ನವದೆಹಲಿ: ಪುಲ್ವಾಮಾ ದಾಳಿ ಹಾಗೂ ಇಂದು ಪುಲ್ವಾಮಾದಲ್ಲಿ ಉಗ್ರರು ಮತ್ತೆ ನಾಲ್ವರು ಯೋಧರನ್ನು ಹತ್ಯೆ ಮಾಡಿರುವ ಹಿನ್ನೆಲೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ನೇತೃತ್ವದಲ್ಲಿ ಉನ್ನತ ಮಟ್ಟದ ಸಭೆ ನಡೆಸಲಾಗಿದೆ.
ಭದ್ರತೆ ಕುರಿತಾಗಿ ಗೃಹ ಸಚಿವಾಲಯದಲ್ಲಿ ಉನ್ನತ ಮಟ್ಟದ ಸಭೆ ನಡೆಸಲಾಗಿತ್ತು. ಇದಾದ ನಂತರ ಗೃಹ ಸಚಿವ ರಾಜನಾಥ ಸಿಂಗ್, ಗೃಹ ಕಾರ್ಯದರ್ಶಿ ಸೇರಿದಂತೆ ಉನ್ನತ ಮಟ್ಟದ ಅಧಿಕಾರಿಗಳು ಪ್ರಧಾನಿಯವರನ್ನು ಭೇಟಿಯಾಗಿ ಚರ್ಚಿಸಿದ್ದಾರೆ ಎಂದು ವರದಿಯಾಗಿದೆ.
Delhi: Top officials arrive at Home Ministry for a high level meeting. #PulwamaTerroristAttack pic.twitter.com/Rcz3ZWZnNh
— ANI (@ANI) February 18, 2019
ಉಗ್ರರ ಉಪಟಳವನ್ನು ಹತ್ತಿಕ್ಕುವುದು, ಭದ್ರತೆಯನ್ನು ಮತ್ತಷ್ಟು ಹೆಚ್ಚಿಸುವುದು ಸೇರಿದಂತೆ ಪ್ರಮುಖ ವಿಚಾರಗಳ ಸಭೆಯಲ್ಲಿ ಚರ್ಚೆಯಾಗಿದೆ ಎಂದು ಹೇಳಲಾಗಿದ್ದು, ಮಹತ್ವ ನಿರ್ಧಾರಗಳನ್ನು ಕೈಗೊಳ್ಳಲಾಗಿದೆ ಎಂದು ಹೇಳಲಾಗಿದೆ.
ಸಭೆಯಲ್ಲಿ ರಾಷ್ಟಿಯ ಭದ್ರತಾ ಸಲಹೆಗಾರ ಅಜಿತ್ ಧೋವಲ್ ಸಹ ಉಪಸ್ಥಿತರಿದ್ದು, ಎಲ್ಲ ಬೆಳವಣಿಗೆಗಳ ಕುರಿತಾಗಿ ಪ್ರಧಾನಿಯವರಿಗೆ ವಿವರಿಸಿದ್ದಾರೆ.
ಈ ಸಭೆ ಅತ್ಯಂತ ಮಹತ್ವ ಪಡೆದುಕೊಂಡಿದ್ದು, ಕೇಂದ್ರ ಸರ್ಕಾರ ಮುಂದೆ ಯಾವ ಹೆಜ್ಜೆ ಇಡಲಿದೆ ಎಂಬ ಕುತೂಲಹ ಕೆರಳಿಸಿದೆ.
Discussion about this post