ಕಲ್ಪ ಮೀಡಿಯಾ ಹೌಸ್ | ಮಂಗಳೂರು |
ಮಹೇಶ್ ಶೆಟ್ಟಿ ತಿಮರೋಡಿಯನ್ನು ಗಡಿಮಪಾರು ಮಾಡಿದ್ದ ಆದೇಶಕ್ಕೆ ಹೈಕೋರ್ಟ್ ಮಧ್ಯಂತರ ತಡೆ ನೀಡಿದ್ದು, ವಿಚಾರಣೆಯನ್ನು ಅ.8ಕ್ಕೆ ಮುಂದೂಡಿದೆ.
ತಮ್ಮ ಗಡಿಪಾರು ಆದೇಶ ರದ್ದು ಕೋರಿ ಕರ್ನಾಟಕ ಹೈಕೋರ್ಟ್’ಗೆ ತಿಮರೋಡಿ ಅರ್ಜಿ ಸಲ್ಲಿಸಿದ್ದರು. ಅರ್ಜಿಯನ್ನು ಕೈಗೆತ್ತಿಕೊಂಡ ನ್ಯಾ. ಸಿ.ಎಂ. ಪೂನಚ್ಚ ಅವರ ಏಕಸದಸ್ಯ ಪೀಠವು ಅರ್ಜಿ ವಿಚಾರಣೆ ನಡೆಸಿ ಆದೇಶ ಹೊರಡಿಸಿದೆ.
ಗಡಿಪಾರು ಆದೇಶಕ್ಕೆ ಮಧ್ಯಂತರ ತಡೆಯಾಜ್ಞೆ ನೀಡಿ ಹೈಕೋರ್ಟ್ ಪ್ರತಿವಾದಿಗಳಿಗೆ ನೋಟೀಸ್ ನೀಡಿದ್ದು, ನೋಟಿಸ್ ಜಾರಿ ಮಾಡಿ ಅ.8 ಕ್ಕೆ ವಿಚಾರಣೆ ಮುಂದೂಡಿದೆ.
ಸೆ.18 ರಂದು ತಿಮರೋಡಿಯನ್ನು ರಾಯಚೂರಿಗೆ ಗಡಿಪಾರು ಮಾಡಿ ಪುತ್ತೂರು ಎಸಿ ಸ್ಟೆಲ್ಲಾ ವರ್ಗೀಸ್ ಆದೇಶಿಸಿದ್ದರು. 2025 ರ ಸೆ.18 ರಿಂದ 2026ರ ಸೆ.17 ರ ವರೆಗೆ ಒಂದು ವರ್ಷದ ಅವಧಿಗೆ ಗಡಿಪಾರು ಮಾಡಿ ಆದೇಶಿಸಿದ್ದರು.
ಇದನ್ನು ಪ್ರಶ್ನಿಸಿ ಹೈಕೋರ್ಟ್ ಮೆಟ್ಟಿಲೇರಿದ ತಿಮರೋಡಿ ರಾಜ್ಯ ಸರ್ಕಾರ, ಪುತ್ತೂರು ಎಸಿ, ಡಿವೈಎಸ್ಪಿ ಬಂಟ್ವಾಳ, ಬೆಳ್ತಂಗಡಿ ಇನ್ಸ್ಪೆಕ್ಟರ್ ಪ್ರತಿವಾದಿಯಾಗಿಸಿದ್ದರು. ತಕ್ಷಣ ಗಡಿಪಾರು ಆದೇಶಕ್ಕೆ ಮಧ್ಯಂತರ ತಡೆ ನೀಡಿ ರದ್ದು ಪಡಿಸಲು ಅರ್ಜಿ ಸಲ್ಲಿಸಿದ್ದರು.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
Discussion about this post