ಕಲ್ಪ ಮೀಡಿಯಾ ಹೌಸ್ | ಹೊಳಲೂರು |
ಹಲವು ದಿನಗಳಿಂದ ಆತಂಕಕ್ಕೆ ಮೂಡಿಸಿದ್ದ ಕರಡಿಯನ್ನು ಅರಣ್ಯ ಇಲಾಖೆ ಸೆರೆಹಿಡಿದಿದೆ,
ಹೊಳಲೂರಿನ ಮಾಬುಲೇಶ್ ರವರ ಅಡಿಕೆ ತೋಟದಲ್ಲಿ ಕರಡಿಯನ್ನು ಅರಣ್ಯ ಇಲಾಖೆಯವರು ಸೆರೆ ಹಿಡಿಯುವಲ್ಲಿ ಯಶಸ್ವಿಯಾಗಿದ್ದಾರೆ.
ಈ ಭಾಗದಲ್ಲಿ ಹಲವು ಬಾರಿ ಕಾಣಿಸಿಕೊಂಡಿದ್ದ ಕರಡಿ ಸ್ಥಳೀಯರಲ್ಲಿ ಆತಂಕ ಮೂಡಿಸಿತ್ತು. ಕರಡಿಯನ್ನು ಸೆರೆ ಹಿಡಿಯುವಂತೆ ಸ್ಥಳೀಯರು ಒತ್ತಾಯಿಸಿದ್ದರು.
ವಲಯ ಅರಣ್ಯ ಅಧಿಕಾರಿಗಳಾದ ಜೆ. ವಿಜಯಕುಮಾರ್ ಅವರ ಮಾರ್ಗದರ್ಶನದಲ್ಲಿ ಉಪವಲಯ ಅರಣ್ಯ ಅಧಿಕಾರಿಗಳು ವಸಂತ್ ಕುಮಾರ್ ಹಾಗೂ ಗಸ್ತು ಅರಣ್ಯ ಪಾಲಕರಾದ ಕೊಟ್ರೇಶ್ ದಾನಮ್ಮನವರ್ ತಂಡವು ಕರಡಿಯನ್ನು ಹಿಡಿದಿದೆ.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
Discussion about this post