ಕಲ್ಪ ಮೀಡಿಯಾ ಹೌಸ್ | ಹೊಸನಗರ |
ತಾಯಿ ತನ್ನ ಮಗುವಿನ ಜತೆ ಮನೆಯ ಎದುರಿನ ಬಾವಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ತಾಲೂಕಿನ ಬಿದರಹಳ್ಳಿಯಲ್ಲಿ ನಡೆದಿದೆ.
ಇಂದು ಬೆಳಗಿನ ಜಾವ ಬಿದರಹಳ್ಳಿಯ ನಿವಾಸಿ ವಿದ್ಯಾ(32) ಹಾಗೂ ಮಗಳು ತನ್ವಿ (4) ಜೊತೆ ಬಾವಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಹೊಸನಗರದ ಅಗ್ನಿಶಾಮಕ ಸಿಬ್ಬಂದಿ ಭೀಷ್ಮಚಾರಿ 50 ಅಡಿ ಆಳದ ಬಾವಿಗೆ ಇಳಿದು ಎರಡು ಮೃತದೇಹಗಳನ್ನು ಹೊರತೆಗೆದಿದ್ದಾರೆ.
ಘಟನಾ ಸ್ಥಳಕ್ಕೆ ರಿಪ್ಪನ್ ಪೇಟೆ ಪೋಲೀಸರು ಧಾವಿಸಿದ್ದು, ಪ್ರಕರಣದ ತನಿಖೆ ಕೈಗೊಂಡಿದ್ದಾರೆ.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
Discussion about this post