ಕಲ್ಪ ಮೀಡಿಯಾ ಹೌಸ್ | ಶಿವಮೊಗ್ಗ |
ಶಿವಮೊಗ್ಗ ಹಾಗೂ ಭದ್ರಾವತಿ ಸೇರಿ 5 ತಾಲೂಕಿನಾದ್ಯಂತ ವ್ಯಾಪಕ ಮಳೆ ಸುರಿಯುತ್ತಿರುವ ಹಿನ್ನೆಲೆಯಲ್ಲಿ ಜುಲೈ 26ರಂದು ಶಾಲಾ ಕಾಲೇಜುಗಳಿಗೆ ರಜೆ ಘೋಷಣೆ ಮಾಡಲಾಗಿದೆ.
ಈ ಕುರಿತಂತೆ, ಐದೂ ತಾಲೂಕಿನ ತಹಶೀಲ್ದಾರ್ ಆದೇಶ ಹೊರಡಿಸಿದ್ದಾರೆ.ಶಿವಮೊಗ್ಗ, ಭದ್ರಾವತಿ, ಶಿಕಾರಿಪುರ, ಹೊಸನಗರ ಹಾಗೂ ಸಾಗರ ತಾಲೂಕಿನಾದ್ಯಂತ ವ್ಯಾಪಕವಾಗಿ ಮಳೆ ಸುರಿಯುತ್ತಿರುವ ಹಾಗೂ ಶೀತ ವಾತಾವರಣ ಹಿನ್ನೆಲೆಯಲ್ಲಿ ಮುಂಜಾಗ್ರತಾ ದೃಷ್ಟಿಯಿಂದ ಶಿವಮೊಗ್ಗ ತಾಲೂಕಿನ ಎಲ್ಲಾ ಅಂಗನವಾಡಿ ಕೇಂದ್ರಗಳು, ಪ್ರಾಥಮಿಕ ಶಾಲೆಗಳು ಮತ್ತು ಪ್ರೌಢಶಾಲೆ ಹಾಗೂ ಕಾಲೇಜುಗಳಿಗೆ ದಿನಾಂಕ 26.7.2025 ರ ಶನಿವಾರದಂದು ರಜೆ ಘೋಷಿಸಿದೆ.
ಸದರಿ ರಜಾ ಅವಧಿಯ ಶೈಕ್ಷಣಿಕ ಪಠ್ಯಗಳನ್ನು ಮುಂದಿನ ರಜೆಯ ದಿನಗಳಲ್ಲಿ ಸರಿ ಹೊಂದಿಸಿಕೊಳ್ಳಲು ಸಂಬAಧಿತ ಶಾಲಾ ಮುಖ್ಯಸ್ಥರುಗಳಿಗೆ ತಿಳಿಸಲಾಗಿದೆ.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
Discussion about this post