ಲಿ ಅಳವಡಿಸಲಾಗಿದ್ದ ಕೇಸರಿ ಧ್ವಜ, ಭಗವಾಧ್ವಜ, ಬ್ಯಾನರ್, ಬಂಟಿಂಗ್‌ಗಳನ್ನೆಲ್ಲ ಅಲ್ಲಿನ ಪುರಸಭೆಯ ಸಿಬ್ಬಂದಿ ರಾತ್ರೋರಾತ್ರಿ ತೆರವುಗೊಳಿಸಿದ್ದರು. ತೆರವು ಖಂಡಿಸಿ ಚಿತ್ತಾಪುರ ಪುರಸಭೆಯ ಮುಖ್ಯಾಧಿಕಾರಿ ಕಚೇರಿ ಮುಂಭಾಗ ಶನಿವಾರ ಪ್ರತಿಭಟನೆ ನಡೆಸಲಾಗಿತ್ತು.
ಹೈಕೋರ್ಟ್ ಸೂಚನೆ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರ ಹಾಗೂ ಸಚಿವ ಪ್ರಿಯಾಂಕ್ ಖರ್ಗೆಗೆ ಹಿನ್ನಡೆ ಉಂಟಾಗಿದೆ.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news

















