ಕಲ್ಪ ಮೀಡಿಯಾ ಹೌಸ್ | ಹೊಳೆಹೊನ್ನೂರು |
ಹೊಳೆಹೊನ್ನೂರು ಸಮೀಪದ ಯಡೇಹಳ್ಳಿ ಗ್ರಾಮದಲ್ಲಿ ಅಪರಿಚಿತ ಸರಕು ಸಾಗಣೆ ವಾಹನ ಡಿಕ್ಕಿಯಿಂದಾಗಿ ಗಾಯಗೊಂಡಿದ್ದ ಬಿ.ಪುನೀತ್‌ರಾಜ್ (19) ಚಿಕಿತ್ಸೆ ಫಲಕಾರಿಯಾಗದೆ ನಿನ್ನೆ ಮೃತಪಟ್ಟಿದ್ದಾನೆ.
ಗ್ರಾಮದಲ್ಲಿ ರಾಷ್ಟ್ರೀಯ ಹೆದ್ದಾರಿ ದಾಟುವಾಗ ಅಪರಿಚಿತ ವಾಹನ ಡಿಕ್ಕಿ ಹೊಡಿದಿದ್ದು, ತಿವ್ರ ಗಾಯಗೊಂಡಿದ್ದ ಪುನೀತ್‌ರಾಜ್‌ನನ್ನು ಚಿಕಿತ್ಸೆಗಾಗಿ ಮಣಿಪಾಲದ ಆಸ್ಪತ್ರೆಗೆ ದಾಖಲಿಸಲಾಗಿತ್ತು. ರಕ್ತಸ್ರಾವವಾಗಿ ಮಿದುಳು ನಿಷ್ಕ್ರಿಯವಾಗಿದೆ. ಲೀವರ್‌ಗೂ ಗಾಯವಾಗಿದೆ ಎಂದು ವೈದ್ಯರು ತಿಳಿಸಿದ್ದರು. ಆಗ ಪೋಷಕರು ಮೆಗ್ಗಾನ್ ಆಸ್ಪತ್ರೆಗೆ ಕರೆತಂದು ತೀವ್ರ ನಿಗಾ ಘಟಕದಲ್ಲಿ ಚಿಕಿತ್ಸೆ ಕೊಡಲಾಗಿತ್ತು.
ನೇತ್ರದಾನ
ಮನೆಗೆ ಆಶ್ರಯ ಆಗಬೇಕಿದ್ದ ಮಗ ಬದುಕುಳಿಯುವ ಸಾಧ್ಯತೆ ಕ್ಷೀಣಿಸಿದ್ದರಿಂದ ಕೋಮಾ ಸ್ಥಿತಿಯಲ್ಲಿದ್ದಾಗಲೇ ಮಗನ ಕಣ್ಣುಗಳನ್ನು ದಾನ ಮಾಡಿ ಪಾಲಕರು ನೋವಿನಲ್ಲೂ ಸಾರ್ಥಕತೆ ಮೆರೆದಿದ್ದಾರೆ.
ಮೃತನ ಜಮೀನಿನಲ್ಲಿ ಮಂಗಳವಾರ ಅಂತ್ಯಕ್ರಿಯೆ ನೆರವೇರಿತು. ಹೊಳೆಹೊನ್ನೂರು ಪೊಲೀಸರು ಸಿಸಿ ಕ್ಯಾಮರಾ ದೃಶ್ಯಾವಳಿ ಆಧರಿಸಿ ಅಪರಿಚಿತ ವಾಹನದ ಜಾಡು ಪತ್ತೆಮಾಡಲು ತಂಡ ರಚಿಸಿದ್ದಾರೆ.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
Discussion about this post