ಕಲ್ಪ ಮೀಡಿಯಾ ಹೌಸ್ | ಶಿವಮೊಗ್ಗ |
ಭಾರೀ ಮಳೆಯ ಹಿನ್ನೆಲೆಯಲ್ಲಿ ಮುಂಜಾಗ್ರತಾ ಕ್ರಮವಾಗಿ ಜಿಲ್ಲೆಯಾದ್ಯಂತ ಆ.18ರ ನಾಳೆ ಶಾಲಾ ಕಾಲೇಜುಗಳಿಗೆ ರಜೆ ಘೋಷಣೆ ಮಾಡಲಾಗಿದೆ.
ಈ ಕುರಿತಂತೆ ಜಿಲ್ಲಾಧಿಕಾರಿ ಗುರುದತ್ತ ಹೆಗಡೆ ಅವರು ಆದೇಶ ಹೊರಡಿಸಿದ್ದು, ಜಿಲ್ಲೆಯಲ್ಲಿ ಭಾರೀ ಮಳೆ ಮುಂದುವರೆದಿದೆ. ಭಾರೀ ಮಳೆ ಮುಂದುವರೆಯುವ ಮುನ್ಸೂಚನೆಯನ್ನು ಹವಾಮಾನ ಇಲಾಖೆ ನೀಡಿರುವ ಹಿನ್ನೆಲೆಯಲ್ಲಿ ರಜೆ ಘೋಷಣೆ ಮಾಡಲಾಗಿದೆ ಎಂದಿದ್ದಾರೆ.
ಮುಂಜಾಗ್ರತಾ ಕ್ರಮವಾಗಿ ಅಂಗನವಾಡಿ, ಶಾಲೆ ಹಾಗೂ ಪದವಿ ಪೂರ್ವ ಕಾಲೇಜು ಹಾಗೂ ಪದವಿ ಕಾಲೇಜುಗಳಿಗೂ ಸಹ ರಜೆ ಘೋಷಣೆ ಮಾಡಲಾಗಿದೆ.
ತೀರ್ಥಹಳ್ಳಿಯ ತಾಲೂಕಿನಲ್ಲಿ ನಾಳೆ ಶಾಲಾ ಕಾಲೇಜುಗಳಿಗೆ ರಜೆ ಘೋಷಣೆ ಮಾಡಲಾಗಿದೆ.
ಈ ಕುರಿತಂತೆ ರಜೆ ಘೋಷಣೆ ಮಾಡಿರುವ ತಹಶೀಲ್ದಾರ್ ರಂಜಿತ್ ಆದೇಶ ಹೊರಡಿಸಿದ್ದಾರೆ.
ಎಲ್ಲಾ ಶಾಲಾ, ಕಾಲೇಜು ಹಾಗೂ ಅಂಗನವಾಡಿಗಳಿಗೆ ರಜೆ ಘೋಷಣೆ ಮಾಡಲಾಗಿದ್ದು, ಭಾರೀ ಮಳೆ ಮುಂದುವರೆದಿರುವ ಹಿನ್ನೆಲೆಯಲ್ಲಿ ಮುಂಜಾಗ್ರತಾ ಕ್ರಮವಾಗಿ ರಜೆ ಘೋಷಣೆ ಮಾಡಲಾಗಿದೆ ಎಂದಿದ್ದಾರೆ.ಆಗುಂಬೆ ಸಮೀಪದ ನಾಬಳ ಬಳಿ ರಸ್ತೆ ಬಂದ್..!
ಆಶ್ಲೇಷ ಮಳೆ ಹಾಗೂ ಮಘೆ ಮಳೆಯ ಆರ್ಭಟಕ್ಕೆ ನದಿ ಕೊಳ್ಳಗಳು ತುಂಬಿ ಹರಿಯುತ್ತಿದ್ದು ಮಾಲತಿ ನದಿಯ ನೀರಿನ ಮಟ್ಟ ಹೆಚ್ಚಳವಾಗಿದ್ದು, ಆಗುಂಬೆ ಸಮೀಪದ ನಾಬಳ ಬಳಿಯ ರಸ್ತೆ ಸಂಚಾರ ಬಂದ್ ಆಗಿದೆ.
ಹೋನ್ನೆತಾಳು ಗ್ರಾಮ ಪಂಚಾಯತ್ ವ್ಯಾಪ್ತಿಯ ನಾಬಳ ಬಳಿ ರಸ್ತೆ ಬಂದ್ ಆಗಿದ್ದು ರಸ್ತೆ ಮೇಲೆ ನೀರು ಹರಿಯುತ್ತಿದೆ.
ರಾತ್ರಿಯ ಸಮಯದಲ್ಲಿ ಓಡಾಟ ನಡೆಸುವ ಸಾರ್ವಜನಿಕರಿಗೆ ತೊಂದರೆ ಆಗಬಾರದು ಎಂಬ ಕಾರಣದಿಂದ ಸ್ಥಳೀಯರಾದ ಚಂದ್ರಹಾಸ್ ಮತ್ತು ಸ್ನೇಹಿತರು ರಸ್ತೆಗೆ ಬ್ಯಾರಿಕೆಡ್ ಹಾಕಿದ್ದಾರೆ. ಕಳೆದ ತಿಂಗಳ 26 ರಂದು ನಾಬಳ ರಸ್ತೆ ಬಂದ್ ಆಗಿತ್ತು. ಈಗ ಮಳೆಯಿಂದ ಎರಡನೇ ಬಾರಿ ಬಂದ್ ಆಗುತ್ತಿದೆ.
ಕೊಪ್ಪ, ಶೃಂಗೇರಿ ಕಮ್ಮರಡಿ, ಆಗುಂಬೆ ಭಾಗದಲ್ಲಿ ಬಾರಿ ಮಳೆಯಾಗುತ್ತಿದ್ದು ಜನ ಜೀವನ ಅಸ್ತವ್ಯಸ್ತಗೊಂಡಿದೆ. ಗದ್ದೆ ನೆಟ್ಟಿ ಮಾಡಿದ್ದ ರೈತರು ಮಳೆಯ ಆರ್ಭಟ ನೋಡಿ ಕಂಗಲಾಗಿದ್ದಾರೆ. ನಾಳೆ ಚಿಕ್ಕಮಗಳೂರು ಜಿಲ್ಲೆಯ ಕೆಲವು ಶಾಲೆ ಕಾಲೇಜುಗಳಿಗೆ ರಜೆ ನೀಡಲಾಗಿದೆ.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
Discussion about this post