ಕಲ್ಪ ಮೀಡಿಯಾ ಹೌಸ್ | ಹ್ಯಾಂಗ್ ಝೌ |
ಬರೋಬ್ಬರಿ 41 ವರ್ಷಗಳ ಬಳಿಕ ಏಷ್ಯನ್ ಗೇಮ್ಸ್’ನಲ್ಲಿ ಭಾರತ ಅತ್ಯದ್ಬುತ ಐತಿಹಾಸಿಕ ಸಾಧನೆ ಮಾಡಿದ್ದು, 2023ರ ಕ್ರೀಡಾಕೂಟದ ಕುದುರೆ ಸವಾರಿಯಲ್ಲಿ ಚಿನ್ನದ ಪದಕ ಲಭಿಸಿದೆ.
ಟೀಮ್ ಡ್ರೆಸ್ಸೇಜ್ ಈವೆಂಟ್’ನಲ್ಲಿ ಭಾರತ ತಂಡವು ಅಗ್ರಸ್ಥಾನಕ್ಕೇರಿ ಚಿನ್ನ ಪದಕವನ್ನು ಗೆದ್ದುಕೊಂಡಿದ್ದು, ಆ ಮೂಲಕ ಬರೊಬ್ಬರಿ 41 ವರ್ಷಗಳ ಬಳಿಕ ಭಾರತ ಕುದುರೆ ಸವಾರಿ ತಂಡ ಚಿನ್ನದ ಪದಕವನ್ನು ಮುಡಿಗೇರಿಸಿಕೊಂಡಿದೆ.
𝐆𝐎𝐋𝐃 🥇 𝐅𝐨𝐫 𝐓𝐡𝐞 𝐀𝐠𝐞𝐬 🏇#TeamIndia🇮🇳 #AsianGames2022 #IndiaAtAG22 pic.twitter.com/8w7yRz4M5c
— Doordarshan Sports (@ddsportschannel) September 26, 2023
1982 ರ ಬಳಿಕ ಭಾರತಕ್ಕೆ ಸಿಕ್ಕ ಮೊದಲ ಚಿನ್ನದ ಪದಕ ಇದಾಗಿದ್ದು, ಭಾರತೀಯ ಕ್ರೀಡಾಪ್ರೇಮಿಗಳ ಸಂಭ್ರಮ ಮುಗಿಲುಮುಟ್ಟಿದೆ.
ಟೀಮ್ ಡ್ರೆಸ್ಸೇಜ್ ಈವೆಂಟ್ನಲ್ಲಿ ಭಾರತ ತಂಡವು ಒಟ್ಟು 209.205 ಅಂಕಗಳೊಂದಿಗೆ ಅಗ್ರಸ್ಥಾನದಲ್ಲಿದ್ದರೆ, ಚೀನಾ 204.882 ರೊಂದಿಗೆ ಬೆಳ್ಳಿಯೊಂದಿಗೆ ಮತ್ತು ಹಾಂಗ್ ಕಾಂಗ್ ಚೀನಾ 204.852 ರೊಂದಿಗೆ 3ನೆಯ ಸ್ಥಾನದಲ್ಲಿ ಕಂಚಿನ ಪದಕ ಪಡೆದುಕೊಂಡಿದೆ.
#EquestrianExcellence at the 🔝
After 41 long years, Team 🇮🇳 clinches🥇in Dressage Team Event at #AsianGames2022
Many congratulations to all the team members 🥳🥳#Cheer4India#HallaBol#JeetegaBharat#BharatAtAG22 🇮🇳 pic.twitter.com/CpsuBkIEAw
— SAI Media (@Media_SAI) September 26, 2023
ಸುದೀಪ್ತಿ ಹಜೇಲಾ, ಹೃದಯ್ ವಿಪುಲ್ ಛೇಡಾ, ಅನುಷ್ ಗರ್ವಾಲಾ ಮತ್ತು ದಿವ್ಯಕೃತಿ ಸಿಂಗ್ ಅವರ ಭಾರತ ತಂಡವು ಕುದುರೆ ಸವಾರಿಯಲ್ಲಿ ಡ್ರೆಸ್ಸೇಜ್ ಸ್ಪರ್ಧೆಯಲ್ಲಿ ಭಾರತಕ್ಕೆ ಮೊದಲ ಚಿನ್ನದ ಪದಕವನ್ನು ಗೆಲ್ಲುವ ಮೂಲಕ ಇತಿಹಾಸವನ್ನು ಬರೆದಿದೆ.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
Discussion about this post