ಕಲ್ಪ ಮೀಡಿಯಾ ಹೌಸ್ | ಹೊಸನಗರ |
ಕಾಡಾನೆ ದಾಳಿಗೆ ವ್ಯಕ್ತಿಯೊಬ್ಬರು ಬಲಿಯಾದ ಘಟನೆ ಹೊಸನಗರ ತಾಲೂಕಿನ ಅರಸಾಳು ಗ್ರಾಪಂ ವ್ಯಾಪ್ತಿಯ ಬಸವಾಪುರ ಗ್ರಾಮದಲ್ಲಿ ನಡೆದಿದೆ.
ಬಸವಾಪುರ ಗ್ರಾಮದ ತಿಮ್ಮಪ್ಪ (58) ಮೃತ ವ್ಯಕ್ತಿಯಾಗಿದ್ದು, ತಮ್ಮ ಮನೆ ಸಮೀಪದ ಕಾಡಿಗೆ ಇಂದು ಬೆಳಗ್ಗೆ ದರಗು ತರಲು ಹೋದ ವೇಳೆ ಈ ಘಟನೆ ನಡೆದಿದೆ ಎನ್ನಲಾಗಿದೆ.

Also read: ಮತದಾನ ಮಾಡಿದವರಿಗೆ ಶಿವಮೊಗ್ಗದ ಈ ಹೊಟೇಲ್’ನಿಂದ ಬಂಪರ್ ಆಫರ್ | ಏನಿದು ವಿಶೇಷ?
ವಿಧಾನ ಪರಿಷತ್ ಶಾಸಕ ಡಿ. ಎಸ್. ಅರುಣ್ ಭೇಟಿ
ಕಾಡಾನೆ ದಾಳಿಗೆ ಬಲಿಯಾದ ಬಸವಾಪುರ ಗ್ರಾಮಕ್ಕೆ ವಿಧಾನ ಪರಿಷತ್ ಶಾಸಕ ಡಿ.ಎಸ್. ಅರುಣ್ ಭೇಟಿ ನೀಡಿ, ಸ್ಥಳ ಪರಿಶೀಲನೆ ನಡೆಸಿದರು. ಬಳಿಕೆ ಜಿಲ್ಲಾಧಿಕಾರಿಗಳಿಗೆ ಕರೆ ಮಾಡಿ, ಇನ್ನು ಮುಂದೆ ಈ ತರಹದ ಘಟನೆಗಳು ಮರುಕಳಿಸದಂತೆ ಎಚ್ಚರ ವಹಿಸಲು ಅರಣ್ಯ ಇಲಾಖೆಗೆ ನಿರ್ದೇಶನ ನೀಡುವಂತೆ ಹಾಗೂ ಸಂತ್ರಸ್ತ ಕುಟುಂಬಕ್ಕೆ ಸೂಕ್ತ ಪರಿಹಾರ ನೀಡುವಂತೆ ತಿಳಿಸಿದರು.

ಶಾಸಕರಾದ ಬೇಳೂರು ಗೋಪಾಲಕೃಷ್ಣ, ತಾಲೂಕು ಪಂಚಾಯಿತಿ ಮಾಜಿ ಅಧ್ಯಕ್ಷರಾದ ವೀರೇಶ್ ಆಲುವಳ್ಳಿ, CCF ಹನುಮಂತಪ್ಪ, ಡಿಸಿಎಫ್, RFO, ಹೊಸನಗರ ನಾಗಾರ್ಜುನ ಸ್ವಾಮಿ, ರಾಜೇಶ್, ಸತೀಶ್ ಹಾಗೂ ಗ್ರಾಮಸ್ಥರು ಉಪಸ್ಥಿತರಿದ್ದರು.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news














Discussion about this post