ಕಲ್ಪ ಮೀಡಿಯಾ ಹೌಸ್ | ಹೊಸನಗರ |
ಕಾರಣಗಿರಿ #Karanagiri ಮತ್ತು ಬಪ್ಪನಮನೆ ಸಂಪರ್ಕ ರಸ್ತೆಯ ಶರಾವತಿ ಹಿನ್ನೀರನ ಬಿಲ್ಸಾಗರದಲ್ಲಿ ಸೇತುವೆ ನಿರ್ಮಾಣ ಕಾಮಗಾರಿಗೆ ಈ ಬಾರಿಯ ಆಯವ್ಯಯದಲ್ಲಿ ಸುಮಾರು 18 ಕೋಟಿ ರೂಪಾಯಿಗಳ ಅನುದಾನ ಒದಗಿಸಲು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ #CM Basavaraja Bommai ಒಪ್ಪಿಗೆ ನೀಡಿದ್ದಾರೆ.
ಈ ಬಗ್ಗೆ ಗೃಹ ಸಚಿವ ಆರಗ ಜ್ಞಾನೇಂದ್ರ #Home Minister Araga Gnanendra ಹಾಗೂ ಸಾಗರ ಶಾಸಕ ಹರತಾಳು ಹಾಲಪ್ಪ # MLA Halappa ಮತ್ತು ವಿಧಾನ ಪರಿಷತ್ ಸದಸ್ಯ ಅರುಣ್ ನೇತೃತ್ವದ ನಿಯೋಗ, ಮುಖ್ಯಮಂತ್ರಿಗಳನ್ನು ವಿಧಾನಸೌಧದ ಕಚೇರಿಯಲ್ಲಿ ಭೇಟಿಯಾಗಿ, ಮನವಿ ಸಲ್ಲಿಸಿತ್ತು. ಈ ಮನವಿಗೆ ಸ್ಪಂದಿಸಿರುವ ಸಿಎಂ, ಸೇತುವೆ ನಿರ್ಮಾಣಕ್ಕೆ ಒಪ್ಪಿಗೆ ನೀಡಿದ್ದಾರೆ.
Also Read: ದ.ರಾ. ಬೇಂದ್ರೆ 126ನೆಯ ಜನ್ಮದಿನೋತ್ಸವ: ಹೊಸಪೇಟೆಯಲ್ಲೊಂದು ಭಾವಪೂರ್ಣ ಕಾರ್ಯಕ್ರಮ
ನಿಯೋಗದಲ್ಲಿ ಸ್ಥಳೀಯರಾದ ಕೆ.ವಿ. ಕೃಷ್ಣಮೂರ್ತಿ, ನಗರ ಸೊಸೈಟಿ ಗುರುರಾಜ್, ಕೆ.ಎಸ್. ರವಿ, ಮಧುಸೂಧನ್ ನಾವಡ ಹಾಗೂ ಶಾಂತ ಮೂರ್ತಿ ಹಾಗೂ ಇತರರೂ ಉಪಸ್ಥಿತರಿದ್ದರು.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
Discussion about this post