ಕಲ್ಪ ಮೀಡಿಯಾ ಹೌಸ್ | ಹೊಸಪೇಟೆ |
ಕಾಲೇಜು ವಿದ್ಯಾರ್ಥಿಗಳು ಈಜಲು ಹೋಗಿ ಮೂವರು ವಿದ್ಯಾರ್ಥಿಗಳು ನೀರುಪಾಲಾಗಿರುವ ಘಟನೆ ವಿಜಯನಗರ ಜಿಲ್ಲೆಯ ಹೊಸಪೇಟೆಯ ಹೊರವಲಯದ ಕಾಲುವೆಯಲ್ಲಿ ನಡೆದಿದೆ.
ಯಶವಂತ್, ಅಂಜಿನಿ, ಗುರುರಾಜ್ ನೀರುಪಾಲಾಗಿರುವ ವಿದ್ಯಾರ್ಥಿಗಳು. ಪ್ರತಿ ವಾರ ರಜೆ ಸಮಯದಲ್ಲಿ ಈಜಲು ಹೋಗುತ್ತಿದ್ದ ಹಿನ್ನೆಲೆಯಲ್ಲಿ ಹೊಸಪೇಟೆಯ ವಿಜಯನಗರದ ಪಿಯು ಕಾಲೇಜಿನ ೬ ವಿದ್ಯಾರ್ಥಿಗಳು ಕಾಲುವೆಗೆ ಈಜಲು ಹೋಗಿದ್ದರು. ಈ ವೇಳೆ ನೀರಿನ ಸೆಳೆತಕ್ಕೆ ಸಿಲುಕಿ ಮೂವರು ವಿದ್ಯಾರ್ಥಿಗಳು ನೀರುಪಾಲಾಗಿದ್ದಾರೆ. ಉಳಿದ ಮೂವರು ವಿದ್ಯಾರ್ಥಿಗಳು ಈಜಿ ದಡ ಸೇರಿ ಪ್ರಾಣ ರಕ್ಷಿಸಿಕೊಂಡಿದ್ದಾರೆ.
ಸ್ಥಳಕ್ಕೆ ಅಗ್ನಿಶಾಮಕ ಸಿಬ್ಬಂದಿ, ಹೊಸಪೇಟೆ ಗ್ರಾಮೀಣ ಠಾಣೆ ಪೊಲಿಸರು ಧಾವಿಸಿ, ನೀರುಪಾಲಾದ ವಿದ್ಯಾರ್ಥಿಗಳಿಗಾಗಿ ಹುಡುಕಾಟ ನಡೆಸಿದ್ದಾರೆ.
Also read: ಅಭಿಮಾನದಿಂದ ಪ್ರೀತಿಯನ್ನು ತೋರಿ, ದ್ವೇಷ – ಅಗೌರವವನ್ನಲ್ಲ: ನಟ ಶಿವರಾಜ್‌ಕುಮಾರ್
(ವರದಿ: ಮುರುಳೀಧರ್ ನಾಡಿಗೇರ್)
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
Discussion about this post