ಕಲ್ಪ ಮೀಡಿಯಾ ಹೌಸ್ | ಹೊಸಪೇಟೆ |
ಹೊಸಪೇಟೆಯ ಭಾರತೀಯ ರೆಡ್ ಕ್ರಾಸ್ ಸಂಸ್ಥೆ ಹಾಗೂ ಕಿರ್ಲೋಸ್ಕರ್ ಆಫೀಸರ್ಸ್ ಲೇಡೀಸ್ ಕ್ಲಬ್ ವತಿಯಿಂದ ವಿಶ್ವ ಪರಿಸರ ದಿನಾಚರಣೆ ಅಂಗವಾಗಿ ಸರ್ಕಾರಿ ಬಾಲಕಿಯರ ಪದವಿ ಪೂರ್ವ ಕಾಲೇಜು ಆವರಣದಲ್ಲಿ ಇಂದು ವಿದ್ಯಾರ್ಥಿಗಳಿಗೆ ಪರಿಸರದ ಬಗ್ಗೆ ಅರಿವನ್ನು ಮೂಡಿಸುವ ಕಾರ್ಯಕ್ರಮ ಜರುಗಿತು.
ಪರಿಸರ ವಿಭಾಗದ ಮುಖ್ಯಸ್ಥ ಮಹಮದ್ ಅಜೀಜ್ ಸಂಪನ್ಮೂಲ ವ್ಯಕ್ತಿಯಾಗಿ ಆಗಮಿಸಿ ವಿದ್ಯಾರ್ಥಿಗಳಿಗೆ ಪರಿಸರ ಸಂರಕ್ಷಣೆ, ಜಾಗತಿಕ ತಾಪಮಾನ, ತ್ಯಾಜ್ಯ ನಿರ್ವಹಣೆ, ನೀರಿನ ಮಿತ ಬಳಕೆ ವಿಷಯವಾಗಿ ಉಪನ್ಯಾಸ ನೀಡಿದರು.

Also read: ಮೇಕೆ ಕತ್ತು ಕತ್ತರಿಸಿ ಡಿಎಂಕೆ ಕಾರ್ಯಕರ್ತರ ಸಂಭ್ರಮಾಚರಣೆ | ಸಾಮಾಜಿಕ ಜಾಲತಾಣದಲ್ಲಿ ವಿಡಿಯೋ ವೈರಲ್
ಕಾರ್ಯಕ್ರಮದ ಪ್ರಾರಂಭದಲ್ಲಿ ಕಿರ್ಲೋಸ್ಕರ್ ಸಂಸ್ಥೆಯ ಸುರಕ್ಷತಾ ವಿಭಾಗದ ಅಧಿಕಾರಿ ಮುರಳಿಧರ್ ನಾಡಿಗೇರ್ ಕಿರ್ಲೋಸ್ಕರ್ ಕಾರ್ಖಾನೆ ಪರಿಸರಕ್ಕೆ ನೀಡಿರುವ ಕೊಡುಗೆ ಮತ್ತು ಕಾರ್ಖಾನೆಯಲ್ಲಿ ಗಿಡ ಮರಗಳನ್ನ ಬೆಳೆಸುವುದರಿಂದ ಆಗುವ ಪ್ರಯೋಜನಗಳು ಮತ್ತು ಪ್ರತಿವರ್ಷ ಆಯೋಜಿಸುವ ವಸುಂದರ ಚಲನಚಿತ್ರೋತ್ಸವಕ್ಕೆಸಂಬಂಧಿಸಿದಂತೆ ವಿದ್ಯಾರ್ಥಿಗಳಿಗೆ ಪರಿಚಯಿಸಿದರು.
ಇದೇ ಸಂದರ್ಭದಲ್ಲಿ ಪರಿಸರ ಪ್ರತಿಜ್ಞೆಯನ್ನು ತೆಗೆದುಕೊಂಡು ಕಾರ್ಯಕ್ರಮವನ್ನು ಮುಕ್ತಾಯ ಮಾಡಲಾಯಿತು.
ವರದಿ: ಮುರುಳಿಧರ ನಾಡಿಗೇರ್
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news












Discussion about this post