ಕಲ್ಪ ಮೀಡಿಯಾ ಹೌಸ್ | ಹೊಸನಗರ |
ತಾಲ್ಲೂಕಿನ ಹುಲಿಕಲ್ ಘಾಟ್ #Hulikal Ghat ರಸ್ತೆ ತಿರುವಿನಲ್ಲಿ ಸಂಚರಿಸುತ್ತಿದ್ದ ಬಸ್ ಬ್ರೇಕ್ ಫೈಲ್ ಆಗಿ ಅಪಘಾತ ಸಂಭವಿಸಿ ಸುಮಾರು 60 ಅಡಿ ಆಳದ ಪ್ರಪಾತಕ್ಕೆ ಉರುಳಿದೆ.
ದಾವಣಗೆರೆ ಯಿಂದ ಮಂಗಳೂರು ಮಧ್ಯೆ ಸಂಚರಿಸುತ್ತಿದ್ದ ದುರ್ಗಾಂಬ ಬಸ್ ಭಾನುವಾರ ರಾತ್ರಿ 1.45 ಗಂಟೆಗೆ ಘಾಟಿ ರಸ್ತೆಯ ಶಿವಮೊಗ್ಗ ಜಿಲ್ಲೆ ಗಡಿ ಭಾಗದ ತಿರುವಿನಲ್ಲಿ ಬ್ರೇಕ್ ಫೈಲ್ ಆಗಿದ್ದು ಬಸ್ ಚಾಲಕನ ನಿಯಂತ್ರಣ ತಪ್ಪಿ ರಸ್ತೆ ಪಕ್ಕದ ಪ್ರಪಾತಕ್ಕೆ ಉರುಳಿದೆ.
ಬಸ್ ನಲ್ಲಿ ಒಟ್ಟು 45 ಮಂದಿ ಪ್ರಯಾಣಿಕರಿದ್ದರು. ಹಲವರಿಗೆ ಸಣ್ಣಪುಟ್ಟ ಗಾಯಗಳಾಗಿದ್ದು ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಗಾಯಾಳುಗಳನ್ನು ಕುಂದಾಪುರ ಆಸ್ಪತ್ರೆಗೆ ದಾಖಲಿಸಲಾಗಿದೆ.

ರಸ್ತೆ ಇಕ್ಕೆಲಗಳಲ್ಲಿ ಯಾವುದೇ ತೆರನಾದ ತಡೆಗೋಡೆ ಇಲ್ಲವಾಗಿದೆ. ಪಟ್ಟಿ ತರದ ಪ್ಲೇಟ್ ಅಳವಡಿಸಲಾಗಿದ್ದು ಅದು ಇದ್ದು ಇಲ್ಲದಂತಾಗಿದೆ. ರಸ್ತೆ ಪಕ್ಕದಲ್ಲಿ ಮಣ್ಣು ಹಾಕಿ ಏರಿಸಲಾಗಿದ್ದು ಪ್ಲೇಟ್’ಗಳು ಸಾಲು ಮುಚ್ಚಿಹೋಗಿವೆ. ಇದರಿಂದ ಹೆಚ್ಚಿನ ಅಪಘಾತ ಸಂಭವಿಸುತ್ತಿವೆ. ಉತ್ತಮ ತಡೆಗೋಡೆ ಇದ್ದಿದ್ದರೇ ಅಪಘಾತ ಸಂಭವಿಸುತ್ತಿರಲಿಲ್ಲ ಎಂದು ಚಾಲಕ ಬಸವರಾಜ ಎಂದು ಪತ್ರಿಕೆಗೆ ತಿಳಿಸಿದ್ದಾರೆ.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news








Discussion about this post