ಕಲ್ಪ ಮೀಡಿಯಾ ಹೌಸ್ | ಹೊಸಪೇಟೆ |
ರಾಜ್ಯ ಬಿಜೆಪಿ ಕಾರ್ಯಕಾರಿಣಿ ಸಭೆ ಏ. 16,17 ರಂದು ಹೊಸಪೇಟೆ ನಗರದಲ್ಲಿ ಆಯೋಜಿಸಲಾಗಿದ್ದು, ವೈಭವದ ಸ್ವಾಗತಕ್ಕೆ ಅಣಿಯಾಗಿದೆ. ಜೆ.ಪಿ ನಡ್ಡಾ , J P Nadda ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ CM Basavaraja Bommai ಸೇರಿದಂತೆ ಪ್ರಮುಖರು ಈ ಸಭೆಯಲ್ಲಿ ಭಾಗಿಯಾಗಲಿದ್ದಾರೆ.
ಹೊಸಪೇಟೆ ನಗರದಲ್ಲಿರುವ ಸಚಿವ ಆನಂದ್ ಸಿಂಗ್ ಮನೆಯ ಸುತ್ತಮುತ್ತಲಿನ ಪ್ರದೇಶದಲ್ಲಿ ವೇದಿಕೆ ಸಜ್ಜಾಗಿದ್ದು, ರಾಜ್ಯದಲ್ಲಿ ಬಿಜೆಪಿ ಪಕ್ಷದ ಮುಂದಿನ ಕಾರ್ಯಚಟುವಟಿಕೆ ಹಾಗೂ ಬಲವರ್ಧನೆ ಕುರಿತಾಗಿ ಸಭೆಯಲ್ಲಿ ಪ್ರಮುಖ ಸಲಹೆ ಸೂಚನೆಗಳನ್ನು ಬಿಜೆಪಿ ರಾಷ್ಟ್ರೀಯ ಆಧ್ಯಕ್ಷ ಜೆಪಿ ನಡ್ಡಾ ಅವರು ನೀಡುವ ಸೂಚನೆ ಇದೆ.
ಕಲ್ಯಾಣ ಕರ್ನಾಟಕದ ಹೆಬ್ಬಾಗಿಲು ಐತಿಹಾಸಿಕ ನೂತನ ವಿಜಯನಗರ ಜಿಲ್ಲಾ ಕೇಂದ್ರ ಹೊಸಪೇಟೆಯಲ್ಲಿ ಬಿಜೆಪಿಯ ರಾಜ್ಯ ಕಾರ್ಯಕಾರಿಣಿ ಸಭೆ ವೈಭವ ಹಾಗೂ ಹಂಪೆಯ ಉತ್ಸವದಂತೆ ಆಯೋಜಿಸಿ, ಅನಂದ್ ಸಿಂಗ್ ಹಾಗೂ ಜಲ್ಲಾ ಉಸ್ತುವಾರಿ ಸಚಿವರಾದ ಶಶಿಕಲಾ ಜೋಲ್ಲೆ ಸಮಾರಂಭದ ಚಟುವಟಿಕೆಗಳನ್ನು ವಿಕ್ಷಿಸಿದರು.
2023ರ ವಿಧಾನಸಭೆ ಚುನಾವಣೆಯನ್ನು ದೃಷ್ಟಿಯಲ್ಲಿಟ್ಟುಕೊಂಡು ಕಲ್ಯಾಣ ಕರ್ನಾಟಕದ ನೂತನ ವಿಜಯನಗರ ಜಿಲ್ಲೆಯಲ್ಲಿ ರಾಜ್ಯ ಕಾರ್ಯಕಾರಿಣಿಯು ಈ ಹಿಂದೆ ಕಳೆದ ಮಾರ್ಚ್ 28 ಮತ್ತು 29ರಂದು ನಿಗದಿಗೊಳಿಸಲಾಗಿತ್ತು. ಅದರೆ ಅನೇಕ ಸಚಿವರು ಮತ್ತು ರಾಷ್ಟ್ರೀಯ ಅದ್ಯಕ್ಷರ ಅನಿವಾರ್ಯತೆಯಿಂದ ದಿನಾಂಕವನ್ನು ಬದಲಾವಣೆ ಮಾಡಲಾಗಿದೆ. ವಿಜಯನಗರ ಜಿಲ್ಲೆ ರಚನೆಯಾಗಿ ಒಂದು ವರ್ಷ ಪೂರೈಸಿದ್ದು, ಸ್ವತಃ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಜಿಲ್ಲೆಗೆ ಅಕ್ಟೋಬರ್ 2ರಂದು ಚಾಲನೆ ನೀಡಿದ್ದರು. ಆಗಿನ ಸಿಎಂ ಬಿ.ಎಸ್. ಯಡಿಯೂರಪ್ಪನವರು 2021ರ ಫೆಬ್ರವರಿ 8ರಂದು ಜಿಲ್ಲೆಗೆ ಅಧಿಕೃತ ಮುದ್ರೆ ಒತ್ತಿದ್ದರು.
ವಿಜಯನಗರ ಜಿಲ್ಲೆ ರೂವಾರಿ ಕೊಪ್ಪಳ ಜಿಲ್ಲಾ ಉಸ್ತುವಾರಿ ಸಚಿವ ಆನಂದ ಸಿಂಗ್ ತಮ್ಮ ತವರು ಕ್ಷೇತ್ರದಲ್ಲೇ ರಾಜ್ಯ ಕಾರ್ಯಕಾರಣಿ ನಡೆಯಲಿರುವುದರಿಂದ ಅಕ್ಕಪಕ್ಕದ ಜಿಲ್ಲೆಯಲ್ಲೂ ಪಕ್ಷ ಸಂಘಟನೆ ಮಾಡಲು ಅನುಕೂಲ ಆಗಲಿದೆ ಎಂಬ ಅಂಶವನ್ನು ಇಟ್ಟುಕೊಂಡು ಮುಂದಿನ ಬಿಜೆಪಿಯ ಚಿಂತನೆ ಮಾಡಿ ಈ ಸಭೆಯನ್ನು ಹೊಸಪೇಟೆ ನಗರದಲ್ಲಿ ಆಯೋಜಿಸಿರುತ್ತಾರೆ. ಈ ಸಭೆಯಲ್ಲಿ ಸುಮಾರು ಒಂದು ಲಕ್ಷಕ್ಕೂ ಅಧಿಕ ಕಾರ್ಯಕರ್ತರು ಸೇರುವ ಮುನ್ಸೂಚನೆ ಇದೆ.
ವಿಜಯನಗರ ಜಿಲ್ಲೆಯ ಸರ್ವಾಂಗೀಣ ಅಭಿವೃದ್ಧಿಗೆ ಸಾಥ್ ನೀಡುವೆ ಎಂದು ವಿಜಯನಗರ ಜಿಲ್ಲಾ ಉಸ್ತುವಾರಿ ಸಚಿವೆ ಶಶಿಕಲಾ ಜೊಲ್ಲೆ ಮತ್ತು ಪ್ರವಾಸೋದ್ಯಮ ಸಚಿವ ಆನಂದ ಸಿಂಗ್ ಅವರಿಗೆ ಅಭಯ ನೀಡಿದ್ದಾರೆ ಮತ್ತು ಅನಂದ್ ಸಿಂಗ್ ಜೊತೆ ನಿಂತು ಕಾರ್ಯನಿರ್ವಹಿಸುತ್ತಿದ್ದಾರೆ.
ಅನಂದ್ ಸಿಂಗ್ ರವರು ಕೊಪ್ಪಳ ಜಿಲ್ಲೆಯ ಉಸ್ತುವರಿ ಸಚಿವರಾಗಿ ಅನೇಕ ಬದಲಾವಣೆ ಮತ್ತು ಅಭಿವೃದ್ದಿಗಾಗಿ ಶ್ರಮಿಸುತ್ತಿದ್ದು ಕೊಪ್ಪಳ ಭಾಗದಲ್ಲಿ ಈಬಾರಿ ತಮ್ಮ ಮಗ ಸಿದ್ಧಾರ್ಥಸಿಂಗ್ ರವರನ್ನು ನಿಲ್ಲಿಸುವ ಪ್ರಯತ್ನ ಸಹ ಒಂದು ಕಡೆ ಇರುವ ಹಿನ್ನಲೆಯ ಮೇಲೆ ಈ ಬಾರಿ ವಿಜಯನಗರದಲ್ಲೇ ಕಾರ್ಯಕಾರಿಣಿ ಸಭೆ ನಿಗದಿಯಾಗಿದೆ.
ವಿಜಯನಗರ ಜಿಲ್ಲೆಯ ರೆಸಾರ್ಟ್, ಹೋಟೆಲ್‌ಗಳು ಸೇರಿ 450 ರೂಮ್‌ಗಳು ರಾಜ್ಯ ಕಾರ್ಯಕಾರಿಣಿಗಾಗಿ ಬುಕ್ ಆಗಿವೆ. ರಾಜ್ಯ ಕಾರ್ಯಕಾರಿಣಿಯನ್ನು ವಿಜಯನಗರದ ಜಿಲ್ಲಾ ಬಿಜೆಪಿ ಕಚೇರಿ ನಿರ್ಮಾಣಕ್ಕಾಗಿ ನಿಗದಿಗೊಳಿಸಿರುವ ಬೈಪಾಸ್ ರಸ್ತೆಯ ಖಾಲಿ ಜಾಗದಲ್ಲಿ ನಡೆಸಲು ಅಣಿ ಮಾಡಲಾಗಿದೆ.
ಈ ಕಾರ್ಯಕಾರಿಣಿಯಲ್ಲಿ ಭಾಗವಹಿಸಲು ಬಿಜೆಪಿ ರಾಜ್ಯ ಉಸ್ತುವಾರಿ ಅರುಣ ಸಿಂಗ್ ಆಗಮಿಸಲಿದ್ದಾರೆ. ಸಿಎಂ ಬಸವರಾಜ ಬೊಮ್ಮಾಯಿ, ಮಾಜಿ ಸಿಎಂ ಬಿಎಸ್‌ವೈ ಸೇರಿದಂತೆ ಮಾಜಿ ಸಿಎಂ ಮತ್ತು ಕೇಂದ್ರ ಸಚಿವರು, ಸಂಸದರು, ರಾಜ್ಯದ ಸಚಿವರು ಮತ್ತು ಶಾಸಕರು ಹಾಗೂ ಪಕ್ಷದ ರಾಜ್ಯ ಪದಾಧಿಕಾರಿಗಳು ಭಾಗವಹಿಸಲಿದ್ದಾರೆ. ಜತೆಗೆ ಪಕ್ಷದ ಆಹ್ವಾನಿತರು ಭಾಗವಹಿಸಲಿದ್ದು, ಈ ಕಾರ್ಯಕಾರಿಣಿಯಲ್ಲಿ ಪಕ್ಷ ಸಂಘಟನೆಯ ಸಂದೇಶವನ್ನು ವರಿಷ್ಠರು ರವಾನಿಸಲಿದ್ದಾರೆ. ಇದರಿಂದ ನೂತನ ಜಿಲ್ಲೆಗೆ ಒಲಿದ ಅದೃಷ್ಟವಾಗಿದೆ.
Also read: ಕಾಂಗ್ರೆಸ್‌ನವರು ಸಾವಿನ ರಾಜಕಾರಣ ಮಾಡುತ್ತಿದ್ದಾರೆ: ಗೃಹ ಸಚಿವ ಆರಗ ಜ್ಞಾನೇಂದ್ರ
ಬಳ್ಳಾರಿಯಲ್ಲಿ ರಾಜ್ಯ ಕಾರ್ಯಕಾರಿಣಿ ನಡೆಸಲು ಕಳೆದ ಮೂರು ವರ್ಷಗಳಿಂದ ಸತತ ಕೋರಿಕೆ ಸಲ್ಲಿಸಲಾಗಿತ್ತು. ಆದರೆ, ಅಲ್ಲಿ ರಾಜ್ಯ ಕಾರ್ಯಕಾರಿಣಿ ನಡೆಸುವ ಆಶಯ ಈಡೇರಿಲ್ಲ. ನೂತನ ವಿಜಯನಗರಕ್ಕೆ ಜಿಲ್ಲೆ ರಚನೆಯಾದ ವರ್ಷದ ಬಳಿಕ ಆ ಅದೃಷ್ಟ ಒದಗಿ ಬಂದಿದೆ.
ವಿಜಯನಗರ ಜಿಲ್ಲೆಯ ಹೊಸಪೇಟೆಯಲ್ಲಿ ಬಿಜೆಪಿ ರಾಜ್ಯ ಕಾರ್ಯಕಾರಣಿ ಸಭೆಗೆ ಈಗಾಗಲೇ ಸಕಲ ಸಿದ್ಧತೆ ಮಾಡಿಕೊಳ್ಳಲಾಗುತ್ತಿದೆ ಎಂದು ವಿಜಯನಗರ ಬಿಜೆಪಿ ಜಿಲ್ಲಾಧ್ಯಕ್ಷ ಚನ್ನಬಸವನಗೌಡ ಪಾಟೀಲ್ ತಿಳಿಸಿದ್ದಾರೆ.
ವಿಜಯನಗರದಲ್ಲಿ ರಾಜ್ಯ ಕಾರ್ಯಕಾರಣಿ ನಿಗದಿಯಾಗಿರುವುದು ಪಕ್ಷ ಸಂಘಟನೆಗೆ ಅನುಕೂಲ ಮತ್ತು ಕಲ್ಯಾಣ ಕರ್ನಾಟಕ ಭಾಗದಲ್ಲಿ ಪಕ್ಷದ ಬಲವರ್ಧನೆಗೂ ಅನುಕೂಲ ಆಗಲಿದೆ ಅಂತ ವಿಜಯನಗರ ಬಿಜೆಪಿ ಜಿಲ್ಲಾ ಉಪಾಧ್ಯಕ್ಷ ಅಯ್ಯಾಳಿ ತಿಮ್ಮಪ್ಪ ಹೇಳಿದ್ದಾರೆ.
ಸಂಸದ ಡಾ. ಉಮೇಶ್ ಜಾಧವ್, ಗ್ರಾಮೀಣಾಭಿವೃದ್ಧಿ ಸಚಿವ ಕೆ.ಎಸ್. ಈಶ್ವರಪ್ಪ, ಕಂದಾಯ ಸಚಿವ ಆರ್ ಅಶೋಕ್, ಜಲಸಂಪನ್ಮೂಲ ಸಚಿವರಾದ ಗೋವಿಂದ ಕಾರಜೋಳ, ಉನ್ನತ ಶಿಕ್ಷಣ ಸಚಿವರಾದ ಡಾಕ್ಟರ್ ಸಿ.ಎನ್.ಅಶ್ವತ್ಥನಾರಾಯಣ್, ಮಾಜಿ ಉಪ ಮುಖ್ಯಮಂತ್ರಿಗಳಾದ ಲಕ್ಷ್ಮಣ ಸವದಿ, ಸಮಾಜ ಕಲ್ಯಾಣ ಸಚಿವರಾದ ಕೋಟ ಶ್ರೀನಿವಾಸ್ ಪೂಜಾರಿ, ರಾಜ್ಯ ಸಂಘಟನಾ ಪ್ರಧಾನ ಕಾರ್ಯದರ್ಶಿಗಳಾದ ಅರುಣ್ ಕುಮಾರ್, ರಾಜ್ಯ ಉಪಾಧ್ಯಕ್ಷರಾದ ನಿರ್ಮಲ್ ಕುಮಾರ್ ಸುರಾಣ ಅವರು ಕೂಡಾ ಆಹ್ವಾನವನ್ನು ನೀಡಿರುತ್ತಾರೆ
ಬಿಜೆಪಿ ರಾಜ್ಯ ಕಾರ್ಯಕಾರಿಣಿ ಸಭೆಯಲ್ಲಿ ಪಕ್ಷದ ಬೆಳವಣಿಗೆ ಹಾಗೂ ಮುಂದಿನ ಕಾರ್ಯ ಯೋಜನೆಗಳ ಬಗ್ಗೆ ಚರ್ಚೆಗಳಾಗಿವೆ. ರಾಷ್ಟ್ರೀಯ ಅಧ್ಯಕ್ಷ ಜೆ.ಪಿ. ನಡ್ಡಾ ಅವರು ಕೆಲವೊಂದು ಮಹತ್ವದ ಸಲಹೆ ಸೂಚನೆಗಳನ್ನು ನೀಡುವ ಸೂಚನೆ ಇದೆ.
ಬರುವ 2023ರ ಚುನಾವಣೆಯ ದೃಷ್ಟಿಯಲ್ಲಿ ಪಕ್ಷದ ಬಲವರ್ಧನೆ, ಕೇಂದ್ರ ಹಾಗೂ ರಾಜ್ಯ ಸರ್ಕಾರಗಳ ಯೋಜನೆಗಳ ಕುರಿತಾದ ಮಾಹಿತಿಗಳನ್ನು ಜನರಿಗೆ ತಲುಪಿಸುವುದು ಈ ಸಭೆಯ ಮುಖ್ಯವಾದ ಉದ್ದೇಶವಾಗಿದೆ. ಸರ್ಕಾರದ ಅಭಿವೃದ್ದಿ ಕೆಲಸ ಕಾರ್ಯಗಳ ಕುರಿತಾಗಿಯೂ ಮಾಹಿತಿಯನ್ನು ಒದಗಿಸುವುದು ಈ ಮೂಲಕ ಪಕ್ಷದ ಪರವಾದ ಜನಾಭಿಪ್ರಾಯ ಮೂಡಿಸುವಲ್ಲಿ ಏನೆಲ್ಲಾ ಕ್ರಮಗಳನ್ನು ಕೈಗೊಳ್ಳಬೇಕು ಎಂಬ ನಿಟ್ಟಿನಲ್ಲಿ ಸೂಚನೆಗಳನ್ನು ನೀಡಲಾಗಿದೆ ಎಂದು ತಿಳಿದುಬಂದಿದೆ.
ವರದಿ: ಮುರುಳೀಧರ್ ನಾಡಿಗೇರ್, ಹೊಸಪೇಟೆ – ವಿಜಯನಗರ
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
Discussion about this post