ಕಲ್ಪ ಮೀಡಿಯಾ ಹೌಸ್ | ಹೊಸನಗರ |
ರಾಜ್ಯ ವಿಧಾನಸಭಾ ಚುನಾವಣೆ ಹಿನ್ನೆಲೆಯಲ್ಲಿ ರಾಜ್ಯಾದ್ಯಂತ ಅಬಕಾರಿ ಇಲಾಖೆ ಹದ್ದಿನ ಕಣ್ಣಿಟ್ಟಿದ್ದು ತಾಲೂಕಿನ ನಿವಣೆ ಬಳಿ ಅಬಕಾರಿ ಅಧಿಕಾರಿಗಳು ಅಕ್ರಮವಾಗಿ ಸಾಗಾಟ ಮಾಡುತ್ತಿದ್ದ ವಾಹನ ಸಮೇತ ಲಕ್ಷಾಂತರ ರೂಪಾಯಿ ಮೌಲ್ಯದ ಮದ್ಯವನ್ನು ವಶಕ್ಕೆ ತೆಗೆದುಕೊಂಡಿದ್ದು ಆರೋಪಿ ಪರಾರಿಯಾಗಿದ್ದಾನೆ.
ನಿವಣೆ ಗ್ರಾಮದ ಅಗಸನಗದ್ದೆ ಸಮೀಪ ಅಕ್ರಮವಾಗಿ ಓಮ್ನಿ ವಾಹನದಲ್ಲಿ ಸುಮಾರು 198.72 ಲೀಟರ್ ಮದ್ಯವನ್ನು ಸಾಗಾಟ ನಡೆಸುತ್ತಿದ್ದು ಖಚಿತ ಮಾಹಿತಿಯ ಮೇರೆಗೆ ತೀರ್ಥಹಳ್ಳಿಯ ಅಬಕಾರಿ ನಿರೀಕ್ಷಕರಾದ ಅಮಿತ್‌ಕುಮಾರ್‌ರವರ ನೇತೃತ್ವದಲ್ಲಿ ಅಕ್ರಮ ಮದ್ಯ ಹಾಗೂ ಓಮ್ನಿ ವಾಹನವನ್ನು ವಶಪಡಿಸಿಕೊಂಡಿದ್ದಾರೆ. ಓಮ್ನಿ ಡ್ರೈವರ್ ಪರಾರಿಯಾದ ಘಟನೆ ವರದಿಯಾಗಿದೆ.













Discussion about this post