ಕಲ್ಪ ಮೀಡಿಯಾ ಹೌಸ್
ಶಿವಮೊಗ್ಗ: ಜಿಲ್ಲೆಯಲ್ಲಿ ಇಂದು 709 ಕೊರೋನಾ ಪಾಸಿಟಿವ್ ಪ್ರಕರಣಗಳು ಪತ್ತೆಯಾಗಿದ್ದು,15 ಮಂದಿ ಸಾವನ್ನಪ್ಪಿದ್ದಾರೆ.
ಈ ಕುರಿತಂತೆ ಜಿಲ್ಲಾಡಳಿತ ಮಾಹಿತಿ ಬಿಡುಗಡೆ ಮಾಡಿದ್ದು, ಜಿಲ್ಲೆಯಲ್ಲಿ ಇಂದು ಒಟ್ಟು 2363 ಮಂದಿಯ ಪರೀಕ್ಷೆ ನಡೆಸಲಾಗಿದ್ದು, 2063 ನೆಗೆಟಿವ್ ಹಾಗೂ 709 ಪಾಸಿಟಿವ್ ಪ್ರಕರಣಗಳು ಪತ್ತೆಯಾಗಿವೆ.
ಇಂದು 209 ಮಂದಿ ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದು, ಒಟ್ಟಾರೆಯಾಗಿ ಇಂದು 15 ಮಂದಿ ಸಾವಿಗೀಡಾಗಿದ್ದಾರೆ.
ಇಂದು 509 ಮಂದಿ ಕೋವಿಡ್ ಆಸ್ಪತ್ರೆಗೆ ದಾಖಲಾಗಿದ್ದು, ಕೋವಿಡ್ ಕೇರ್ ಸೆಂಟರ್’ನಲ್ಲಿ 118 ಮಂದಿ, ಖಾಸಗಿ ಆಸ್ಪತ್ರೆಯಲ್ಲಿ ಇಂದು 361 ಮಂದಿ ಚಿಕಿತ್ಸೆ ಪಡೆದಿದ್ದಾರೆ. ಇಂದು 2894 ಮಂದಿ ಹೋಮ್ ಐಸೋಲೇಶನ್’ನಲ್ಲಿ ಆಗಿದ್ದಾರೆ.
ಇನ್ನು, ಇಂದು 27 ವಿದ್ಯಾರ್ಥಿಗಳ ಸ್ಯಾಂಪಲ್ ಸಂಗ್ರಹಿಸಿದ್ದು, 12 ವಿದ್ಯಾರ್ಥಿಗಳಲ್ಲಿ ಪಾಸಿಟಿವ್ ಬಂದಿದೆ.
ತಾಲೂಕುವಾರು ವಿವರ:
ಶಿವಮೊಗ್ಗ: 241
ಭದ್ರಾವತಿ: 263
ಶಿಕಾರಿಪುರ: 014
ತೀರ್ಥಹಳ್ಳಿ: 042
ಸೊರಬ: 031
ಸಾಗರ: 042
ಹೊಸನಗರ: 049
ಇತರೆ ಜಿಲ್ಲೆ: 027
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9481252093 – info@kalpa.news

















