No Result
View All Result
Rani KoHEnur Calls Transgender Bill “Absurd”, Questions Lawmakers in Explosive Podcast Interview
English Articles

Rani KoHEnur Calls Transgender Bill “Absurd”, Questions Lawmakers in Explosive Podcast Interview

by ಕಲ್ಪ ನ್ಯೂಸ್
April 9, 2026
0

Kalpa Media House  |  Mumbai | Artist, drag performer, and activist Rani KoHEnur (Sushant Divgikar) has ignited widespread conversation following...

Read moreDetails
RPF team Seized 40.495 Kgs Ganja at Ballari Railway station

RPF team Seized 40.495 Kgs Ganja at Ballari Railway station

April 7, 2026
ಶ್ರೀ ಕೊಟ್ಟೂರೇಶ್ವರ ಜಾತ್ರೆ ಪ್ರಯುಕ್ತ | ಹೊಸಪೇಟೆ – ತೊಳಹುಣಸೆ ನಡುವೆ ವಿಶೇಷ ರೈಲು ಸಂಚಾರ

Extension of Special Train Services to Manage Summer Rush

April 7, 2026
Interior / upgradation of Next-Generation Amrit Bharat Coaches. Sample coach ready

Interior / upgradation of Next-Generation Amrit Bharat Coaches. Sample coach ready

April 6, 2026
ಶ್ರೀ ಕೊಟ್ಟೂರೇಶ್ವರ ಜಾತ್ರೆ ಪ್ರಯುಕ್ತ | ಹೊಸಪೇಟೆ – ತೊಳಹುಣಸೆ ನಡುವೆ ವಿಶೇಷ ರೈಲು ಸಂಚಾರ

Special Train Between Bengaluru Cantt and Chennai

April 3, 2026
  • Advertise With Us
  • Grievances
  • About Us
  • Contact Us
Sunday, April 12, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಬಳ್ಳಾರಿ

ತುಂಗಾ ಭದ್ರಾ ಜಲಾಶಯ ಭರ್ತಿ: ಲಕ್ಷಕ್ಕೂ ಅಧಿಕ ಕ್ಯೂಸೆಕ್ಸ್ ನೀರು ಹೊರ ಹರಿವು

ಕಲ್ಪ ನ್ಯೂಸ್ by ಕಲ್ಪ ನ್ಯೂಸ್
July 14, 2022
in ಬಳ್ಳಾರಿ
0
ತುಂಗಾ ಭದ್ರಾ ಜಲಾಶಯ ಭರ್ತಿ: ಲಕ್ಷಕ್ಕೂ ಅಧಿಕ ಕ್ಯೂಸೆಕ್ಸ್ ನೀರು ಹೊರ ಹರಿವು
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್   |  ಹೊಸಪೇಟೆ  |      

ರಾಜ್ಯದ ಮೂರು ಜಿಲ್ಲೆಗಳು ಮತ್ತು ನೆರೆಯ ಆಂಧ್ರ-ತೆಲಂಗಾಣದ ಜೀವನಾಡಿ ತುಂಗಭದ್ರಾ ಜಲಾಶಯ Tunga-Bhadra Dam ಭರ್ತಿಯಾದ ಹಿನ್ನೆಲೆಯಲ್ಲಿ ಮಂಗಳವಾರ ನದಿ ಮತ್ತು ಕಾಲುವೆಗೆ ನೀರು ಹರಿಸಲಾಯಿತು. ತುಂಗಭದ್ರ ಮಂಡಳಿ ಕಾರ್ಯದರ್ಶಿ  ಜಿ. ನಾಗಮೋಹನ್ ಪೂಜೆ ನೆರವೇರಿಸಿದ ಬಳಿಕ ಜಲಾಶಯದ 5 ಕ್ರಸ್ಟ್ ಗೇಟ್‌ಗಳ ಮೂಲಕ ನದಿಗೆ ನೀರು ಹರಿಸಲಾಯಿತು. ಒಳ ಹರಿವು ಹೆಚ್ಚಾದ ಕಾರಣ ಗುರುವಾರ ಪೂರ್ಣ ಪ್ರಮಾಣದ ನೀರನ್ನು ಹೊರಬಿಡಲಾಗಿದೆ.

ಹೊಸಪೇಟೆಯ ತುಂಗಭದ್ರಾ ಜಲಾಶಯ ಸಂಪೂರ್ಣ ತುಂಬಿರುವುದರಿಂದ ನದಿಗೆ ಅಪಾರ ಪ್ರಮಾಣದ ನೀರು ಹರಿಸುತ್ತಿರುವ ಹಿನ್ನೆಲೆಯಲ್ಲಿ ವಿಶ್ವಪ್ರಸಿದ್ಧ ಹಂಪಿ ಸ್ಮಾರಕಗಳು ಮುಳುಗಿವೆ. ಹತ್ತಿರದ ಹಂಪಿಯ ಪುರಂದರ ಮಂಟಪ, ವಿಜಯನಗರ ಕಾಲದ ಕಾಲು ಸೇತುವೆ, ರಾಮ ಲಕ್ಷ್ಮಣ ದೇವಸ್ಥಾನ, ಚಕ್ರತೀರ್ಥ ಸ್ನಾನಘಟ್ಟ ತುಂಗಭದ್ರಾ ನದಿ ಪಾತ್ರಕ್ಕೆ ಹೊಂದಿಕೊಂಡಿದ್ದು, ಜಲಾಶಯದ ಒಟ್ಟು 33 ಕ್ರಸ್ಟ್ ಗೇಟ್ ಗಳ ಪೈಕಿ 28 ಗೇಟ್ ಗಳಿಂದ ನದಿಗೆ ಒಂದು ಲಕ್ಷ ಕ್ಯುಸೆಕ್’ಗೂ ಅಧಿಕ ನೀರು ನದಿಗೆ ಹರಿಸಲಾಗುತ್ತಿದೆ. 105.788 ಟಿಎಂಸಿ ಅಡಿ ನೀರು ಸಂಗ್ರಹ ಸಾಮರ್ಥ್ಯದ ಜಲಾಶಯ ಈಗಾಗಲೇ ಸಂಪೂರ್ಣ ಭರ್ತಿಯಾಗಿದೆ. ಒಂದು ಲಕ್ಷ ಕ್ಯುಸೆಕ್’ಗೂ ಅಧಿಕ ಒಳಹರಿವು ಬರುತ್ತಿದೆ ಎಂದು ತಿಳಿದುಬಂದಿದೆ. ಒಂದೂವರೆ ಲಕ್ಷ ಕ್ಯುಸೆಕ್ ನೀರು ಯಾವುದೇ ಕ್ಷಣದಲ್ಲೂ ನದಿಗೆ ಹರಿಸಲಾಗುವುದು. ಜನ ಮುನ್ನೆಚ್ಚರಿಕೆ ವಹಿಸಬೇಕೆಂದು ಜಲಾಶಯ ಆಡಳಿತ ಮಂಡಳಿ ತಿಳಿಸಿದ್ದಾರೆ.
ತುಂಗಭದ್ರಾ ಜಲಾಶಯದಿಂದ ನದಿಗೆ ಒಂದು ಲಕ್ಷ ಕ್ಯುಸೆಕ್ ನೀರು ಹರಿಸುತ್ತಿರುವುದರಿಂದ ಕಂಪ್ಲಿ-ಗಂಗಾವತಿ ಸೇತುವೆ ಮುಳುಗುವ ಹಂತಕ್ಕೆ ಬಂದಿದ್ದು, ಸಾರ್ವಜನಿಕ ಸಂಚಾರ ನಿರ್ಬಂಧಿಸಲಾಗಿದೆ. ವಾಹನಗಳು ಬುಕ್ಕಸಾಗರ-ಕಡೇಬಾಗಿಲು ಹೊಸ ಸೇತುವೆ ಮೂಲಕ ಸಂಚರಿಸುತ್ತಿವೆ. 600 ವರ್ಷಗಳ ಹಿಂದೆ ನಿರ್ಮಿಸಿರುವ ಪುರಂದರ ಮಂಟಪದ ಕಂಬವನ್ನು ಎಎಸ್‌ಐ ನಿಯಮಿತ ನಿರ್ವಹಣೆಗೆ ವಹಿಸುತ್ತದೆ. ಎಷ್ಟೋ ವರ್ಷಗಳಿಂದ ಕಂಬಗಳು ಗಟ್ಟಿಯಾಗಿ ನಿಂತಿವೆ. ಆದರೆ ಕಳೆದ ಕೆಲ ವರ್ಷಗಳಿಂದ ಮಳೆಯ ಪ್ರಮಾಣ ಹೆಚ್ಚಾಗಿದ್ದರಿಂದ ಮಂಟಪ ಮೊದಲಿಗಿಂತ ಹೆಚ್ಚು ಮುಳುಗಡೆಯಾಗುತ್ತಿದೆ. ನೀರಿನ ಮಟ್ಟ ಕಡಿಮೆಯಾದ ನಂತರ ಎಎಸ್‌ಐ ತಂಡವು ಪರಿಸ್ಥಿತಿಯನ್ನು ಪರಿಶೀಲಿಸಿ ದುರಸ್ತಿ ಕಾರ್ಯ ಅಗತ್ಯವಿದ್ದರೆ ಮಾಡಲಾಗುವುದು ಎಂದು ಅಧಿಕಾರಿಗಳು ಹೇಳಿದ್ದಾರೆ.

ಹಂಪಿ ಯುನೆಸ್ಕೋ ಪರಂಪರೆಯ ತಾಣವಾಗಿರುವುದರಿಂದ ಯಾವುದೇ ಸ್ಮಾರಕಗಳನ್ನು ಮರುಸ್ಥಾಪಿಸಲು ನಾವು ಸಿಮೆಂಟ್ ಸೇರಿದಂತೆ ಕೃತಕ ವಸ್ತುಗಳನ್ನು ಬಳಸುವುದಿಲ್ಲ. ಕಲ್ಲು ಮತ್ತು ಕಲ್ಲಿನ ಚಪ್ಪಡಿಗಳನ್ನು ಬಳಸಲಾಗುತ್ತದೆ. ಕಳೆದ ವರ್ಷ ಅತಿವೃಷ್ಟಿಯಿಂದಾಗಿ ಹಂಪಿಯಲ್ಲಿ ಮೂರು ಕಟ್ಟಡಗಳು ಭಾಗಶಃ ಹಾನಿಗೊಳಗಾಗಿದ್ದವು. ಜೀರ್ಣೋದ್ಧಾರ ಕಾರ್ಯ ನಡೆಯುತ್ತಿದೆ. ಇತರ ಸ್ಮಾರಕಗಳು ಶಿಥಿಲಗೊಂಡಿವೆ ಎನ್ನುತ್ತಾರೆ ಅಧಿಕಾರಿಗಳು.
ಹಂಪಿಗೆ ಬರುವ ಪ್ರವಾಸಿಗರು ಪುರಂದರ ಮಂಟಪದಲ್ಲಿ ಫೋಟೋಗಳನ್ನು ತೆಗೆಯುವುದು ಸಾಮಾನ್ಯ. ಹಂಪಿಯನ್ನು ಬೇರೆ ಅನೇಕ ಸ್ಮಾರಕಗಳಿದ್ದರೂ ಕೂಡ ಬಹುತೇಕ ಪ್ರವಾಸಿಗರು ಇಲ್ಲಿ ಫೋಟೋ ತೆಗೆದುಕೊಳ್ಳದೆ ಹಿಂತಿರುಗುವುದಿಲ್ಲ, ನೀರಿನ ಮಟ್ಟ ಸಹಜ ಮಟ್ಟಕ್ಕೆ ಬರಲು ಪ್ರವಾಸಿಗರು ಕೂಡ ಕಾಯುತ್ತಿದ್ದಾರೆ. ಮುನ್ನೆಚ್ಚರಿಕೆ ಕ್ರಮವಾಗಿ ಪ್ರವಾಸಿಗರಿಗೆ ನದಿ ಪ್ರದೇಶದಲ್ಲಿ ನಿರ್ಬಂಧ ಹೇರಲಾಗಿದೆ.

ತುಂಗಭದ್ರಾ ಜಲಾಶಯದಿಂದ ನೀರು ಬಿಟ್ಟಿರುವುದರಿಂದ ಪ್ರವಾಹ ಭೀತಿ ಉಂಟಾಗಬಹುದು ಎಂದು ಈಗಾಗಲೇ ವಿಜಯನಗರ, ಬಳ್ಳಾರಿ, ರಾಯಚೂರು, ಕೊಪ್ಪಳ ಮತ್ತು ಆಂಧ್ರ ಪ್ರದೇಶದ ಕರ್ನೂಲ್ ಜಿಲ್ಲಾಡಳಿತಗಳು ಅಗತ್ಯ ಮುನ್ನೆಚ್ಚರಿಕಾ ಕ್ರಮಗಳನ್ನು ಕೈಗೊಳ್ಳುವಂತೆ ಮಂಡಳಿ ತಿಳಿಸಿದೆ.
ಜಲಾಶಯ ಪೂರ್ಣವಾಗಿ ಡ್ಯಾಂ ಗೇಟ್ ಓಪನ್ ಮಾಡಿ ಹೊರ ಬಂದ ನದಿ ನೀರನ್ನು ನೋಡಲು ಹೆಚ್ಚು ಹೆಚ್ಚು ಜನ ಬರುತ್ತಿದ್ದಾರೆ. ಇದರಿಂದ ವಾಹನ ಓಡಾಟಕ್ಕೆ ಸಾಯಂಕಾಲ ತೊಂದರೆ ಆಗುತ್ತಿದೆ‌ ಇದರುಂದ ಪೋಲಿಸ್ ಇಲಾಖೆ ಹರಸಹಾಸ ಮಾಡುತ್ತಿರುವುದು ಕಂಡುಬಂದಿದೆ. ತುಂಗಭದ್ರಾ ಜಲಾನಯನ ಪ್ರದೇಶದಲ್ಲಿ ಮಳೆ ಮುಂದುವರೆದಿದೆ. ಶ್ರೀ ಗುರು ರಾಯರ ಆರಾಧನೆ ಹತ್ತಿರದಲ್ಲಿ ಇದ್ದು ಪ್ರತಿ ವರ್ಷದಂತೆ ಈ ಬಾರಿ ಮುಂಚಿತವಾಗಿ ಆಶೀರ್ವದಿಸಲು ಮಂತ್ರಾಲಯದ ಕಡೆ ಹರಿಯುತ್ತಿರುವ ದೃಶ್ಯ ಪ್ರವಾಸಿಗರ ಆಕರ್ಷಣೆಯಾಗಿದೆ.
(ವರದಿ: ಮುರಳೀಧರ ನಾಡಿಗೇರ್)

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news

Tags: BellaryHosapeteKannada News WebsiteKannadaNewsKannadaNewsLiveKannadaNewsOnlineKannadaWebsiteLatest News KannadaNewsinKannadaNewsKannadaTunga Bhadra Damತುಂಗಭದ್ರಾ ಜಲಾಶಯಹೊಸಪೇಟೆ
Share197Tweet123Send
Previous Post

ಆಟವಾಡುತ್ತಿದ್ದ ಬಾಲಕ ಮನೆಯ ಪಕ್ಕದ ನೀರಿನ ಹೊಂಡಕ್ಕೆ ಬಿದ್ದು ಸಾವು

Next Post

ಪರಿಸರ ಉಳಿವಿಗೆ ಪ್ರತಿ ನಗರದಲ್ಲೂ ಲಂಗ್ಸ್ ಸ್ಪೇಸ್ ನಿರ್ಮಾಣಕ್ಕೆ ಚಿಂತನೆ: ಚಕ್ರವರ್ತಿ ಸೂಲಿಬೆಲೆ

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post
ಪರಿಸರ ಉಳಿವಿಗೆ ಪ್ರತಿ ನಗರದಲ್ಲೂ ಲಂಗ್ಸ್ ಸ್ಪೇಸ್ ನಿರ್ಮಾಣಕ್ಕೆ ಚಿಂತನೆ: ಚಕ್ರವರ್ತಿ ಸೂಲಿಬೆಲೆ

ಪರಿಸರ ಉಳಿವಿಗೆ ಪ್ರತಿ ನಗರದಲ್ಲೂ ಲಂಗ್ಸ್ ಸ್ಪೇಸ್ ನಿರ್ಮಾಣಕ್ಕೆ ಚಿಂತನೆ: ಚಕ್ರವರ್ತಿ ಸೂಲಿಬೆಲೆ

Leave a Reply Cancel reply

Your email address will not be published. Required fields are marked *

  • Trending
  • Latest
ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

February 4, 2026
ಸೊರಬದಲ್ಲೊಂದು ಅತಿ ಘೋರ | 5 ತಿಂಗಳ ಗರ್ಭಿಣಿ ಸೊಸೆಯನ್ನು ಜೀವಂತ ಸುಟ್ಟ ರಾಕ್ಷಸರು

ಸೊರಬದಲ್ಲೊಂದು ಅತಿ ಘೋರ | 5 ತಿಂಗಳ ಗರ್ಭಿಣಿ ಸೊಸೆಯನ್ನು ಜೀವಂತ ಸುಟ್ಟ ರಾಕ್ಷಸರು

April 3, 2026
ಅರಸಾಳಿನಿಂದ ಶೃಂಗೇರಿ-ಚಿಕ್ಕಮಗಳೂರು ಮೂಲಕ ಹಾಸನ ರೈಲು ಸಂಪರ್ಕ | ಎಂಪಿ ರಾಘವೇಂದ್ರ ಹೇಳಿದ್ದೇನು?

ಯಶವಂತಪುರ-ಶಿವಮೊಗ್ಗ ರೈಲು ತಾಳಗುಪ್ಪಕ್ಕೆ ತಾತ್ಕಾಲಿಕ ವಿಸ್ತರಣೆ | ಶೀಘ್ರ ಆದೇಶ | ಎಂಪಿ ರಾಘವೇಂದ್ರ

January 29, 2026
ಶಿವಮೊಗ್ಗ | ಮೆಗ್ಗಾನ್ ಆಸ್ಪತ್ರೆ ಆವರಣದಲ್ಲಿ ಭೀಕರ ಅಪಘಾತ | ಕಾರ್ಕಳ ಮೂಲದ ವಿದ್ಯಾರ್ಥಿನಿ ದುರ್ಮರಣ

ಶಿವಮೊಗ್ಗ | ಮೆಗ್ಗಾನ್ ಆಸ್ಪತ್ರೆ ಆವರಣದಲ್ಲಿ ಭೀಕರ ಅಪಘಾತ | ಕಾರ್ಕಳ ಮೂಲದ ವಿದ್ಯಾರ್ಥಿನಿ ದುರ್ಮರಣ

March 12, 2026
ಮಲೆನಾಡಿನಿಂದ ಕರಾವಳಿ, ಹುಬ್ಬಳ್ಳಿ ರೈಲು ಸಂಪರ್ಕ | ಶಿವಮೊಗ್ಗದಿಂದ ಈ ಎಲ್ಲಾ ಕಡೆಗಳಿಗೆ ನೂತನ ಮಾರ್ಗ?

ಮಲೆನಾಡಿನಿಂದ ಕರಾವಳಿ, ಹುಬ್ಬಳ್ಳಿ ರೈಲು ಸಂಪರ್ಕ | ಶಿವಮೊಗ್ಗದಿಂದ ಈ ಎಲ್ಲಾ ಕಡೆಗಳಿಗೆ ನೂತನ ಮಾರ್ಗ?

January 16, 2026
ಸಂಗೀತ ಲೋಕದ ಧ್ರುವತಾರೆ, ಖ್ಯಾತ ಗಾಯಕಿ ಆಶಾ ಭೋಂಸ್ಲೆ ವಿಧಿವಶ

ಸಂಗೀತ ಲೋಕದ ಧ್ರುವತಾರೆ, ಖ್ಯಾತ ಗಾಯಕಿ ಆಶಾ ಭೋಂಸ್ಲೆ ವಿಧಿವಶ

April 12, 2026
ಶರಾವತಿ ಪಂಪ್ಡ್ ಸ್ಟೋರೇಜ್ ಯೋಜನೆ ವಿರೋಧಿಸಿ ಏ.16ರಂದು ಬೃಹತ್ ರ್‍ಯಾಲಿ

ಶರಾವತಿ ಪಂಪ್ಡ್ ಸ್ಟೋರೇಜ್ ಯೋಜನೆ ವಿರೋಧಿಸಿ ಏ.16ರಂದು ಬೃಹತ್ ರ್‍ಯಾಲಿ

April 11, 2026
ಶ್ರೀ ರವಿಶಂಕರ್ ಗುರೂಜಿಯವರ 70ನೇ ಜನ್ಮೋತ್ಸವ | ಏ.14ರಿಂದ ಆರು ದಿನ ವಿಶೇಷ ಸುದರ್ಶನ ಕ್ರಿಯಾ ಶಿಬಿರ

ಶ್ರೀ ರವಿಶಂಕರ್ ಗುರೂಜಿಯವರ 70ನೇ ಜನ್ಮೋತ್ಸವ | ಏ.14ರಿಂದ ಆರು ದಿನ ವಿಶೇಷ ಸುದರ್ಶನ ಕ್ರಿಯಾ ಶಿಬಿರ

April 11, 2026
ಉತ್ತಮ ವ್ಯಕ್ತಿತ್ವ ರೂಪಿಸುವುದೇ ಎನ್‌ಎಸ್‌ಎಸ್‌ ಮುಖ್ಯ ಉದ್ದೇಶ: ಶುಭ ಮರವಂತೆ ಅಭಿಪ್ರಾಯ

ಉತ್ತಮ ವ್ಯಕ್ತಿತ್ವ ರೂಪಿಸುವುದೇ ಎನ್‌ಎಸ್‌ಎಸ್‌ ಮುಖ್ಯ ಉದ್ದೇಶ: ಶುಭ ಮರವಂತೆ ಅಭಿಪ್ರಾಯ

April 11, 2026
ಪಾರಂಪರಿಕ ಕಲೆಯ ಪುನರುಜ್ಜೀವನ ಅಭಿನಂದನೀಯ: ಹೊಂದಾಸನ ಧರ್ಮಪ್ಪ ಮೆಚ್ಚುಗೆ

ಪಾರಂಪರಿಕ ಕಲೆಯ ಪುನರುಜ್ಜೀವನ ಅಭಿನಂದನೀಯ: ಹೊಂದಾಸನ ಧರ್ಮಪ್ಪ ಮೆಚ್ಚುಗೆ

April 11, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL