ಕಲ್ಪ ಮೀಡಿಯಾ ಹೌಸ್ | ಹೊಳೆಹೊನ್ನೂರು |
ರಸ್ತೆ ಬದಿಯಲ್ಲಿ ನಡೆದುಕೊಂಡು ಹೋಗುತ್ತಿದ್ದ ವ್ಯಕ್ತಿಗೆ ವೇಗವಾಗಿ ಬಂದ ಕಾರು ಡಿಕ್ಕಿ ಹೊಡೆದ ಪರಿಣಾಮ ಪಾದಚಾರಿ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಇಲ್ಲಿನ ಕೆರೆಬೀರನಹಳ್ಳಿ ಹಾಗೂ ಮೂಡಲವಿಠಲಾಪುರದ ನಡುವೆ ನಡೆದಿದೆ.
ಮೃತ ವ್ಯಕ್ತಿಯನ್ನು ರಾಜಪ್ಪ ಎಂದು ಗುರುತಿಸಲಾಗಿದೆ.
ರಾಜಪ್ಪ ಅವರು ಮೂಡಲವಿಠಲಾಪುರದ ಕಡೆಯಿಂದ ರಸ್ತೆ ಬದಿಯಲ್ಲಿ ನಡೆದುಕೊಂಡು ಹೋಗುತ್ತಿದ್ದರು. ಈ ವೇಳೆ ಕೈಮರದ ಕಡೆಯಿಂದ ಹೊಳೆಹೊನ್ನೂರು #Holehonnur ಕಡೆಗೆ ವೇಗವಾಗಿ ಚಲಿಸುತ್ತಿದ್ದ ಕಾರು ರಾಜಪ್ಪ ಅವರಿಗೆ ಡಿಕ್ಕಿ ಹೊಡೆದಿದೆ.
ಡಿಕ್ಕಿಯ ಪರಿಣಾಮವಾಗಿ ತಲೆ, ಕೈಕಾಲಿಗೆ ಗಂಭೀರವಾಗಿ ಪೆಟ್ಟು ಬಿದ್ದ ಹಿನ್ನೆಲೆಯಲ್ಲಿ ರಾಜಪ್ಪ ಅವರು ಸ್ಥಳದಲ್ಲೇ ದುರ್ಮರಣವನ್ನಪ್ಪಿದ್ದಾರೆ.
ರಾಜಪ್ಪ ಅವರಿಗೆ ಡಿಕ್ಕಿ ಹೊಡೆದ ಕಾರು ಪಲ್ಟಿಯಾಗಿ ರಸ್ತೆ ಬದಿಗೆ ಬಿದ್ದಿದ್ದು, ಕಾರಿನಲ್ಲಿದ್ದವರಿಗೂ ಸಹ ಪೆಟ್ಟು ಬಿದ್ದಿದೆ.
ಕಾರು ಚಾಲಕನ ಅಜಾಗರೂಕತನದ ಚಾಲನೆಯೇ ಘಟನೆಗೆ ಕಾರಣ ಎಂದು ಹೇಳಲಾಗಿದೆ.
ರಾಜಪ್ಪ ಅವರ ಶವವನ್ನು ಮರಣೋತ್ತರ ಪರೀಕ್ಷೆ ನಡೆಸಿ, ಕುಟುಂಸ್ಥರಿಗೆ ಹಸ್ತಾಂತರಿಸಲಾಗಿದೆ ಎಂದು ತಿಳಿದುಬಂದಿದೆ.
ಹೊಳೆಹೊನ್ನೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news



















