ಕಲ್ಪ ಮೀಡಿಯಾ ಹೌಸ್ | ಅಪಘಾತ |
ಭೀಕರ ರಸ್ತೆ ಅಪಘಾತವೊಂದರಲ್ಲಿ ಪತಿಯ ಕಣ್ಣೆದುರೇ ಪತ್ನಿಯ ದೇಹ ಛಿದ್ರ ಛಿದ್ರವಾದ ದಾರುಣ ಘಟನೆ ಉತ್ತರ ಪ್ರದೇಶದ ಹಾಪುರ್ ಜಿಲ್ಲೆಯಲ್ಲಿ ನಡೆದಿದೆ.
ಮೃತ ಮಹಿಳೆಯಲ್ಲಿ ಅನುರಾಧ(35) ಹಾಗೂ ಆಕೆಯ ಪತಿ ಹರಿ ಓಂ ಎಂದು ಗುರುತಿಸಲಾಗಿದೆ.
ಹೇಗಾಯ್ತು ಘಟನೆ?
ಪತಿ-ಪತ್ನಿ ಇಬ್ಬರೂ ಹಬ್ಬದ ತಯಾರಿಗಾಗಿ ಮಾರುಕಟ್ಟೆಗೆ ಬೈಕ್’ನಲ್ಲಿ ಬಂದ ವೇಳೆ ಟ್ರಕ್’ವೊಂದು ಡಿಕ್ಕಿ ಹೊಡೆದಿದೆ. ಅಪಘಾತದ ಭೀಕರತೆ ಎಷ್ಟಿತ್ತು ಎಂದರೆ ಮಹಿಳೆಯ ದೇಹ ಛಿದ್ರ ಛಿದ್ರಗೊಂಡಿದ್ದು, ಆಕೆಯ ಹೃದಯ ರಸ್ತೆಗೆ ಬಿದ್ದಿತ್ತು. ರಸ್ತೆಗೆ ಬಿದ್ದ ನಂತರವೂ ಆಕೆಯ ಹೃದಯ ಕೆಲವು ಕ್ಷಣಗಳ ಕಾಲ ಬಡಿಯುತ್ತಲೇ ಇತ್ತು ಎಂದು ವರದಿಯಾಗಿದೆ.ಧೌಲಾನಾ-ಗುಲಾವತಿ ರಸ್ತೆಯಲ್ಲಿ ಟ್ರಕ್ ಒಂದು ಅವರ ಬೈಕ್’ಗೆ ಡಿಕ್ಕಿ ಹೊಡೆದಿದೆ. ಗುಂಡಿಯನ್ನು ತಪ್ಪಿಸಲು ಪ್ರಯತ್ನಿಸುವಾಗ ಟ್ರಕ್ ಚಾಲಕ ನಿಯಂತ್ರಣ ಕಳೆದುಕೊಂಡಿದ್ದು, ಬೈಕ್’ಗೆ ನೇರ ಡಿಕ್ಕಿ ಹೊಡೆದಿದೆ ಎಂದು ವರದಿಯಾಗಿದೆ.
ಅನುರಾಧಾ ಸ್ಥಳದಲ್ಲೇ ಮೃತಪಟ್ಟರೆ, ಅವರ ಪತಿಗೆ ಗಂಭೀರ ಗಾಯಗಳಾಗಿದ್ದು, ಪ್ರಸ್ತುತ ಆಸ್ಪತ್ರೆಗೆ ದಾಖಲಿಸಲಾಗಿದೆ. ಪೊಲೀಸ್ ಅಧಿಕಾರಿಗಳು ಕೂಡಲೇ ಸ್ಥಳಕ್ಕೆ ಆಗಮಿಸಿ ಅನುರಾಧ ಅವರ ಮೃತದೇಹವನ್ನು ಮರಣೋತ್ತರ ಪರೀಕ್ಷೆಗೆ ಕಳುಹಿಸಿದ್ದಾರೆ.
ಟ್ರಕ್ ಚಾಲಕನನ್ನು ಪೊಲೀಸರು ವಿಚಾರಣೆಗಾಗಿ ವಶಕ್ಕೆ ಪಡೆದಿದ್ದು, ಅಪಘಾತದ ಕಾರಣದ ಬಗ್ಗೆ ವಿಚಾರಣೆಯನ್ನು ನಡೆಸಿದ್ದಾರೆ.
ಈ ಅಪಘಾತಕ್ಕೆ ಧೌಲಾನಾ-ಗುಲಾವತಿ ರಸ್ತೆಯ ನಿರಂತರ ದುಸ್ಥಿತಿಯೇ ಕಾರಣ ಎಂದು ಪ್ರದೇಶದ ಅನೇಕ ಜನರು ದೂಷಿಸಿದ್ದಾರೆ.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
Discussion about this post