ಕಲ್ಪ ಮೀಡಿಯಾ ಹೌಸ್ | ಹೊಸಪೇಟೆ/ವಿಜಯನಗರ |
ಕಲ್ಯಾಣ ಕರ್ನಾಟಕ ಉತ್ಸವ ಸೆ.17ರಂದು ಅದ್ದೂರಿಯಾಗಿ ಆಚರಿಸಲು ನಿರ್ಧರಿಸಿದ್ದು, ವಿವಿಧ ಇಲಾಖೆಯ ಅಧಿಕಾರಿಗಳಿಗೆ ಜವಬ್ದಾರಿಗಳನ್ನು ವಹಿಸಿ, ಕಲ್ಯಾಣ ಕರ್ನಾಟಕ ಉತ್ಸವವನ್ನು ಅದ್ದೂರಿಯಾಗಿ ಆಚರಿಸಲು ಸಕಲ ಸಿದ್ದತೆಗಳನ್ನು ಮಾಡಿಕೊಳ್ಳಿ ಎಂದು ವಿಜಯನಗರ ಜಿಲ್ಲಾಧಿಕಾರಿ ಅನಿರುದ್ಧ್ ಶ್ರವಣ್ ಅವರು ಹೇಳಿದರು.
ಜಿಲ್ಲಾಧಿಕಾರಿಗಳ ಕಚೇರಿಯ ಸಭಾಂಗಣದಲ್ಲಿ ಸೋಮವಾರದಂದು ನಡೆದ ಕಲ್ಯಾಣ ಕರ್ನಾಟಕ ಉತ್ಸವ ಆಚರಣೆಯ ಅಂಗವಾಗಿ ಆಯೋಜಿಸಲಾದ ಪೂರ್ವ ಸಿದ್ದಾತ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.
ಕಲ್ಯಾಣ ಕರ್ನಾಟಕ ಉತ್ಸವವು ವಿಜಯನಗರ ಜಿಲ್ಲಾ ಕ್ರೀಡಾಂಗಣದಲ್ಲಿ ಸೆ.17ರಂದು ಬೆಳಗ್ಗೆ 9ಗಂಟೆಗೆ ಧ್ವಜಾರೋಹಣ, ಬೆಳಿಗ್ಗೆ 9.10 ಗಂಟೆಗೆ ಸರ್ದಾರ ವಲ್ಲಭಭಾಯಿ ಪಟೇಲ್ ಅವರ ಭಾವ ಚಿತ್ರಕ್ಕೆ ಪೂಜೆ ಸಲ್ಲಿಸುವುದು, ಬೆಳಿಗ್ಗೆ 9.15 ಗಂಟೆಗೆ ವಿಶೇಷ ಉಪನ್ಯಾಸ, ಬೆಳಿಗ್ಗೆ 9.40ಕ್ಕೆ ಕಾರ್ಯಕ್ರಮದ ಜಿಲ್ಲಾ ಉಸ್ತುವಾರಿ ಸಚಿವರಿಂದ ಭಾಷಣ ನಡೆಯಲಿದ್ದು, ಅಗತ್ಯ ಮುಂಜಾಗ್ರತ ಕ್ರಮಗಳು ಹಗೂ ಸಕಲ ಸಿದ್ದತೆಗಳನ್ನು ಮಾಡಿಕೊಳ್ಳಿ ಎಂದು ಸಂಬಂಧ ಪಟ್ಟ ವಿವಿಧ ಇಲಾಖೆಯ ಅಧಿಕಾರಿಗಳಿಗೆ ಅವರು ತಿಳಿಸಿದರು.
ಮುಜರಾಯಿ, ವಕ್ಪ್ ಸಚಿವರು ಹಾಗೂ ವಿಜಯನಗರ ಜಿಲ್ಲೆಯ ಉಸ್ತುವಾರಿ ಸಚಿವರಾದ ಶಶಿಕಲಾ ಅಣ್ಣ ಸಾಹೇಬ್ ಜೊಲ್ಲೆ ಅವರು ಧ್ವಜಾರೋಹಣ ನೇರವೇರಿಸಲಿದ್ದಾರೆ ಎಂದು ಜಿಲ್ಲಾಧಿಕಾರಿಗಳು ತಿಳಿಸಿದ್ದಾರೆ.
ಹಂಪಿಯ ಕನ್ನಡ ವಿಶ್ವವಿದ್ಯಾಲಯದ ಶಾಸನಶಾಸ್ತ್ರ ವಿಭಾಗದ ಮುಖ್ಯಸ್ಥರಾದ ಡಾ.ಅಮರೇಶ ಯತಗಲ್ ಅವರು ಉಪನ್ಯಾಸ ನೀಡಲಿದ್ದಾರೆ ಎಂದು ಅವರು ತಿಳಿಸಿದ್ದಾರೆ.
ಎಲ್ಲಾ ಶಾಲಾ-ಕಾಲೇಜುಗಳಿಂದ 5 ಸಾವಿರ ವಿದ್ಯಾರ್ಥಿಗಳು ಕಲ್ಯಾಣ ಕರ್ನಾಟಕ ಉತ್ಸವದಲ್ಲಿ ಭಾಗವಹಿಸುವಂತೆ ನೋಡಿಕೊಳ್ಳಿ ಎಂದು ವಿಜಯನಗರ ಜಿಲ್ಲೆಯ ಸಾರ್ವಜನಿಕ ಶಿಕ್ಷಣ ಇಲಾಖೆಯ ಉಪನಿರ್ದೇಶಕರಿಗೆ ಹಾಗೂ ಪದವಿ ಪೂರ್ವ ಶಿಕ್ಷಣ ಇಲಾಖೆ ಉಪ ನಿರ್ದೇಶಕರಾದ ಕೊಟ್ರೇಶ್ ಅವರಿಗೆ ಜಿಲ್ಲಾಧಿಕಾರಿಗಳು ಈ ಸಂದರ್ಭದಲ್ಲಿ ಸೂಚಿಸಿದರು.
ಉತ್ಸವ ಕಾರ್ಯಕ್ರಮ ಸಂದರ್ಭದಲ್ಲಿ ಮಕ್ಕಳಿಗೆ ಇತರರಿಗೆ ಅಪಘಾತ, ಅವಘಡದಿಂದ ಗಾಯಗಳಾದಲ್ಲಿ ಪ್ರಥಮ ಚಿಕಿತ್ಸೆಯ ಔಷಧಿ ಉಪಕರಣಗಳ ವ್ಯವಸ್ಥೆ ಮಾಡಲು ಹಾಗೂ ಆಂಬ್ಯುಲೆನ್ಸ್ ವ್ಯವಸ್ಥೆ ಮಾಡಲು ಮತ್ತು ಅಗ್ನಿಶಾಮಕ ದಳ ವ್ಯವಸ್ಥೆ ಮಾಡಲು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿಗಳಿಗೆ ಸೂಚಿಸಿದ ಜಿಲ್ಲಾಧಿಕಾರಿ ಅನಿರುದ್ದ್ ಶ್ರವಣ್ ಅವರು ಜಿಲ್ಲಾ ಕ್ರೀಡಾಂಗಣದಲ್ಲಿ ಜರುಗಲಿರುವ ಧ್ವಜಾರೋಹಣ ಕಾರ್ಯಕ್ರಮಕ್ಕೆ ಹೆಚ್ಚಿನ ಸಂಖ್ಯೆಯಲ್ಲಿ ಜನರು ಸೇರುವುದರಿಂದ ಶಾಲಾ ಮಕ್ಕಳು, ಸಣ್ಣ ಮಕ್ಕಳು ಬರುವುದರಿಂದ ಜನಸಂದಣಿ, ವಾಹನ ಸಂಚಾರವನ್ನು ಕ್ರಮಬದ್ಧಗೊಳಿಸಲು ಹಾಗೂ ಸೂಕ್ತ ಬಂದೋಬಸ್ತ ವ್ಯವಸ್ಥೆ ಮಾಡಲು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳಿಗೆ ತಿಳಿಸಿದರು.
*ವಿವಿಧ ಸಮಿತಿಗಳು ವಹಿಸಿದ ಜವಾಬ್ದಾರಿ ಸಮರ್ಪಕವಾಗಿ ನಿರ್ವಹಿಸಿ: ಕಲ್ಯಾಣ ಕರ್ನಾಟಕ ಉತ್ಸವವನ್ನು ವಿಜಯನಗರ ಜಿಲ್ಲಾಡಳಿತದ ವತಿಯಿಂದ ಅತ್ಯಂತ ಅರ್ಥಪೂರ್ಣ ಹಾಗೂ ವಿಜೃಂಭಣೆಯಿಂದ ಆಚರಿಸುವ ನಿಟ್ಟಿನಲ್ಲಿ ಸ್ವಾಗತ ಸಮಿತಿ, ವೇದಿಕೆ ಸಮಿತಿ, ಸನ್ಮಾನ ಸಮಿತಿ, ಸ್ವಚ್ಛತೆ ಮತ್ತು ಕುಡಿಯುವ ನೀರಿನ ಸಮಿತಿ, ವಿದ್ಯುತ್ ಸಮಿತಿ, ದೀಪಾಲಂಕಾರ ಸಮಿತಿ, ಲಘು ಉಪಹಾರ ಸಮಿತಿ ಸೇರಿದಂತೆ ವಿವಿಧ ಸಮಿತಿಗಳನ್ನು ರಚಿಸಿ, ಜವಾಬ್ದಾರಿಗಳನ್ನು ವಹಿಸಿ, ಅಗತ್ಯ ಸಲಹೆ-ಸೂಚನೆಗಳನ್ನು ಜಿಲ್ಲಾಧಿಕಾರಿಗಳು ನೀಡಿದರು.
ಈ ಸಂದರ್ಭದಲ್ಲಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ.ಕೆ.ಆರುಣ್, ಅಪರ ಜಿಲ್ಲಾಧಿಕಾರಿ ಎನ್.ಮಹೇಶ್‍ಬಾಬು, ಸಹಾಯಕ ಆಯುಕ್ತ ಸಿದ್ದರಾಮೇಶ್ವರ, ಕನ್ನಡ ಮತ್ತು ಸಂಸ್ಕøತಿ ಇಲಾಖೆಯ ಸಹಾಯಕ ನಿರ್ದೇಶಕ ಸಿದ್ದಲಿಂಗಣ್ಣನವರ್, ನಗರಸಭೆ ಪೌರಾಯುಕ್ತ ಮನೋಹರ್ ನಾಗರಾಜ ಸೇರಿದಂತೆ ವಿವಿಧ ಇಲಾಖೆಯ ಅಧಿಕಾರಿಗಳು ಇದ್ದರು.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
Discussion about this post