ಕಲ್ಪ ಮೀಡಿಯಾ ಹೌಸ್ | ಉಡುಪಿ |
ಶ್ರೀಕೃಷ್ಣ ಮಠದಲ್ಲಿ ನಡೆಯಲಿರುವ ಲಕ್ಷಕಂಠ ಗೀತಾ ಪಾರಾಯಣದಲ್ಲಿ ಭಾಗವಹಿಸಲು ಪ್ರಧಾನಿ ನರೇಂದ್ರ ಮೋದಿಯವರು ಆಗಮಿಸುತ್ತಿರುವ ಹಿನ್ನೆಲೆಯಲ್ಲಿ ನ.28ರಂದು ಉಡುಪಿ, ಮಲ್ಪೆ ಹಾಗೂ ಮಣಿಪಾಲ ಠಾಣಾ ವ್ಯಾಪ್ತಿಯ ಶಾಲೆಗಳಿಗೆ ರಜೆ ಘೋಷಣೆ ಮಾಡಲಾಗಿದೆ.
ಈ ಕುರಿತಂತೆ ಜಿಲ್ಲಾಧಿಕಾರಿಯವರು ಆದೇಶ ಹೊರಡಿಸಿದ್ದು, ಪ್ರಧಾನಿಯವರ ಸುರಕ್ಷತೆ, ಭದ್ರತೆ ಹಾಗೂ ಶಿಷ್ಟಾಚಾರ ಪಾಲಿಸುವ ಉದ್ದೇಶದಿಂದ ನ.28ರಂದು ಉಡುಪಿ ಮಲ್ಪೆ ಮಣಿಪಾಲ ಠಾಣಾ ವ್ಯಾಪ್ತಿಯ ಅಂಗನವಾಡಿ, ಪ್ರಾಥಮಿಕ, ಪ್ರೌಢಶಾಲೆಗಳಿಗೆ ರಜೆ ಘೋಷಿಸಲಾಗಿದೆ ಎಂದು ತಿಳಿಸಿದ್ದಾರೆ.

ಪ್ರಧಾನ ಮಂತ್ರಿಯವರು ದಿನಾಂಕ: 28.11.2025 ರಂದು ಉಡುಪಿ ಜಿಲ್ಲೆಯ ಶ್ರೀ ಕೃಷ್ಣಮಠಕ್ಕೆ ಭೇಟಿ ನೀಡುವ ಸಂದರ್ಭದಲ್ಲಿ ನಿಯಮಾನುಸಾರ ಶಿಷ್ಟಾಚಾರವನ್ನು ಪಾಲಿಸಬೇಕಾಗಿರುತ್ತದೆ. ಅಲ್ಲದೇ, ಪ್ರಧಾನಮಂತ್ರಿಯವರ ಜಿಲ್ಲಾ ಭೇಟಿ ಸಂದರ್ಭದಲ್ಲಿ ಕೇಂದ್ರ ಸಚಿವರು, ರಾಜ್ಯಪಾಲರು, ಮುಖ್ಯಮಂತ್ರಿಗಳು, ರಾಜ್ಯ ಸಚಿವರುಗಳು ಹಾಗೂ ಮುಖ್ಯ ಕಾರ್ಯದರ್ಶಿಗಳು ಬರುವ ಸಾಧ್ಯತೆ ಇರುತ್ತದೆ. ಹೀಗಾಗಿ, ಸುರಕ್ಷತೆ, ಭದ್ರತೆ ಹಾಗೂ ಸೂಕ್ತ ಶಿಷ್ಟಾಚಾರ ಪಾಲಿಸಲು ದಿನಾಂಕ:28.11.2025 ರಂದು ಕಾರ್ಯಕ್ರಮ ಸುಗಮವಾಗಿ ಜರುಗಲು ಮತ್ತು ಶಿಸ್ತು, ಶಾಂತಿ ಮತ್ತು ಸುವ್ಯವಸ್ಥೆ ಕಾಪಾಡುವ ಸಲುವಾಗಿ ಕಾರ್ಯಕ್ರಮಗಳನ್ನು ಸುಸೂತ್ರವಾಗಿ ಮತ್ತು ದೋಷರಹಿತವಾಗಿ ನಡೆಸಲು ಅಗತ್ಯ ಕ್ರಮಗಳನ್ನು ಕೈಗೊಳ್ಳುವಂತೆ ಪೋಲೀಸ್ ಅಧೀಕ್ಷಕರು, ಜಿಲ್ಲಾ ಪೋಲೀಸ್, ಉಡುಪಿ ಇವರು ಉಲ್ಲೇಖ(2)ರಂತೆ ಕೋರಿರುತ್ತಾರೆ.
ಈ ಹಿನ್ನೆಲೆಯಲ್ಲಿ ಪ್ರಧಾನ ಮಂತ್ರಿಯವರ ಉಡುಪಿ ಭೇಟಿ ಸಂದರ್ಭದಲ್ಲಿ ಶಾಲಾ ಮಕ್ಕಳ ಸಂಚಾರಕ್ಕೆ ತೊಡಕು ಉಂಟಾಗುವ ಸಾಧ್ಯತೆಗಳಿರುವುದರಿಂದ, ಶಾಲಾ ಮಕ್ಕಳ ಸುರಕ್ಷತೆ ಹಾಗೂ ಸಾರ್ವಜನಿಕ ಹಿತದೃಷ್ಟಿಯಿಂದ ಮುಂಜಾಗೃತಾ ಕ್ರಮವಾಗಿ ಉಡುಪಿ ನಗರ ಠಾಣಾ ವ್ಯಾಪ್ತಿಯ, ಮಲ್ಪೆ ಠಾಣಾ ವ್ಯಾಪ್ತಿಯ ಮತ್ತು ಮಣಿಪಾಲ ಠಾಣಾ ವ್ಯಾಪ್ತಿಯಲ್ಲಿ ಬರುವ ಅಂಗನವಾಡಿ, ಪ್ರಾಥಮಿಕ ಮತ್ತು ಪ್ರೌಢಶಾಲೆಗಳಿಗೆ 28/11/2025 ರಂದು ಒಂದು ದಿನದ ಮಟ್ಟಿಗೆ ರಜೆಯನ್ನು ಘೋಷಿಸಿ ಆದೇಶಿಸಲಾಗಿದೆ ಎಂದು ಉಲ್ಲೇಖಿಸಲಾಗಿದೆ.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news











Discussion about this post