ಕಲ್ಪ ಮೀಡಿಯಾ ಹೌಸ್ | ಶಿವಮೊಗ್ಗ |
ಭಾರೀ ಮಳೆ ಮುಂದುವರೆದಿರುವ ಹಿನ್ನೆಲೆಯಲ್ಲಿ ಜಿಲ್ಲೆಯ ತೀರ್ಥಹಳ್ಳಿ, ಹೊಸನಗರ ಹಾಗೂ ಸಾಗರ ತಾಲೂಕಿನ ಎಲ್ಲ ಶಾಲಾ ಕಾಲೇಜುಗಳಿಗೆ ಜುಲೈ 27ರ ಶನಿವಾರ ರಜೆ ಘೋಷಣೆ ಮಾಡಲಾಗಿದೆ.
ಈ ಕುರಿತಂತೆ ಆದೇಶ ಹೊರಡಿಸಿರುವ ಆಯಾ ತಹಶೀಲ್ದಾರ್ ಅವರು, ಭಾರೀ ಮಳೆ ಮುಂದುವರೆದಿರುವ ಕಾರಣ ಮುಂಜಾಗ್ರತಾ ಕ್ರಮವಾಗಿ ಸಾಗರ ಹಾಗೂ ಸೊರಬ ತಾಲೂಕಿನ ಎಲ್ಲ ಅಂಗನವಾಡಿ, ಸರ್ಕಾರಿ, ಅನುದಾನಿತ ಹಾಗೂ ಖಾಸಗಿ ಶಾಲಾ ಕಾಲೇಜುಗಳಿಗೆ ರಜೆ ಘೋಷಣೆ ಮಾಡಲಾಗಿದೆ ಎಂದು ತಿಳಿಸಿದ್ದಾರೆ.
ಜಿಲ್ಲೆಯ ಇನ್ನುಳಿದ ತಾಲೂಕುಗಳ ವಿವರ ಇನ್ನೂ ದೊರೆಯಬೇಕಿದೆ.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news













Discussion about this post