No Result
View All Result
Stiff fingers Your joints may be sending an early warning
English Articles

Stiff fingers every morning? Your joints may be sending an early warning

by kalpa News
October 12, 2026
0

Kalpa Media House  |  Special Article  | The alarm rings, and you reach out to switch it off. But your...

Read moreDetails
Gudinamana 2026 Classical Music Dance Guru Parampara

Gudi Namana 2026: A Year-Long Musical Tribute to Guru Parampara Across Sacred Spaces

September 29, 2026
Hyderabad Pink Power Run 35K Breast Cancer Awareness copy

Hyderabad Runs Pink : 35,000 Unite For Breast Cancer Awareness

September 27, 2026
swr vigilance awareness campaign 2026 hubballi dharwad

SWR Vigilance Dept Organizes Inter-School Competitions to Promote Integrity & Ethical Values

September 24, 2026
Mysuru Project Assistant Job Kits Leap 22 K Salary

Mysuru Job Alert : Project Assistant Vacancy, 22,000 Salary, Apply by Oct 10

September 21, 2026
  • Advertise With Us
  • Grievances
  • About Us
  • Contact Us
Friday, October 16, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಬಳ್ಳಾರಿ

ಮುಂದಿನ ಚುನಾವಣೆಯಲ್ಲಿ ಬಿಜೆಪಿಯನ್ನು ಬೆಂಬಲಿಸುವಂತೆ ಜೆ.ಪಿ. ನಡ್ಡಾ ಮನವಿ

ಹೊಸಪೇಟೆಯಲ್ಲಿ ಆಯೋಜಿಸಲಾಗಿದ್ದ ಎರಡು ದಿನಗಳ ಬಿಜೆಪಿ ಕಾರ್ಯಕಾರಿಣಿ ಸಭೆ ಸಂಪನ್ನ

kalpa News by kalpa News
April 18, 2022
in ಬಳ್ಳಾರಿ
0
ಮುಂದಿನ ಚುನಾವಣೆಯಲ್ಲಿ ಬಿಜೆಪಿಯನ್ನು ಬೆಂಬಲಿಸುವಂತೆ ಜೆ.ಪಿ. ನಡ್ಡಾ ಮನವಿ
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್   |  ಹೊಸಪೇಟೆ  |

ಇನ್ನು ಒಂದು ವರ್ಷದಲ್ಲಿ ವಿಧಾನಸಭೆ ಚುನಾವಣೆ ನಡೆಯಲಿದೆ. ಮುಂದಿನ ಚುನಾವಣೆಗೆ ಮತ್ತೆ ಬರುವೆ, ಸಾಧ್ಯವಾದರೆ ಪ್ರತಿ ಜಿಲ್ಲೆಗೆ ಬರುವೆ.  ರಾಜಕೀಯ ಪಕ್ಷಗಳು ಈಗಾಗಲೇ ತಯಾರಿ ಆರಂಭಿಸಿವೆ. ಅದರಂತೆ ನಮ್ಮ ಬಿಜೆಪಿ ಪಕ್ಷವು ಸಹ ಎಲ್ಲಾ ಪ್ರಮುಖ ಸ್ಥಳಗಳಲ್ಲಿ ಸಭೆಯನ್ನು ಏರ್ಪಡಿಸಿ, ಪಕ್ಷದ ಸಂಘಟನೆ ಮಾಡಲಾಗುತ್ತಿದೆ. ಹೊಸಪೇಟೆಯಲ್ಲಿ ಆಯೋಜಿಸಿರುವ ಈ ಸಮಾರಂಭ ನಮಗೆ ಸಂತಸ ತಂದಿದೆ ಎಂದು -ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ. ನಡ್ಡಾ J P Nadda ಹೇಳಿದರು.

ವಿಜಯನಗರ ಜಿಲ್ಲೆಯ ಹೊಸಪೇಟೆಯಲ್ಲಿ ಎರಡು ದಿನಗಳ ಕಾಲ ನಡೆದ ಬಿಜೆಪಿ ಕಾರ್ಯಕಾರಿಣಿ ಸಭೆಯಲ್ಲಿ ಭಾಗವಹಿಸಿ ಅವರು ಮಾತನಾಡಿ, ದೇಶದ ಅಭಿವೃದ್ದಿಯಲ್ಲಿ ಬಿಜೆಪಿಯು ಮಾಡಿದ ಬದಲಾವಣೆಗಳನ್ನು ಸವಿಸ್ತಾರವಾಗಿ ವಿವರಿಸಿದರು.

ಕಾಂಗ್ರೇಸ್ ಪಕ್ಷದ ಮೋಸದ ರಾಜಕೀಯ ಭ್ರಷ್ಟಾಚಾರ ಮತ್ತು ಒಳಜಗಳಗಳನ್ನು ಸಹ ಅವರ ಭಾಷಣದಲ್ಲಿ ಸಾರ್ವಜನಿಕರಿಗೆ ಅರ್ಥವಾಗುವ ಹಾಗೆ ತಿಳಿಸಿದರು. ಬರುವ ಚುನಾವಣೆಯಲ್ಲಿ ಬಿಜೆಪಿಯನ್ನು ಬೆಂಬಲಿಸುವಂತೆ ಮನವಿ ಮಾಡಿದರು.

ಬಿಜೆಪಿ ಗೆಲುವಿನ ಮಹತ್ವದ ಸಲಹೆಗಳನ್ನು ತಿಳಿಸಿದ ಅವರು, ಚುನಾವಣಾ ಕಾರ್ಯತಂತ್ರ, ಪಕ್ಷ ಬಲವರ್ಧನೆ, ಸಂಘಟನೆಯ ಬಗ್ಗೆ ಕಾರ್ಯಕರ್ತರು ಹೋರಾಡಿ ರಾಜ್ಯದಲ್ಲಿ ಮತ್ತೆ ಬಿಜೆಪಿ ಆಡಳಿತ ಮಾಡಲು ಸಾರ್ವಜನಿಕ ಆಶೀರ್ವಾದ ಪಡೆಯಲು ಮುಂದಾಗಬೇಕು. ಮತ್ತೆ ಬರುತ್ತೇನೆ ಪ್ರತಿ ಜಿಲ್ಲೆಗಳ ಪ್ರವಾಸ ಮಾಡುವೆ ಎಂದು ತಮ್ಮ ಭಾಷಣದಲ್ಲಿ ತಿಳಿಸಿದರು.

ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ Nalin Kumar Kateel ಮಾತನಾಡಿ, ಮುಂದಿನ ಅಸೆಂಬ್ಲಿ ಚುನಾವಣೆಯಲ್ಲಿ ಬಿಜೆಪಿ 150ಕ್ಕೂ ಹೆಚ್ಚು ಸ್ಥಾನಗಳಲ್ಲಿ ಗೆಲ್ಲುವ ಗುರಿ ಹೊಂದಿದೆ. ಯಡಿಯೂರಪ್ಪ ರೈತ ಬಂಧುವಾಗಿ ಕೆಲಸ ಮಾಡಿದ್ದಾರೆ. ರಾಜ್ಯದಲ್ಲಿ ಬಿಜೆಪಿ ಬೆಳೆದಿದೆ, ಬೆಳಗುತ್ತಿದೆ ಎಂದು ಹೇಳಿದರು.

ಹೊಸಪೇಟೆಯ ಸಂಕಲ್ಪ ಸಭೆಯು ಅಸೆಂಬ್ಲಿ ಚುನಾವಣೆಯಲ್ಲಿ ವಿಜಯವನ್ನು ತಂದುಕೊಡಲಿದೆ. ಕರ್ನಾಟಕದ ಮುಂದಿನ ಗೆಲುವು ದಕ್ಷಿಣ ಭಾರತಕ್ಕೆ ಒಂದು ಸಂದೇಶ ನೀಡಲಿದೆ ಎಂದರು.

ಯಡಿಯೂರಪ್ಪ, Yadiyurappa ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ CM Basavaraja Bommai ಅವರ ನೇತೃತ್ವದಲ್ಲಿ ಕರ್ನಾಟಕ ಸ್ವಾಭಿಮಾನಿ ಕರ್ನಾಟಕವಾಗಿ ಪರಿವರ್ತನೆ ಹೊಂದುತ್ತಿದೆ. ರೈತ ವಿಧ್ಯಾ ನಿಧಿ ಪರಿಕಲ್ಪನೆ ಜಾರಿಯಾಗಿದೆ. ವಿವಿಧ ಮಾಸಾಶನ ಹೆಚ್ಚಳ ಮಾಡಲಾಗಿದೆ. ಸ್ವಾತಂತ್ರ್ಯದ ಅಮೃತ ಮಹೋತ್ಸವ ಸಂದರ್ಭದಲ್ಲಿ ವಿಶೇಷ ಯೋಜನೆಗಳು ಜಾರಿಗೊಳ್ಳುತ್ತಿವೆ ಎಂದರು.

ಕೇಂದ್ರ ಮತ್ತು ರಾಜ್ಯ ಸರ್ಕಾರಗಳ ಅಭಿವೃದ್ಧಿ ಹೆಸರಿನಲ್ಲೇ ಚುನಾವಣೆ ಎದುರಿಸುತ್ತೇವೆ. ಕೇಂದ್ರ ಮತ್ತು ರಾಜ್ಯ ಬಿಜೆಪಿ ಸರ್ಕಾರಗಳ ಅಭಿವೃದ್ಧಿ ಕಾಮಗಾರಿಗಳು ಜನರ ಮುಂದಿದೆ. ಕಾರ್ಯಕಾರಿಣಿ ಸಭೆಯ ಬಳಿಕ ಹೊಸ ಹುಮ್ಮಸ್ಸಿನಲ್ಲಿ ಹಾಗೂ ಹೊಸ ಕಾರ್ಯತಂತ್ರದ ಮೂಲಕ ಬಿಜೆಪಿ ಪಕ್ಷ ಬಲವರ್ಧನೆ ಮತ್ತು ಚುನಾವಣಾ ತಯಾರಿಗೆ ಸಜ್ಜಾಗಲಿದೆ. ಹಾಗೂ ಈ ಎಲ್ಲಾ ನಿಟ್ಟಿನಲ್ಲಿ ಕಾರ್ಯಕಾರಿಣಿ ಸಭೆ ಮಹತ್ವ ಪಡೆದುಕೊಂಡಿದೆ ಎಂದರು. ಮತ್ತು ಅನಂದ್ ಸಿಂಗ್ ರವರಿಗೆ ಅಭಿನಂದನೆ ತಿಳಿಸಿದರು.

ಇನ್ನು ಒಂದು ವಾರದಲ್ಲಿ ಸಚಿವ ಸಂಪುಟ ವಿಸ್ತರಣೆ: 
ನಡ್ಡಾ ರವರು ಸಚಿವ ಸಂಪುಟ ವಿಸ್ತರಣೆ ಬಗ್ಗೆ ಹಸಿರು ನಿಶಾನೆ ತೋರಿದರೂ ದೆಹಲಿಗೆ ಹೋಗಿ ತಿಳಿಸುವುದಾಗಿ ಹೇಳಿದ್ದಾರೆ. ಈ ಹಿಂದೆ ಎಪ್ರಿಲ್ 6 ರಂದು ನವದೆಹಲಿಯಲ್ಲಿ ನಡ್ಡಾ ಅವರನ್ನು ಭೇಟಿ ಮಾಡಿದ್ದ ಬೊಮ್ಮಾಯಿ, ಶುಕ್ರವಾರ ಸಚಿವ ಸಂಪುಟ ಪುನಾರಚನೆ ಕುರಿತು ಸಂಕ್ಷಿಪ್ತವಾಗಿ ಚರ್ಚಿಸಿರುವುದಾಗಿ ತಿಳಿಸಿದಂತೆ ಬಿಡುವಿನ ವೇಳೆಯಲ್ಲಿ ಮುಖ್ಯಮಂತ್ರಿ ಚರ್ಚಿಸಿದರು ಈ ವಾರದಲ್ಲಿ ಸಚಿವ ಸಂಪುಟ ಬದಲಾಗುವ ನಿರೀಕ್ಷೆ ಇದೆ.

ಗುತ್ತಿಗೆದಾರ ಸಂತೋಷ್ ಪಾಟೀಲ್ ಅವರ ಆತ್ಮಹತ್ಯೆ ಪ್ರಕರಣದಲ್ಲಿ ತಮ್ಮ ವಿರುದ್ಧ ಎಫ್‌ಐಆರ್ ದಾಖಲಾಗಿರುವ ಹಿನ್ನೆಲೆಯಲ್ಲಿ ಕೆ.ಎಸ್. ಈಶ್ವರಪ್ಪ ಅವರು ಭ್ರಷ್ಟಾಚಾರ ಆರೋಪದ ಮೇಲೆ ಸಚಿವ ಸಂಪುಟದಿಂದ ಹೊರಗೆ ನಡೆದಿದ್ದು, ಈ ಬಾರಿಯ ಸಂಪುಟ ಪುನಾರಚನೆಯಲ್ಲಿ ಹೊಸ ಮುಖಗಳನ್ನು ಸೇರ್ಪಡೆಗೊಳಿಸಲು ಹೈಕಮಾಂಡ್ ಚಿಂತನೆ ನಡೆಸಿದೆ ಎಂದು ಮೂಲಗಳು ತಿಳಿಸಿವೆ.

ಬಿ.ಎಲ್. ಸಂತೋಷ್ ಅವರು ಸಹ ಮಧ್ಯಪ್ರವೇಶಿಸಿರುವುದರಿಂದ ಆರ್ ಎಸ್ ಎಸ್ ಮೂಲದವರಿಗೆ ಸಚಿವ ಸ್ಥಾನ ಸಿಗುವ ನಿರೀಕ್ಷೆ ಹೆಚ್ಚಾಗಿದೆ. ಈ ಬೆಳವಣಿಗೆಗಳಿಗೆ ಹೈಕಮಾಂಡ್ ಆತಂಕಗೊಳ್ಳುವಂತೆ ಮಾಡಿದೆ.

2023 ರ ವಿಧಾನಸಭಾ ಚುನಾವಣೆಗೆ ಮುಂಚಿತವಾಗಿ ಪಕ್ಷಕ್ಕೆ ಎದುರಾಗಲಿರುವ ಮುಜುಗರವನ್ನು ತಪ್ಪಿಸಲು, ಕೇಂದ್ರ ಗೃಹ ಸಚಿವ ಅಮಿತ್ ಶಾ ಮತ್ತು ಪ್ರಧಾನಿ ನರೇಂದ್ರ ಮೋದಿ ಸೇರಿದಂತೆ ಬಿಜೆಪಿ ರಾಷ್ಟ್ರೀಯ ನಾಯಕತ್ವವು ಇರುವ ಉತ್ತಮ ಆಯ್ಕೆಗಳ ಬಗ್ಗೆ ಚಿಂತನೆ ನಡೆಸುತ್ತಿದ್ದಾರೆ ಎನ್ನಲಾಗಿದೆ.

Also read: ಶಿವಮೊಗ್ಗ-ತಿರುಪತಿ-ಚೆನ್ನೈ ಎಕ್ಸ್‌ಪ್ರೆಸ್ ರೈಲು ಸೇವೆಯ ಸದುಪಯೋಗ ಪಡೆದುಕೊಳ್ಳಿ: ಸಚಿವ ನಾರಾಯಣ ಗೌಡ

ರಾಜ್ಯದಲ್ಲಿ ನಾಯಕತ್ವ ಬದಲಾವಣೆ ಅಸಂಭವವಾಗಿದೆ. ಏಕೆಂದರೆ, ಬೊಮ್ಮಾಯಿಗೆ ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪನವರ ಬೆಂಬಲವಿದ್ದು, ನಾಯಕತ್ವ ಬದಲಾವಣೆಯಾಗಿದ್ದೇ ಆದರೆ, ಇದು ಪಕ್ಷದ ಮೇಲೆ ಗಂಭೀರ ಪರಿಣಾಮ ಬೀರಲಿದೆ. ಇದರ ಜೊತೆಗೆ ಯಡಿಯೂರಪ್ಪ ಅವರ ಪುತ್ರ ಬಿ.ವೈ. ವಿಜಯೇಂದ್ರ ಅವರನ್ನೂ ಸಂಪುಟಕ್ಕೆ ಸೇರ್ಪಡೆಗೊಳಿಸುವ ಕುರಿತಂತೆಯೂ ಹೈಕಮಾಂಡ್ ಚಿಂತನೆ ನಡೆಸುತ್ತಿದೆ ಎಂದು ತಿಳಿದುಬಂದಿದೆ.

ಪಕ್ಷದ ನಾಯಕತ್ವ ಬಲಪಡಿಸುವುದಕ್ಕಾಗಿ ಶೋಭಾ ಕರಂದ್ಲಾಜೆ, ಸಿಟಿ ರವಿ, ಡಾ ಸಿ ಎನ್ ಅಶ್ವತ್ಥ್ ನಾರಾಯಣ, ಜಗದೀಶ್ ಶೆಟ್ಟರ್ ಅವರ ಹೆಸರುಗಳು ಕೆಲ ದಿನಗಳಿಂದ ಬಿಜೆಪಿ ವಲಯದಲ್ಲಿ ಸದ್ದು ಮಾಡುತ್ತಿದ್ದು, ಭಾನುವಾರ ರಾಜ್ಯ ಕಾರ್ಯಕಾರಿ ಸಮಿತಿ ಸಭೆ ಮುಕ್ತಾಯಗೊಂಡ ಬೆನ್ನಲ್ಲೇ ಸರ್ಕಾರ ಹಾಗೂ ಪಕ್ಷದಲ್ಲಾಗುವ ಬದಲಾವಣೆ ಕುರಿತ ಮಾಹಿತಿಗಳು ಬಹಿರಂಗಗೊಳ್ಳಲಿವೆ ಎಂದು ಹೇಳಲಾಗುತ್ತಿದೆ.

ರಾಜ್ಯದಲ್ಲಿ ನಡೆಯುತ್ತಿರುವ ಬೆಳವಣಿಗೆಗಳು ಹಾಗೂ ಸರ್ಕಾರ ಮತ್ತು ಪಕ್ಷಕ್ಕೆ ಆಗಿರುವ ಹಾನಿಯ ಕುರಿತಾಗಿ ಜೆ.ಪಿ. ನಡ್ಡಾ ರಾಜ್ಯ ಮುಖಂಡರಿಂದ ಮಾಹಿತಿಯನ್ನು ಪಡೆದುಕೊಳ್ಳಲಿದ್ದಾರೆ. ಸಂತೋಷ್ ಆತ್ಮಹತ್ಯೆ ಪ್ರಕರಣ ಹಾಗೂ ಕೆ.ಎಸ್. ಈಶ್ವರಪ್ಪ ಸಚಿವ ಸ್ಥಾನಕ್ಕೆ ರಾಜೀನಾಮೆಯ ವಿಚಾರ ಚರ್ಚೆ ಆಗುವ ಸಾಧ್ಯತೆ ಇದೆ. ಪ್ರತ್ಯೇಕವಾಗಿ ನಾಯಕರ ಜೊತೆ ಸಭೆ ನಡೆಸಿ ಜೆಪಿ ನಡ್ಡಾ ಈ ಬಗ್ಗೆ ಚರ್ಚೆ ಮಾಡುವ ಸಾಧ್ಯತೆ ಇದೆ.

ಸಭೆಯಲ್ಲಿ ಬಿಜೆಪಿ ರಾಷ್ಟ್ರೀಯ ಸಂಘಟನಾ ಪ್ರಧಾನ ಕಾರ್ಯದರ್ಶಿಗಳಾದ ಬಿ.ಎಲ್. ಸಂತೋಷ್, ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ರಾಜ್ಯ ಬಿಜೆಪಿ ಉಸ್ತುವಾರಿ ಅರುಣ್‌ಸಿಂಗ್‌, ಪಕ್ಷದ ರಾಜ್ಯಾಧ್ಯಕ್ಷ ನಳಿನ್ ಕುಮಾರ್‌ ಕಟೀಲ್, ಮಾಜಿ ಮುಖ್ಯಮಂತ್ರಿ ಬಿ.ಎಸ್‌. ಯಡಿಯೂರಪ್ಪ, ಬಿಜೆಪಿ ರಾಷ್ಟ್ರೀಯ ಕಾರ್ಯದರ್ಶಿ ಸಿ.ಟಿ. ರವಿ ಸೇರದಂತೆ ಸಚಿವರು, ಪ್ರಮುಖ ಮುಖಂಡರು, ಶಾಸಕರು, ಸಂಸದರು ಭಾಗವಹಿಸಿದ್ದರು. ವಿಶಾಲವಾದ ವೇದಿಕೆಯ ಮೇಲೆ ರಾಜ್ಯದ ಸಚಿವರು, ರಾಷ್ಟ ನಾಯಕರು ಸುಮಾರು 30 ಆಹ್ವಾನಿತ ರಾಜಕೀಯ ಧುರೀಣರು ವೇದಿಕೆಯನ್ನು ಅಲಂಕರಿಸಿದ್ದರು.

ಮುರುಳೀಧರ್ ನಾಡಿಗೇರ್. ಹೊಸಪೇಟೆ – ವಿಜಯನಗರ

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news

Tags: CM Basavaraja BommaiHosapeteJ P NaddaKannada News WebsiteKannadaNewsKannadaNewsLiveKannadaNewsOnlineKannadaWebsiteLatest News KannadaNalin Kumar KateelNewsinKannadaNewsKannadaYadiyurappaಜೆ.ಪಿ. ನಡ್ಡಾನಳಿನ್ ಕುಮಾರ್ ಕಟೀಲ್ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯಡಿಯೂರಪ್ಪಹೊಸಪೇಟೆ
Share201Tweet124Send
Aniruddha Vasishta S R

Aniruddha Vasishta S R

Editor-in-Chief

Previous Post

ಶಿವಮೊಗ್ಗ-ತಿರುಪತಿ-ಚೆನ್ನೈ ಎಕ್ಸ್‌ಪ್ರೆಸ್ ರೈಲು ಸೇವೆಯ ಸದುಪಯೋಗ ಪಡೆದುಕೊಳ್ಳಿ: ಸಚಿವ ನಾರಾಯಣ ಗೌಡ

Next Post

ಈಶ್ವರಪ್ಪನವರ ಮನೆಗೆ ಮುರುಘರಾಜೇಂದ್ರ ಸ್ವಾಮೀಜಿ ಭೇಟಿ

kalpa News

kalpa News

Next Post
ಈಶ್ವರಪ್ಪನವರ ಮನೆಗೆ ಮುರುಘರಾಜೇಂದ್ರ ಸ್ವಾಮೀಜಿ ಭೇಟಿ

ಈಶ್ವರಪ್ಪನವರ ಮನೆಗೆ ಮುರುಘರಾಜೇಂದ್ರ ಸ್ವಾಮೀಜಿ ಭೇಟಿ

Leave a Reply Cancel reply

Your email address will not be published. Required fields are marked *

No Result
View All Result
Stiff fingers Your joints may be sending an early warning
English Articles

Stiff fingers every morning? Your joints may be sending an early warning

by kalpa News
October 12, 2026
0

Kalpa Media House  |  Special Article  | The alarm rings, and you reach out to switch it off. But your...

Read moreDetails
Gudinamana 2026 Classical Music Dance Guru Parampara

Gudi Namana 2026: A Year-Long Musical Tribute to Guru Parampara Across Sacred Spaces

September 29, 2026
Hyderabad Pink Power Run 35K Breast Cancer Awareness copy

Hyderabad Runs Pink : 35,000 Unite For Breast Cancer Awareness

September 27, 2026
swr vigilance awareness campaign 2026 hubballi dharwad

SWR Vigilance Dept Organizes Inter-School Competitions to Promote Integrity & Ethical Values

September 24, 2026
Mysuru Project Assistant Job Kits Leap 22 K Salary

Mysuru Job Alert : Project Assistant Vacancy, 22,000 Salary, Apply by Oct 10

September 21, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL