ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ
ನವದೆಹಲಿ: ನಾನು ಯಾವುದೇ ಕಾಯಿಲೆಯಿಂದ ಬಳಲುತ್ತಿಲ್ಲ. ಆರೋಗ್ಯವಾಗಿಯೇ ಇದ್ದೇನೆ. ವದಂತಿಗಳೆಲ್ಲಾ ಸುಳ್ಳು…
ಇದು ಕೇಂದ್ರ ಗೃಹ ಸಚಿವ ಅಮಿತ್ ಶಾ ನೀಡಿರುವ ಸ್ಪಷ್ಟೀಕರಣ.
मेरे स्वास्थ्य की चिंता करने वाले सभी लोगों को मेरा संदेश। pic.twitter.com/F72Xtoqmg9
— Amit Shah (@AmitShah) May 9, 2020
ಗೃಹ ಸಚಿವರು ಅನಾರೋಗ್ಯದಿಂದ ಬಳಲುತ್ತಿದ್ದಾರೆ ಎಂಬ ವದಂತಿ ಹಿನ್ನೆಲೆಯಲ್ಲಿ ಸಾಮಾಜಿಕ ಜಾಲತಾಣದ ಮೂಲಕ ಸ್ಪಷ್ಟನೆ ನೀಡಿರುವ ಅವರು, ಯಾವುದೇ ಕಾಯಿಲೆಯಿಂದ ಬಳಲುತ್ತಿಲ್ಲ, ಸಂಪೂರ್ಣವಾಗಿ ಆರೋಗ್ಯದಿಂದ ಇದ್ದೇನೆ. ಅನೇಕ ಸಾಮಾಜಿಕ ಜಾಲತಾಣ ಬಳಕೆದಾರರು ತಮ್ಮ ಆರೋಗ್ಯದ ಬಗ್ಗೆ ಇಲ್ಲ ಸಲ್ಲದ ವದಂತಿಗಳನ್ನು ಹರಡುತ್ತಿದ್ದಾರೆ. ಕೆಲವರಂತೂ ನಿಧನವಾಗಿರುವುದಾಗಿ ಪ್ರಾರ್ಥಿಸಿದ್ದಾರೆ ಎಂದಿದ್ದಾರೆ.
Get in Touch With Us info@kalpa.news Whatsapp: 9481252093
Discussion about this post