ಕಲ್ಪ ಮೀಡಿಯಾ ಹೌಸ್ | ಹೊಸನಗರ |
ತಾಲೂಕಿನ ಹರಿದ್ರಾವತಿ ಮೀಸಲು ಅರಣ್ಯ ಪ್ರದೇಶದಲ್ಲಿ ಅಕ್ರಮವಾಗಿ ಶ್ರೀಗಂಧ ಮರಗಳನ್ನು ಕಡಿದು ಬೈಕ್‌ನಲ್ಲಿ ಸಾಗಾಣಿಕೆ ಮಾಡುತ್ತಿದ್ದ ಮೂವರು ಆರೋಪಿಗಳನ್ನು ಅರಣ್ಯ ಇಲಾಖೆ ಅಧಿಕಾರಿಗಳು ಬಂಧಿಸಿರುವ ಘಟನೆ ವರದಿಯಾಗಿದೆ.
ಹರಿದ್ರಾವತಿ ಮೀಸಲು ಅರಣ್ಯದಲ್ಲಿ ಶ್ರೀಗಂಧ ಮರಗಳನ್ನು ಕಡಿದು ಕಳ್ಳ ಸಾಗಾಣಿಕೆ ಮಾಡುತ್ತಿರುವ ಬಗ್ಗೆ ಖಚಿತ ಮಾಹಿತಿ ಪಡೆದ ಅರಣ್ಯಾಧಿಕಾರಿಗಳು ದಾಳಿ ನಡೆಸಿ ಆರೋಪಿಗಳನ್ನು ಬಂಧಿಸಿದ್ದಾರೆ.
ಈ ಕಾರ್ಯಾಚರಣೆಯಲ್ಲಿ ಸಂಚಾರಿ ದಳದ ಪಿಎಸ್‌ಐ ವಿನಾಯಕ, ಹೊಸನಗರ ವಲಯ ಅರಣ್ಯಾಧಿಕಾರಿ ಅನಿಲ್ ಕುಮಾರ್ ಹಾಗೂ ಅರಣ್ಯ ಇಲಾಖೆ ಸಿಬ್ಬಂದಿಗಳು ಭಾಗವಹಿಸಿದ್ದರು.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
