ಕಲ್ಪ ಮೀಡಿಯಾ ಹೌಸ್ | ಹಿಮಾಚಲ ಪ್ರದೇಶ |
ವಿಧಾನಸಭಾ ಚುನಾವಣೆಯ ಮತ ಎಣಿಕೆ ಭರದಿಂದ ಸಾಗಿದ್ದು, ಬಿಜೆಪಿ ಹಾಗೂ ಕಾಂಗ್ರೆಸ್ BJP, Congress ನಡುವೆ ಭಾರೀ ತುರುಸಿನ ಸ್ಪರ್ಧೆ ನಡೆಯುತ್ತಿದ್ದು, ಕೇಜ್ರಿವಾಲ್ Kejriwal ಅವರ ಎಎಪಿ AAP ಖಾತೆ ತೆರೆಯುವಲ್ಲಿಯೇ ವಿಫಲವಾಗಿ ಅಡ್ಡಡ್ಡ ಮಲಗಿದೆ.
ಇಂದು ಮುಂಜಾನೆಯಿಂದಲೇ ಮತ ಎಣಿಕೆ ನಡೆಯುತ್ತಿದ್ದು, ಬಿಜೆಪಿ 30 ಹಾಗೂ ಕಾಂಗ್ರೆಸ್ 35 ಕ್ಷೇತ್ರಗಳಲ್ಲಿ ಮುನ್ನಡೆ ಕಾಯ್ದುಕೊಂಡಿದ್ದರೆ, ಅರವಿಂದ ಕೇಜ್ರಿವಾಲ್ ಅವರ ಎಎಪಿ ಮಾತ್ರ ಶೂನ್ಯ ಸಂಪಾದನೆ ಮಾಡಿ, ಭಾರೀ ಮುಖಭಂಗ ಅನುಭವಿಸಿದೆ. ಅಲ್ಲದೇ, ಮೂರು ಕ್ಷೇತ್ರದಲ್ಲಿ ಪಕ್ಷೇತರರು ಮುನ್ನಡೆ ಸಾಧಿಸಿದ್ದಾರೆ.
1985 ರ ನಂತರ ರಾಜ್ಯದಲ್ಲಿ ಅಧಿಕಾರದಲ್ಲಿದ್ದ ಪಕ್ಷ ಮತ್ತೊಮ್ಮೆ ಅಧಿಕಾರಕ್ಕೆ ಬಂದ ನಿದರ್ಶನವಿಲ್ಲ. ಆದರೆ ಆಡಳಿತಾರೂಢ ಬಿಜೆಪಿಯು ಪಿಎಂ ಮೋದಿಯ ಪ್ರಚಾರದಿಂದ ಭರವಸೆ ಹೊಂದಿತ್ತು. ಕೇಸರಿ ಪಕ್ಷವು ಈಗಾಗಲೇ ಉತ್ತರ ಪ್ರದೇಶ, ಗೋವಾ, ಅಸ್ಸಾಂ ಮತ್ತು ಉತ್ತರಾಖಂಡದಲ್ಲಿ ಅಧಿಕಾರಕ್ಕೆ ಮರಳಿದೆ. ಈಗ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆಪಿ ನಡ್ಡಾ ಅವರ ತವರು ರಾಜ್ಯವಾದ ಹಿಮಾಚಲ ಪ್ರದೇಶ ಕೂಡ ಬಿಜೆಪಿಗೆ ಬರಬಹುದು ಎಂದು ಆಶಿಸುತ್ತಿದೆ.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
Discussion about this post