ಕಲ್ಪ ಮೀಡಿಯಾ ಹೌಸ್ | |
ಹೊಸಪೇಟೆ (ವಿಜಯನಗರ): ನೂತನ ವಿಜಯನಗರ ಜಿಲ್ಲೆಗೆ ಜಿಲ್ಲಾಧಿಕಾರಿ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳನ್ನು ನೇಮಕ ಮಾಡಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ.

ಅನಿರುದ್ಧ್ ಪಿ. ಶ್ರವಣ್ ಅವರನ್ನು ಜಿಲ್ಲಾಧಿಕಾರಿ, ಕೆ. ಅರುಣ್ ಅವರನ್ನು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಯಾಗಿ ನೇಮಕ ಮಾಡಲಾಗಿದೆ.
ಅನಿರುದ್ಧ್ ಅವರು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯ ಆಯುಕ್ತರಾಗಿ, ವಿಜಯನಗರ ಜಿಲ್ಲೆ ವಿಶೇಷ ಅಧಿಕಾರಿಯಾಗಿ ಕೆಲಸ ನಿರ್ವಹಿಸುತ್ತಿದ್ದರು.

ಅರುಣ್ ಅವರು ಬೆಂಗಳೂರಿನ ಬಿಎಂಟಿಸಿಯಲ್ಲಿ ಸುರಕ್ಷತೆ ಮತ್ತು ವಿಚಕ್ಷಣಾ ದಳದ ನಿರ್ದೇಶಕರಾಗಿ ಕೆಲಸ ಮಾಡುತ್ತಿದ್ದರು. ಇಬ್ಬರನ್ನು ತಕ್ಷಣದಿಂದಲೇ ಜಾರಿಗೆ ಬರುವಂತೆ ನೇಮಕ ಮಾಡಿ ಸರ್ಕಾರ ಆದೇಶ ಹೊರಡಿಸಿದೆ.


ವರದಿ: ಮುರುಳೀಧರ್ ನಾಡಿಗೇರ್
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
















