ಕಲ್ಪ ಮೀಡಿಯಾ ಹೌಸ್ | ಹೊಳೆಹೊನ್ನೂರು |
ರಸ್ತೆ ದಾಟುವಾಗ ವಾಹನ ಡಿಕ್ಕಿ ಹೊಡೆದ ಪರಿಣಾಮ ವ್ಯಕ್ತಿಯೋರ್ವರ ಎರಡು ಪಾದಗಳು ಮುರಿದಿರುವ ಘಟನೆ ಕೈಮರ ಗ್ರಾಮದಲ್ಲಿ ನಡೆದಿದೆ.
ತಿಪ್ಪೇರುದ್ರ ಸ್ವಾಮಿ ಗಾಯಗೊಂಡವರು. ಯಡೇಹಳ್ಳಿ ಮತ್ತು ಕೈಮರ ಗ್ರಾಮಗಳ ಮಧ್ಯೆ ಕೈಮರ ಸರ್ಕಲ್‌ನಲ್ಲಿರುವ ಅಂಗಡಿಯಲ್ಲಿ ಟೀ ಕುಡಿಯಲು ಬೈಕ್ ನಿಲ್ಲಿಸಿ, ರಸ್ತೆ ದಾಟುವಾಗ ಶಿವಮೊಗ್ಗದಿಂದ ಚನ್ನಗಿರಿ ಕಡೆಗೆ ತೆರಳುತ್ತಿದ್ದ ವಾಹನ ಅವರಿಗೆ ಡಿಕ್ಕಿ ಹೊಡೆದಿದೆ ಎನ್ನಲಾಗಿದೆ.
ಗಂಭೀರ ಗಾಯಗೊಂಡು ಪ್ರಜ್ಞಾಹೀನ ಸ್ಥಿತಿಯಲ್ಲಿದ್ದ ತಿಪ್ಪೇರುದ್ರ ಸ್ವಾಮಿ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಘಟನೆ ಕುರಿತು ಹೊಳೆಹೊನ್ನೂರು ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news 




















