ಕಲ್ಪ ಮೀಡಿಯಾ ಹೌಸ್ | ಹೊನ್ನಾವರ |
ಅಪರಿಚಿತ ವಾಹನ ಡಿಕ್ಕಿ ಹೊಡೆದ ಪರಿಣಾಮ ಬೈಕ್ ಸವಾರ ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ಹೊನ್ನಾವರ ಶರಾವತಿ ಸೇತುವೆ ಮೇಲೆ ನಡೆದಿದೆ.
ಪಟ್ಟಣದ ನಿವಾಸಿ ಕಾರ್ತಿಕ ಶೇಟ್ ಮೃತಪಟ್ಟವರು ಎನ್ನಲಾಗಿದ್ದು, . ಶರಾವತಿ ಸೇತುವೆಯ ಮೇಲೆ ದ್ವಿಚಕ್ರ ವಾಹನದಲ್ಲಿ ತೆರಳುತ್ತಿದ್ದ ಕಾರ್ತಿಕ್ಗೆ ವಾಹನ ಡಿಕ್ಕಿಯಾಗಿ, ತಲೆಯ ಭಾಗಕ್ಕೆ ಗಂಭೀರ ಗಾಯವಾಗಿ, ಸ್ಥಳದಲ್ಲಿ ಅಸುನೀಗಿದ್ದಾರೆ. ಡಿಕ್ಕಿ ಹೊಡೆದ ವಾಹನದ ಚಾಲಕ ನಿಲ್ಲಿಸದೇ ಪರಾರಿಯಾಗಿದ್ದಾನೆ.
ಹೊನ್ನಾವರ ಪೊಲೀಸ್ ಠಾಣಿಯಲ್ಲಿ ಪ್ರಕರಣ ದಾಖಲಾಗಿದ್ದು, ತನಿಖೆ ಮುಂದುವರೆದಿದೆ.
Also read: ರಾಜ್ಯ ಪೌರನೌಕರರ ಸಂಘದ ಜಂಟಿ ಕಾರ್ಯದರ್ಶಿಯಾಗಿ ಟಿ ಜಯಪ್ಪ ಅವಿರೋಧವಾಗಿ ಆಯ್ಕೆ
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
Discussion about this post