ನವದೆಹಲಿ: ಸಲಿಂಗಕಾಮ ಅಪರಾಧವಲ್ಲಿ ಎಂದು ಸುಪ್ರೀಂ ಕೋರ್ಟ್ ನೀಡಿರುವ ತೀರ್ಪು ಮಾನವೀಯತೆ ಹಾಗೂ ಸಮಾನಹಕ್ಕುಗಳಿಗೆ ದೊರೆತ ದೊಡ್ಡ ಜಯ ಎಂದು ಬಾಲಿವುಡ್ ನಿರ್ಮಾಪಕ ಕರಣ್ ಜೋಹರ್ ಹೇಳಿದ್ದಾರೆ.
ಸುಪ್ರೀಂ ಕೋರ್ಟ್ ತೀರ್ಪಿನ ಹಿನ್ನೆಲೆಯಲ್ಲಿ ಟ್ವೀಟ್ ಮಾಡಿರುವ ಅವರು, ಸೆಕ್ಷನ್ 377ವಿರುದ್ಧ ಸಲ್ಲಿಸಿದ್ದ ಅರ್ಜಿಯನ್ನು ನ್ಯಾಯಾಲಯ ವಜಾಗೊಳಿಸಿದ್ದು ನನಗೆ ಹೆಮ್ಮೆ ಎನಿಸುತ್ತದೆ. ಈ ಐತಿಹಾಸಿಕ ತೀರ್ಪಿನಿಂದ ದೇಶಕ್ಕೆ ಆಕ್ಸಿಜನ್ ಸಿಕ್ಕಂತಾಗಿದೆ ಎಂದಿದ್ದಾರೆ.
Historical judgment!!!! So proud today! Decriminalising homosexuality and abolishing #Section377 is a huge thumbs up for humanity and equal rights! The country gets its oxygen back! 👍👍👍💪💪💪🙏🙏🙏 pic.twitter.com/ZOXwKmKDp5
— Karan Johar (@karanjohar) September 6, 2018
ಮುಖ್ಯನ್ಯಾಯಮೂರ್ತಿ ದೀಪಕ್ ಮಿಶ್ರಾ, ನ್ಯಾ. ರೋಹಿಂಟನ್ ಎಫ್.ನಾರಿಮನ್, ಎ.ಎಮ್. ಖಾನ್ವಿಲ್ಕರ್, ಡಿ.ವೈ. ಚಂದ್ರಚೂಡ್ ಹಾಗೂ ಇಂದು ಮಲ್ಹೋತ್ರಾ ಅವರನ್ನು ಒಳಗೊಂಡ ಸಾಂವಿಧಾನಿಕ ಪೀಠ, ಭಾರತದಲ್ಲಿ ಸಲಿಂಗಕಾಮ ಅಪರಾಧವೋ ಅಥವಾ ಇಲ್ಲವೋ ಎಂದು ಪರಿಗಣಿಸುವ, ಭಾರತೀಯ ದಂಡಸಂಹಿತೆ(ಐಪಿಸಿ) ಸೆಕ್ಷನ್ 377ರ ವಿರುದ್ಧ ಸಲ್ಲಿಸಲಾಗಿದ್ದ ಅರ್ಜಿ ವಿಚಾರಣೆ ನಡೆಸಿ ಈ ಮಹತ್ವದ ತೀರ್ಪು ನೀಡಿದೆ.
ಐಪಿಸಿ ಸೆಕ್ಷನ್ 377ರ ವಿಧಿಗೆ ಯಾವುದೇ ತರ್ಕವಿಲ್ಲ. ವೈವಿಧ್ಯತೆಯ ಶಕ್ತಿಯನ್ನು ಗೌರವಿಸುವ ಅಗತ್ಯವಿದೆ. ಅಂತೆಯೇ ಪೂರ್ವಾಗ್ರಹಗಳಿಗೆ ಇತಿಶ್ರೀ ಹಾಡಬೇಕಾಗಿದ್ದು, ಸಲಿಂಗಕಾಮಿಗಳಿಗೆ ಬೇರೆಯವರಂತೆಯೇ ಹಕ್ಕಿದೆ ಎಂದು ತೀರ್ಪಿನಲ್ಲಿ ಹೇಳಿದೆ.
Discussion about this post