ಕಲ್ಪ ಮೀಡಿಯಾ ಹೌಸ್ | ಹೊಸನಗರ |
ರಾಜ್ಯ ಕಾಂಗ್ರೆಸ್ ಸರ್ಕಾರ ಸಾಲು ಸಾಲು ಹಗರಣದಲ್ಲಿ ಸಿಲುಕಿಕೊಂಡಿದ್ದರೂ ಕೂಡ ಒಂದಲ್ಲ ಒಂದು ರೀತಿಯಲ್ಲಿ ನಾವೇ ಸರಿ ಎಂದು ಸಮರ್ಥನೆ ಮಾಡಿಕೊಳ್ಳುತ್ತಿರುವ ವರ್ತನೆ ನಿಜಕ್ಕೂ ಖಂಡನೀಯವಾದದ್ದು ಎಂದು ನಿಕಟಪೂರ್ವ ಜಿಲ್ಲಾ ಬಿಜೆಪಿ ಅಧ್ಯಕ್ಷ ರುದ್ರೇಗೌಡ ಹೇಳಿದ್ದಾರೆ.
ಕರ್ನಾಟಕದಲ್ಲಿ ವಕ್ಸ್ ಕಾಯ್ದೆ ದುರ್ಬಳಕೆಯಾಗುತ್ತಿರುವ ವಿಷಯಕ್ಕೆ ಸಂಬಂಧಿಸಿದಂತೆ ಇಂದು ಬೆಳಿಗ್ಗೆ ಹೊಸನಗರದ ಬಿಜೆಪಿ ಕಾರ್ಯಾಲಯದಲ್ಲಿ. ನಡೆಸಿದ ಗೋಷ್ಠಿಯನ್ನು ಉದ್ದೇಶಿಸಿ ಅವರು ಮಾತನಾಡಿದರು.
Also read: ಗಾಜಿನ ಮನೆಯಲ್ಲಿ ಕೂತು ಕಲ್ಲು ಹೊಡೆಯುವ ದುಸ್ಸಾಹಸ ಮಾಡಬೇಡಿ
ಇಂದು ನಮ್ಮ ಹಿಂದೂ ರಾಷ್ಟ್ರದಲ್ಲಿ ಹಿಂದುಗಳೇ ನಮಗೆ ಬದುಕಲು ಜಾಗ ಕೊಡಿ ಎಂಬ ವಾತಾವರಣ ಸೃಷ್ಟಿಯಾಗಿದೆ. ಸಿದ್ಧರಾಮಯ್ಯ ಅವರು ಮುಖ್ಯಮಂತ್ರಿಯಾದ ನಂತರ ಕರ್ನಾಟಕದಲ್ಲಿ ಇಂದು ವಕ್ಸ್ ಕಾಯ್ದೆಯ ದುರ್ಬಳಕೆಯ ಕಾರಣಕ್ಕಾಗಿ ರೈತರು ಮಠಮಾನ್ಯಗಳು, ಹಿಂದೂ ದೇವಾಲಯಗಳು ಎಲ್ಲರೂ ಸೇರಿದಂತೆ ಆತಂಕದಲ್ಲಿದ್ದಾರೆ. ಹಿಂದೆ ಕಾಂಗ್ರೆಸ್ ನವರು ರೂಪಿಸಿರುವ ವಕ್ಸ್ ಕಾಯ್ದೆ ಮುಸ್ಲಿಂ ತುಷ್ಠಿಕರಣಕ್ಕಾಗಿ ಮತಗಳಿಕೆಯ ಆಸೆಯೊಂದಿಗೆ ರಚಿಸಿರುವ ಕಾಯ್ದೆಯಾಗಿದೆ ಎಂದು ಆರೋಪಿಸಿದ್ದಾರೆ.
ಈ ಕಾಯ್ದೆಯಲ್ಲಿರುವ ಅಂಶಗಳ ಆಧಾರದ ಮೇಲೆ ಕರ್ನಾಟಕ ಸರ್ಕಾರದ ವಕ್ಸ್ ಬೋರ್ಡ್ ಕರ್ನಾಟಕ ಸರ್ಕಾರದ ಭಾಗವಾಗಿದ್ದರೂ, ಕರ್ನಾಟಕ ಸರ್ಕಾರದ ಹಿಡಿತದಲ್ಲಿ ಎಷ್ಟರಮಟ್ಟಿಗೆ ಇದೆ ಎನ್ನುವ ಪ್ರಶ್ನೆ ಮೂಡಿಸಿದೆ. ಇತ್ತೀಚಿಗೆ ಈ ಹಿಂದೆ ನಡೆದ ಪಾರ್ಲಿಮೆಂಟ್ ಅಧಿವೇಶನದಲ್ಲಿ ವರ್ಕ್ ಬೋರ್ಡ್ ಬಿಲ್ ಅನ್ನು ಚರ್ಚೆಗೆ ತೆಗೆದುಕೊಂಡಾಗ ಜಂಟಿ ಸಮಿತಿಗೆ ಒಪ್ಪಿಸಬೇಕು ಅಂತ ಹೇಳಿ ಜಂಟಿ ಸಮಿತಿಗೂ ಒಪ್ಪಿಸಿಯಾಗಿದೆ.. ಅದನ್ನ ಗಮನದಲ್ಲಿಟ್ಟುಕೊಂಡು ಸಮಿತಿಯ ನಿರ್ಧಾರ ಹೊರ ಬರುವುದಕ್ಕಿಂತ ಮುಂಚೆ ಏನೆಲ್ಲಾ ಅವಘಡ ಸೃಷ್ಟಿ ಮಾಡಬೇಕು. ಅದನ್ನು ಜಮೀರ್ ಅಹ್ಮದ್ ಅವರಿಂದ. ಮಾಡಿಸುತ್ತಿದ್ದಾರೆ. ಕರ್ನಾಟಕದ ಅಲ್ಪಸಂಖ್ಯಾತರ ಹಾಗೂ ವಕ್ಸ್ ಸಚಿವರಾದ ಜಮೀರ್ ಅಹ್ಮದ್ ಖಾನ್ ರವರು ರಾಜ್ಯದ ಎಲ್ಲ ಜಿಲ್ಲೆಗಳಿಗೆ ಪ್ರವಾಸ ಮಾಡಿ ವಕ್ಸ್ ಪ್ರಗತಿ ಪರಿಶೀಲನೆ ಹಾಗೂ ವಕ್ಸ್ ಆದಾಲತ್ ಗಳನ್ನು ನಡೆಸಿ ಕರ್ನಾಟಕ ಸರ್ಕಾರದ 1974ರ ಗೆಜೆಟ್ ಆಗಿರೋ ಪ್ರಕಾರ ರೈತರ ಕೃಷಿ ಜಮೀನುಗಳನ್ನು, ಮಠ-ಮಂದಿರಗಳ ಆಸ್ತಿಗಳನ್ನೂ ಸೇರಿದಂತೆ ಬಹುದೊಡ್ಡ ಪ್ರಮಾಣದ ಆಸ್ತಿಗಳನ್ನು ವಕ್ಸ್ ಹೆಸರಿನಲ್ಲಿ ತಕ್ಷಣ ಕಂದಾಯ ದಾಖಲೆಗಳಲ್ಲಿ ಇಂದಿಕರಿಸಿಕೊಳ್ಳುವಂತೆ ಆಯಾ ಜಿಲ್ಲಾಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ. ಈ ಘಟನೆ ನಿಜಕ್ಕೂ ಬೇಸರದ ಸಂಗತಿಯಾಗಿದೆ,ಇದನ್ನು ಭಾರತೀಯ ಜನತಾ ಪಾರ್ಟಿ ಖಂಡಿಸುತ್ತದೆ ಎಂದರು.
ಈ ಸಂದರ್ಭದಲ್ಲಿ ತಾಲೂಕು ಬಿಜೆಪಿ ಅಧ್ಯಕ್ಷ ಸುಬ್ರಹ್ಮಣ್ಯ, ಪ್ರಧಾನ ಕಾರ್ಯದರ್ಶಿ ನಾಗಾರ್ಜುನ ಸ್ವಾಮಿ, ಹಿರಿಯರಾದ ಉಮೇಶ್ ಕಂಚಿರ್ಗಾ, ಅಂಬೇಡ್ಕರ್ ನಿಗಮದ ಮಾಜಿ ನಿರ್ದೇಶಕರಾದ ದೇವಾನಂದ್, ತಾಲೂಕು ಬಿಜೆಪಿ ರೈತ ಮೋರ್ಚಾ ಅಧ್ಯಕ್ಷರಾದ ಶಿವಾನಂದ ಹಿರೇಮಣತಿ, ಜಿಲ್ಲಾ ಪಂಚಾಯಿತಿ ಮಾಜಿ ಸದಸ್ಯರಾದ ಸುರೇಶ್ ಸ್ವಾಮಿರಾವ್, ಪಟ್ಟಣ ಪಂಚಾಯಿತಿ ಮಾಜಿ ಅಧ್ಯಕ್ಷರಾದ ಉಮೇಶ್ ಹಾಲಗದ್ದೆ, ತಾಲೂಕ್ ಪಂಚಾಯತಿ ಮಾಜಿ ಅಧ್ಯಕ್ಷ ಬಿ. ಯುವರಾಜ್, ವೀರೇಶ ಆಲವಳ್ಳಿ, ಏ. ವಿ. ಮಲ್ಲಿಕಾರ್ಜುನ್, ರಾಜ್ಯ ಎಂಸಿಎ ಮಾಜಿ ನಿರ್ದೇಶಕ ತೀರ್ಥೇಶ್, ಮತ್ತು ಪ್ರಮುಖರಾದ ಮೋಹನ್ ಮಂಡಾನಿ, ಬಸವರಾಜ್, ಶೋಭರಾಜ್ ಸೇರಿದಂತೆ ಪ್ರಮುಖರಿದ್ದರು.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
Discussion about this post