ಕಲ್ಪ ಮೀಡಿಯಾ ಹೌಸ್ | ಹೊಸನಗರ |
ತಾಲ್ಲೂಕಿನ ಹಲವು ಗ್ರಾಮಗಳಲ್ಲಿ ಮಂಗಳವಾರ ಮಧ್ಯಾಹ್ನ 3.30 ರಿಂದ ವರ್ಷದ ಮೊದಲ ಮಳೆ ಸತತ ಒಂದೂವರೆ ಗಂಟೆಗಳ ಕಾಲ ಬಿರುಗಾಳಿ ಸಹಿತ #Heavy Rain ಸುರಿದಿದ್ದು ಸಾಕಷ್ಟು ಅವಾಂತರಗಳನ್ನು ಸೃಷ್ಟಿಸಿದೆ.
ತಾಲ್ಲೂಕಿನ ಕೋಡೂರು ಗ್ರಾಪಂ ವ್ಯಾಪ್ತಿಯ ಹುಂಚ ಹೋಬಳಿ ಕರಿಗೆರಸು ಗ್ರಾಮದ ಹಿಂಡ್ಲೆಮನೆ ನಿವಾಸಿ ರೈತ ಶ್ರೀನಿವಾಸ ಹೆಚ್.ಕೆ ಬಿನ್ ಕೃಷ್ಣಪ್ಪ ಎಂಬುವರಿಗೆ ಸೇರಿದ ಸ.ನಂ.26/1 ಮತ್ತು 24 ರ ಜಮೀನಿನಲ್ಲಿನ ನೂರಾರು ಅಡಿಕೆ ಮರಗಳು ಮತ್ತು ತೆಂಗಿನಮರ ಧರೆಗುರುಳಿದ್ದು ಕಾಳುಮೆಣಸು ಸೇರಿದಂತೆ ಇನ್ನಿತರ ಬೆಳೆ ಹಾನಿಯಾಗಿದ್ದು ಲಕ್ಷಾಂತರ ರೂ. ನಷ್ಟ ಸಂಭವಿಸಿದೆ.
ಬಿರುಗಾಳಿ ಹೊಡೆತಕ್ಕೆ ನೂರಾರು ಅಡಿಕೆ ಗಿಡಗಳು ನೆಲಕ್ಕೆ ಬಿದ್ದಿವೆ. ಇದರಿಂದ ರೈತರು ತೀವ್ರ ಆರ್ಥಿಕ ಸಂಕಷ್ಟಕ್ಕೆ ಸಿಲುಕಿದ್ದಾರೆ.
Also read: ಕುವೆಂಪು ವಿವಿ: 2025-26ನೇ ಸಾಲಿಗೆ 3726.12 ಲಕ್ಷಗಳ ಕೊರತೆಯ ಬಜೆಟ್ ಮಂಡನೆ
ಲಕ್ಷಾಂತರ ರೂ. ಸಾಲ ಮಾಡಿ ಬೆಳೆದ ಬೆಳೆ ಬಿರುಗಾಳಿಗೆ ಸಿಲುಕಿದ್ದು ಸಂಪೂರ್ಣ ತೋಟವೇ ನಾಶವಾಗಿದೆ ಎಂದು ರೈತ ಶ್ರೀನಿವಾಸ ಅಳಲನ್ನು ತೋಡಿಕೊಂಡಿದ್ದಾರೆ.
ಪರಿಹಾರಕ್ಕೆ ಒತ್ತಾಯ
ಈ ಭಾಗದಲ್ಲಿ ಬೀಸಿದ ಬಿರುಗಾಳಿಗೆ ಅಡಿಕೆ, ತೆಂಗು ಬೆಳೆ ಹಾಳಾಗಿದ್ದು, ಸಂಬಂಧಿಸಿದ ಇಲಾಖೆ ಬೆಳೆ ನಷ್ಟವಾಗಿರುವ ರೈತರಿಗೆ ಹೆಚ್ಚಿನ ಪರಿಹಾರ ಧನ ವಿತರಿಸಬೇಕು ಎಂದು ಗ್ರಾಮಸ್ಥರು ಒತ್ತಾಯಿಸಿದ್ದಾರೆ.
ಇನ್ನೂ ಈ ಭಾಗದಲ್ಲಿ ಏಕಾಏಕಿ ಬಂದ ಭಾರಿ ಗಾಳಿ, ಮಳೆಗೆ ನೂರಾರು ಕಾಡು ಜಾತಿಯ ಮರಗಳು ಬಿದ್ದ ಪರಿಣಾಮ ಹಲವು ವಿದ್ಯುತ್ ಕಂಬಗಳು ನೆಲಕ್ಕುರುಳಿದ್ದು ವಿದ್ಯುತ್ ಸಂಪರ್ಕ ಸಂಪೂರ್ಣ ಸ್ಥಗಿತಗೊಂಡಿದೆ. ಹಲವೆಡೆ ಮನೆಗಳ ಮೇಲ್ಛಾವಣಿ ಹಾರಿಹೋದ ಬಗ್ಗೆ ವರದಿಯಾಗಿದೆ.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
Discussion about this post