ಕಲ್ಪ ಮೀಡಿಯಾ ಹೌಸ್
ಹೊಸಪೇಟೆ: ತುಂಗಭದ್ರ್ರ ಆಣೆಕಟ್ಟೆಗೆ ಒಳಹರಿವು ಹೆಚ್ಚಾಗಿರುವ ಹಿನ್ನೆಲೆಯಲ್ಲಿ ಸುಮಾರು 60ಸಾವಿರ ಕ್ಯೂಸೆಕ್ಸ್ ನೀರನ್ನು ನದಿಗೆ ಹರಿಸಲಾಗಿದೆ.
ಕಳೆದ ಮೂರು-ನಾಲ್ಕು ದಿನದಿಂದ ನಿರಂತರವಾಗಿ ಮಳೆಯಾಗುತ್ತಿರುವ ಪರಿಣಾಮ ಆಣೆಕಟ್ಟೆಗೆ ಅಪಾರ ಪ್ರಮಾಣದ ನೀರು ಹರಿದುಬರುತ್ತಿದೆ. ಈ ಹಿನ್ನೆಲೆಯಲ್ಲಿ 60ಸಾವಿರ ಕ್ಯೂಸೆಕ್ಸ್ ನೀರನ್ನು ಹೊರಬಿಡಲಾಗಿದ್ದು, ಪರಿಣಾಮವಾಗಿ ಹಂಪಿಯಲ್ಲಿರುವ ಸ್ಮಾರಕಗಳು ಜಲಾವೃತಗೊಂಡಿವೆ.
ಭಾರೀ ಪ್ರಮಾಣದ ನೀರನ್ನು ನದಿಗೆ ಹರಿಸಿರುವ ಹಿನ್ನೆಲೆಯಲ್ಲಿ ತುಂಗಭದ್ರ್ರ್ರ ಉಕ್ಕಿಹರಿಯುತ್ತಿದ್ದು, ನದಿ ಪಾತ್ರದ ಜನರು ಸುರಕ್ಷಿತ ಸ್ಥಳಗಳಿಗೆ ತೆರಳುವಂತೆ ಹಾಗೂ ನದಿಗೆ ಯಾರೂ ಇಳಿಯದಂತೆ ಅಧಿಕಾರಿಗಳು ಸೂಚನೆ ನೀಡಿದ್ದಾರೆ.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
Discussion about this post