ಕಲ್ಪ ಮೀಡಿಯಾ ಹೌಸ್ | ಹೊಸಪೇಟೆ(ವಿಜಯನಗರ) |
ಈ ವರ್ಷ ವಿಜಯನಗರ ಸಾಮ್ರಾಜ್ಯದ ವೈಭವ ಬಿಂಬಿಸುವ ಹಂಪಿ ಉತ್ಸವವನ್ನು ಅದ್ಧೂರಿಯಾಗಿ ಆಚರಿಸಲಾಗುವುದು ಎಂದು ಮುಜರಾಯಿ, ಹಜ್ ಮತ್ತು ವಕ್ಫ್ ಸಚಿವರು ಹಾಗೂ ಜಿಲ್ಲಾ ಉಸ್ತುವಾರಿ ಸಚಿವೆ ಶಶಿಕಲಾ ಜೊಲ್ಲೆ ತಿಳಿಸಿದರು.
ವಿಜಯನಗರ ಜಿಲ್ಲಾ ಕ್ರೀಡಾಂಗಣದಲ್ಲಿ ಶನಿವಾರ ಕಲ್ಯಾಣ ಕರ್ನಾಟಕ ಉತ್ಸವದ ಧ್ವಜಾರೋಹಣ ನೆರವೇರಿಸಿದ ನಂತರ ಸುದ್ದಿಗಾರರೊಂದಿಗೆ ಅವರು ಮಾತನಾಡಿದರು.

ವಿಜಯನಗರ ಜಿಲ್ಲೆಯಲ್ಲಿ ಪ್ರಕೃತಿ ವಿಕೋಪದಡಿಯಲ್ಲಿ 2021 ಅಕ್ಟೋಬರ್ದಿಂದ 2022 ಆಗಸ್ಟ್ 2022ರವರೆಗೆ ಮಳೆಯಿಂದ ಒಟ್ಟು 37,857 ಎಕರೆ ಕೃಷಿ ಬೆಳೆ ಹಾನಿಯಾಗಿದ್ದು ರೂ.22.62 ಕೋಟಿ ಪರಿಹಾರವನ್ನು ನೇರವಾಗಿ ಫಲಾನುಭವಿಗಳ ಖಾತೆಗೆ ಬಿಡುಗಡೆ ಮಾಡಲಾಗಿದೆ ಮಳೆಯಿಂದ 1613 ಮನೆಗಳು ಹಾನಿಯಾಗಿದ್ದು, ರೂ.5.12 ಕೋಟಿ ರೂ.ಪರಿಹಾರ ಫಲಾನುಭವಿಗಳ ಖಾತೆಗೆ ಪರಿಹಾರ ಪಾವತಿಸಲಾಗಿದೆ. 14 ಜನರ ಜೀವಹಾನಿಯಾಗಿದ್ದು 68ಲP್ಷÀ ರೂ.ಪರಿಹಾರ ಪಾವತಿಸಲಾಗಿದೆ ಎಂದು ಅವರು ವಿವರಿಸಿದರು.

ಈ ಸಂದರ್ಭದಲ್ಲಿ ಸಂಸದರಾದ ವೈ. ದೇವೇಂದ್ರಪ್ಪ, ಜಿಲ್ಲಾಧಿಕಾರಿ ಅನಿರುದ್ಧ ಶ್ರವಣ್, ಎಸ್ಪಿ ಡಾ.ಅರುಣ್.ಕೆ. ,ಜಿಪಂ ಸಿಇಒ ಹರ್ಷಲ್ ಭೋರ್ಯ, ಹೊಸಪೇಟೆ ನಗರಸಭೆ ಅಧ್ಯಕ್ಷೆ ಸುಂಕಮ್ಮ, ಅಪರ ಜಿಲ್ಲಾಧಿಕಾರಿ ಮಹೇಶಬಾಬು ಇದ್ದರು.











Discussion about this post