ಕಲ್ಪ ಮೀಡಿಯಾ ಹೌಸ್ | ಹೊಸಪೇಟೆ |
ಭಾರೀ ಮಳೆಗೆ Heavy rain ತಾಲ್ಲೂಕು ಸೇರಿದಂತೆ ಜಿಲ್ಲೆಯ ಹಲವೆಡೆ ಅಪಾರ ಪ್ರಮಾಣದ ಬೆಳೆ ನಷ್ಟವಾಗಿದೆ. ಸಮೀಕ್ಷೆಯ ಬಳಿಕ ಎಷ್ಟು ಎಕರೆ ಬೆಳೆ ಹಾನಿಯಾಗಿದೆ ಎಂಬ ಮಾಹಿತಿ ಲಭ್ಯವಾಗಲಿದೆ.
ತಾಲ್ಲೂಕಿನ ಧರ್ಮಸಾಗರದಲ್ಲಿ ಹತ್ತಿ, ಮೆಣಸಿನಕಾಯಿ ಬೆಳೆ ಜಲಾವೃತವಾದರೆ, ಹಂಪಿ, ಕಡ್ಡಿರಾಂಪುರದಲ್ಲಿ ಬಾಳೆ ತೋಟ ಹಾಗೂ ಹಗರಿಬೊಮ್ಮನಹಳ್ಳಿ, ಹರಪನಹಳ್ಳಿಯಲ್ಲಿ ಮನೆಗಳಿಗೆ ನೀರು ನುಗ್ಗಿದೆ.
ಜಿಲ್ಲೆಯ ಹೆಚ್ಚಿನ ಕಡೆಗಳಲ್ಲಿ ಮಂಗಳವಾರ ನಸುಕಿನ ಜಾವ ಐದು ಗಂಟೆಯಿಂದ ಹತ್ತು ಗಂಟೆಯವರೆಗೆ ಬಿರುಸಿನ ಮಳೆಯಾಗಿದೆ. ಈಗ ರಭಸದ ಮಳೆ ನಿಂತಿದ್ದು, ತುಂತುರು ಮಳೆಯಾಗುತ್ತಿದೆ.
Also read: ಶಿವಮೊಗ್ಗದಲ್ಲಿ ಮತ್ತೊಂದು ಮರ್ಡರ್: ಹುಚ್ಚ ಕಿರಣ ಭೀಕರ ಹತ್ಯೆ
ಜಿಲ್ಲಾಡಳಿತ ಈಗಾಗಲೇ ಜಿಲ್ಲೆಯ ಎಲ್ಲ ಶಾಲೆಗಳಿಗೆ ರಜೆ ಘೋಷಿಸಿದೆ. ಬೆಳಗಿನ ವೇಳೆ ಜೋರು ಮಳೆ ಬಿದ್ದದ್ದರಿಂದ ಹಾಲು, ದಿನಪತ್ರಿಕೆ ಪೂರೈಕೆಯಲ್ಲಿ ವ್ಯತ್ಯಯ ಉಂಟಾಗಿತ್ತು. ದೈನಂದಿನ ಕೆಲಸಕ್ಕೆಹೋಗುವವರು ಮಳೆಯಲ್ಲೇ ಕೊಡೆ ಹಿಡಿದುಕೊಂಡು ಹೆಜ್ಜೆ ಹಾಕಿದರು. ಬಿರುಸಿನ ಮಳೆಗೆ ಜನಜೀವನ ಸಂಪೂರ್ಣ ಅಸ್ತವ್ಯಸ್ತಗೊಂಡಿದೆ.
ವರದಿ: ಮುರಳೀಧರ ನಾಡಿಗೇರ್
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
Discussion about this post