ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ
ಬೆಂಗಳೂರು: ನಾನು ಬಿಜೆಪಿಯ ತತ್ವ ಸಿದ್ದಾಂತಗಳ ವಿರುದ್ಧ ಹೋರಾಡುತ್ತಾ ಬಂದವನು. ಹೀಗಿರುವಾಗ, ನಾನು ಬಿಜೆಪಿ ಸೇರುತ್ತೇನೆ ಎನ್ನುವುದು ಮೂರ್ಖತನ ಎಂದು ವಿಧಾನಸಭೆ ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ಹೇಳಿದ್ದಾರೆ.
ಸಿದ್ದರಾಮಯ್ಯ ಕಾಂಗ್ರೆಸ್ ತೊರೆದು ಬಿಜೆಪಿ ಸೇರುತ್ತಾರೆ ಎಂಬ ವದಂತಿಗಳಿಗೆ ಸ್ಪಷ್ಟನೆ ನೀಡಿರುವ ಅವರು, ನಾನು ವಿದ್ಯಾರ್ಥಿ ದೆಸೆಯಿಂದಲು ಸಾಮಾಜಿಕ ನ್ಯಾಯ, ಸಮಾನತೆ ಪರವಾಗಿ ಹೋರಾಟ ಮಾಡಿ, ಈ ಹಂತಕ್ಕೆ ಬೆಳೆದಿದ್ದೇನೆ. ಹೀಗಿರುವಾಗ ನಾನು ಬಿಜೆಪಿ ಸೇರುತ್ತೇನೆ ಎನ್ನುವುದು ಮೂರ್ಖತನವಾಗುತ್ತದೆ ಎಂದಿದ್ದಾರೆ.
ಇನ್ನು ತಮ್ಮ ಕ್ಷೇತ್ರದ ಕುರಿತು ಮಾತನಾಡಿರುವ ಅವರು, 500 ಕೋಟಿ ರೂ. ವೆಚ್ಚದ ಏತ ನೀರಾವರಿ ಯೋಜನೆ ಒಪ್ಪಿಗೆಗಾಗಿ ಬೇಡಿಕೆ ಇಟ್ಟಿದ್ದೇನೆ. ಆದರೆ, ತಾವು ಬಾದಾಮಿಯನ್ನು ಅಭಿವೃದ್ಧಿ ಮಾಡಿದ್ದೇವೆ ಎಂದು ಹೇಳುವ ಸರ್ಕಾರ ನಡೆಸುತ್ತಿರುವ ಬಿಜೆಪಿ ನಾಯಕರು ಇನ್ನೂ ಇದಕ್ಕೆ ಅನುಮೋದನೆ ನೀಡಿಲ್ಲ ಎಂದು ಟೀಕಿಸಿದ್ದಾರೆ.
(ವರದಿ: ಡಿ.ಎಲ್. ಹರೀಶ್, ಬೆಂಗಳೂರು)
Get in Touch With Us info@kalpa.news Whatsapp: 9481252093














