ಕಲ್ಪ ಮೀಡಿಯಾ ಹೌಸ್ | ಹೊಸನಗರ |
ಟೆಂಪೋ ಟ್ರಾವೆಲರ್ ಹಾಗೂ ಜೀಪ್ ನಡುವೆ ಭೀಕರ ಅಪಘಾತ ಸಂಭವಿಸಿದ್ದು, ಐವರಿಗೆ ಗಾಯಗಳಾಗಿರುವ ಘಟನೆ ಶಿವಮೊಗ್ಗ ಜಿಲ್ಲೆಯ ಹೊಸನಗರ ತಾಲೂಕಿನ ನಿಟ್ಟೂರು ಸಮೀಪ ಇಂದು ಸಂಭವಿಸಿದೆ.
ಘಟನೆಯಲ್ಲಿ ಐವರು ಗಾಯಗೊಂಡಿದ್ದಾರೆ. ಹೊಸನಗರ ತಾಲ್ಲೂಕು ನಿಟ್ಟೂರು ಬಳಿ ಸಿಗುವ ಮರಕುಟಿಗ ಗ್ರಾಮದ ಬಳಿ ಘಟನೆ ಸಂಭವಿಸಿದೆ.
Also read: ಮಾಜಿ ಮುಖ್ಯಮಂತ್ರಿ ಎಸ್. ಬಂಗಾರಪ್ಪ ಪುಣ್ಯಸ್ಮರಣೆ | ಅಭಿಮಾನಿಗಳಿಂದ ಪುಷ್ಪ ನಮನ
ಇವತ್ತು ಬೆಳಗ್ಗೆ ಕೊಲ್ಲೂರಿನಿಂದ ಕೊಡಚಾದ್ರಿಗೆ ತೆರಳುತ್ತಿದ್ದ ಜೀಪಿಗೆ ಶಿವಮೊಗ್ಗ ಕಡೆಯಿಂದ ತೆರಳುತ್ತಿದ್ದ ಟಿಟಿ ಢಿಕ್ಕಿಯಾಗಿದೆ. ಘಟನೆಯಲ್ಲಿ ಎರಡು ವಾಹನದ ಮುಂಭಾಗ ಜಖಂಗೊಂಡಿದೆ. ಘಟನೆ ವೇಳೆ ಜೀಪ್’ನಲ್ಲಿ 8 ಜನರಿದ್ದರು. ಈ ಪೈಕಿ ಮೂವರಿಗೆ ಗಂಭೀರ ಗಾಯಗವಾಗಿದೆ. ಅವರನ್ನು ಕುಂದಾಪುರದ ಆಸ್ಪತ್ರೆಗೆ ಶಿಫ್ಟ್ ಮಾಡಲಾಗಿದೆ.
ನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
Discussion about this post