ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ
ಹೊಸನಗರ: ವಿಧಾನಸಭಾ ಕ್ಷೇತ್ರವನ್ನು ಮರುಸ್ತಾಪಿಸುವಂತೆ ಒತ್ತಾಯಿಸಿ ಹೊಸನಗರ ವಿಧಾನಸಭಾ ಕ್ಷೇತ್ರ ಹೋರಾಟ ಸಮಿತಿ ವತಿಯಿಂದ ತಹಶೀಲ್ದಾರರಿಗೆ ಮನವಿ ಸಲ್ಲಿಸಿದರು.
ತಾಲೂಕಿನಲ್ಲೇ ಅಸ್ತಿತ್ವದಲ್ಲಿದ್ದ ಹೊಸನಗರ ವಿಧಾನಸಭಾ ಕ್ಷೇತ್ರವನ್ನು ಮರು ವಿಂಗಡಣೆಯ ಸಂದರ್ಭದಲ್ಲಿ ತೀರ್ಥಹಳ್ಳಿ ಮತ್ತು ಸಾಗರ ಕ್ಷೇತ್ರಕ್ಕೆ ಸೇರಿಸಲಾಯಿತು. ಜನಸಂಖ್ಯೆಯ ಆಧಾರದ ಮೇಲೆ ಕ್ಷೇತ್ರ ವಿಂಗಡಣೆ ಮಾಡಿರುವುದರಿಂದ ಈ ರೀತಿಯ ಕ್ಷೇತ್ರ ನಷ್ಟಕ್ಕೆ ಕಾರಣವಾಯಿತು ಎಂದು ಹೇಳಿದರು.
ಹೊಸನಗರ ತಾಲೂಕು ಮಲೆನಾಡು, ಗುಡ್ಡಗಾಡು ಪ್ರದೇಶ ಮತ್ತು ಪಶ್ಚಿಮಘಟ್ಟಗಳ ವ್ಯಾಪ್ತಿಯಲ್ಲಿರುವ ಈ ಕ್ಷೇತ್ರ ವಿವಿಧ ವಿದ್ಯುತ್ ಯೋಜನೆಗಳಿಗಾಗಿ ೬ ಆಣೆಕಟ್ಟುಗಳನ್ನು ನಿರ್ಮಾಣ ಮಾಡಲಾಗಿದ್ದು, ಸಾಕಷ್ಟು ಭೂ ಪ್ರದೇಶ ಮುಳುಗಡೆಯಾಗಿದೆ. ಪ್ರಸ್ತುತ ಒಂದು ಲಕ್ಷಕ್ಕಿಂತ ಹೆಚ್ಚು ಜನಸಂಖ್ಯೆಯನ್ನು ಹೊಂದಿರುವುದರಿಂದ ಇದರ ಪಕ್ಕದ ತಾಲೂಕಿನ ಪ್ರದೇಶ ಮತ್ತು ಜನಸಂಖ್ಯೆಯನ್ನು ಹೊಂದಿಸಿ, ಹೊಸನಗರ ವಿಧಾನಸಭಾ ಕ್ಷೇತ್ರವನ್ನು ಮರು ಸ್ಥಾಪಿಸಬಹುದಾಗಿರುತ್ತದೆ. ಭೌಗೋಳಿಕ ಪ್ರದೇಶವನ್ನು ಗಮನದಲ್ಲಿಟ್ಟುಕೊಂಡು, ಜನಸಂಖ್ಯೆಯನ್ನು ಪರಿಗಣಿಸದೆ ವಿಧಾನಸಭಾ ಕ್ಷೇತ್ರಗಳನ್ನು ರಚಿಸಲಾಗಿದೆ ಎಂದು ಆರೋಪಿಸಿದರು.
ಹೊಸನಗರ ವಿಧಾನಸಭಾ ಕ್ಷೇತ್ರವನ್ನು ಮರುಸೃಷ್ಟಿಸುವುದು. ಪ್ರಜಾಪ್ರಭುತ್ವದ ದೃಷ್ಟಿಯಿಂದ ಸೂಕ್ತವಾಗಿರುತ್ತದೆ. ಬೆಂಗಳೂರು ಒಂದೇ ನಗರಕ್ಕೆ ೨೮ ವಿಧಾನಸಭಾ ಕ್ಷೇತ್ರಗಳಿವೆ, ಭೌಗೋಳಿಕವಾಗಿ ಹೊಸನಗರ ತಾಲೂಕು ಬೆಂಗಳೂರಿಗಿಂತಲೂ ಹೆಚ್ಚು ವಿಸ್ತಾರ ಹೊಂದಿದೆ. ಆದುದರಿಂದ ಪ್ರಜಾಪ್ರಭುತ್ವದ ದೃಷ್ಟಿಯಿಂದಲೂ ಹೊಸನಗರ ವಿಧಾನಸಭಾ ಕ್ಷೇತ್ರವನ್ನು ಮರುಸ್ಥಾಪಿಸುವಂತೆ ಭಾರತೀಯ ಚುನಾವಣಾ ಆಯೋಗಕ್ಕೆ ಶಿಫಾರಸ್ಸು ಮಾಡುವಂತೆ ಕೋರಿದರು.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9481252093 – info@kalpa.news
 
	    	



 Loading ...
 Loading ... 
							



 
                
Discussion about this post