ಕಲ್ಪ ಮೀಡಿಯಾ ಹೌಸ್ | ಹಿಮಾಚಲ ಪ್ರದೇಶ |
ವಯನಾಡ್‌ನ ಭೂಕುಸಿತ ದುರಂತದ #Wayanad Landslide ಬೆನ್ನಲ್ಲೇ ಹಿಮಾಚಲ ಪ್ರದೇಶದಲ್ಲಿ ಕೂಡ ಮೇಘಸ್ಫೋಟ #Cloudburst ಸಂಭವಿಸಿರುವ ಘಟನೆ ವರದಿಯಾಗಿದೆ.
ಭಾರಿ ಮಳೆ ಪರಿಣಾಮ ಕುಲುವಿನ ನಿರ್ಮಲ್ ನಲ್ಲಿ ಸುಮಾರು 19 ಜನರು ನೀರಿನಲ್ಲಿ ಕೊಚ್ಚಿ ಹೋಗಿ, 35ಕ್ಕೂ ಅಧಿಕ ಜನರು ಕಣ್ಮರೆಯಾಗಿದ್ದಾರೆ. ಮಂಡಿ ಜಿಲ್ಲೆಯಲ್ಲಿ ಹಲವು ಮನೆ ಮತ್ತು ಜನರು ನೀರಿನಲ್ಲಿ ಕೊಚ್ಚಿಕೊಂಡು ಹೋಗಿದ್ದಾರೆ ಎನ್ನಲಾಗಿದೆ.
Also read: ಶಿವಮೊಗ್ಗ | ವಾಹನ ಸವಾರರೇ ಎಚ್ಚರ | ಈ ನಿಯಮ ಉಲ್ಲಂಘಿಸಿದರೆ ನಿರ್ದಾಕ್ಷಿಣ್ಯ ಕ್ರಮ
ಮೇಘಸ್ಫೋಟದಿಂದಾಗಿ ಮೂರು ಅಂತಸ್ತಿನ ಮನೆಯೊಂದು ಕುಸಿದು ಬಿದ್ದು ಕೊಚ್ಚಿ ಹೋಗಿರುವ ದೃಶ್ಯ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ.
ವಿಪತ್ತು ನಿರ್ವಹಣಾ ತಂಡವು ಸ್ಥಳಕ್ಕೆ ದೌಡಾಯಿಸಿದೆ. ಜಿಲ್ಲಾಧಿಕಾರಿ ಅನುಪಮ್ ಕಶ್ಯಪ್ ಮತ್ತು ಜಿಲ್ಲಾ ಪೊಲೀಸ್ ಮುಖ್ಯಸ್ಥ ಸಂಜೀವ್ ಗಾಂಧಿ ಸಹಿತ ಹಲವು ಉನ್ನತ ಅಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿದ್ದಾರೆ.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news 




















