ಕಲ್ಪ ಮೀಡಿಯಾ ಹೌಸ್ | ಹೊಸನಗರ |
ಖಾಸಗಿ ಬಸ್’ವೊಂದು ಧರೆಗೆ ಡಿಕ್ಕಿ ಹೊಡೆದ ಪರಿಣಾಮ ಮಗುವೊಂದು ಸ್ಥಳದಲ್ಲೇ ಮೃತಪಟ್ಟು, 10 ಮಂದಿಗೆ ಗಾಯಗಳಾಗಿರುವ ಘಟನೆ ತಾಲೂಕಿನ ಹುಲಿಕಲ್ ಘಾಟಿಯಲ್ಲಿ ನಡೆದಿದೆ.
ಮೃತ ಮಗುವನ್ನು ಬಂಟ್ವಾಳದ ಮುಸ್ತಾಫ ಎಂಬುವರ ಪುತ್ರಿ, ಒಂದೂವರೆ ವರ್ಷದ ರೀಶ್ನಾ ಫಾತಿಮಾ ಮೃತಪಟ್ಟ ಮಗು ಎಂದು ಗುರುತಿಸಲಾಗಿದೆ.
ಘಟನೆ ಡಿ.30ರ ನಸುಕಿನ 3 ಗಂಟೆ ವೇಳೆಗೆ ನಡೆದಿದೆ.
ದಾವಣಗೆರೆಯಿಂದ ಮಂಗಳೂರಿಗೆ ತೆರಳುತ್ತಿದ್ದ ಖಾಸಗಿ ಸಂಸ್ಥೆಗೆ ಸೇರಿದ ಬಸ್ ಅಪಘಾತಕ್ಕೀಡಾಗಿದೆ. ಘಟನೆಯಲ್ಲಿ ಮೂವರು ಪ್ರಯಾಣಿಕರಿಗೆ ಗಂಭೀರ ಸ್ವರೂಪದ ಪೆಟ್ಟು ಬಿದ್ದಿದ್ದು, ಅವರನ್ನು ಹೆಚ್ಚಿನ ಚಿಕಿತ್ಸೆಗಾಗಿ ಮಣಿಪಾಲ್ ಆಸ್ಪತ್ರೆಗೆ ದಾಖಲಿಸಲಾಗಿದೆ.
ಡಿಕ್ಕಿಯ ತೀವ್ರತೆಗೆ ಬಸ್ ಮುಂಭಾಗ ಸಂಪೂರ್ಣ ಜಖಂಗೊಂಡಿದೆ. ಬಸ್ ಚಾಲಕನ ಅಜಾಗರೂಕ ಚಾಲನೆಯೇ ಅವಘಡಕ್ಕೆ ಕಾರಣವಾಗಿದೆ ಎಂದು ಹೇಳಲಾಗಿದೆ.
ಈ ಕುರಿತಂತೆ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news 
















