ಕಲ್ಪ ಮೀಡಿಯಾ ಹೌಸ್
ಹೊಸನಗರ: ತಾಲೂಕು ಬ್ಲಾಕ್ ಕಾಂಗ್ರೆಸ್ ಮತ್ತು ಹರಿದ್ರಾವತಿ ಘಟಕದ ವತಿಯಿಂದ ಇಂದು ಪೆಟ್ರೋಲ್-ಡೀಸೆಲ್ ಹಾಗೂ ಅಗತ್ಯ ವಸ್ತುಗಳ ಬೆಲೆ ಏರಿಕೆ ಖಂಡಿಸಿ ಆಲಗೇರಿ ಮಂಡ್ರಿ ಪೆಟ್ರೋಲ್ ಬಂಕ್ ಎದುರು ರಾಜ್ಯ ಹಾಗೂ ಕೇಂದ್ರ ಸರ್ಕಾರದ ವಿರುದ್ಧ ಪ್ರತಿಭಟನೆ ಮಾಡಲಾಯಿತು.

ಈ ಸಂದರ್ಭದಲ್ಲಿ ಜಿಪಂ ಸದಸ್ಯ ಕಲಗೋಡ್ ರತ್ನಾಕರ್, ತಾಲ್ಲೂಕು ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಬಿ.ಜಿ ನಾಗರಾಜ್, ತಾಲೂಕು ಪ್ರಧಾನ ಕಾರ್ಯದರ್ಶಿ ಸದಾಶಿವ ಶ್ರೇಷ್ಠಿ, ಹೊಸನಗರ ಪುರಸಭೆ ಸದಸ್ಯ ಅಶ್ವಿನಿಕುಮಾರ್, ತಾಲೂಕು ಹಿಂದುಳಿದ ವರ್ಗಗಳ ಅಧ್ಯಕ್ಷರು, ಮಾರುತಿಪುರ ಗ್ರಾಪಂ ಅಧ್ಯಕ್ಷ ಚಿದಂಬರ, ತಾಲೂಕು ಎಸ್‌ಸಿ, ಎಸ್‌ಟಿ ಘಟಕದ ಅಧ್ಯಕ್ಷ ಮಂಜಪ್ಪ ಎಚ್. ಮಂಡ್ರಿ, ಹರಿದ್ರಾವತಿ ಘಟಕದ ಅಧ್ಯಕ್ಷ ಎಚ್.ಬಿ. ವಾಸು, ಮಾರುತಿಪುರ ಮತ್ತು ಹರಿದ್ರಾವತಿ ಗ್ರಾಮ ಪಂಚಾಯತ್ ಸದಸ್ಯರು, ಪಕ್ಷದ ಹಿರಿಯ ಮುಖಂಡರು, ಹರಿದ್ರಾವತಿ ಘಟಕದ ಸದಸ್ಯರು, ಬೂತ್ ಅಧ್ಯಕ್ಷರು ಕಾರ್ಯಕರ್ತರು ಭಾಗಿಯಾಗಿದ್ದರು.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news

















