ಕಲ್ಪ ಮೀಡಿಯಾ ಹೌಸ್ | ಬೆಂಗಳೂರು |
ಅನಾರೋಗ್ಯಕ್ಕೆ ಒಳಗಾಗಿರುವ ಹ್ಯಾಟ್ರಿಕ್ ಹೀರೋ ಶಿವರಾಜಕುಮಾರ್ ಅವರಿಗೆ ನಡೆಸಲಾಗಿರುವ ಸರ್ಜರಿ ಯಶಸ್ವಿಯಾಗಿದ್ದು, ಅವರ ಆರೋಗ್ಯದಲ್ಲಿ ಚೇತರಿಕೆ ಕಂಡುಬಂದಿದೆ ಎಂದು ತಿಳಿದುಬಂದಿದೆ.
ಈ ಕುರಿತಂತೆ ಕುಟುಂಬ ಮೂಲಗಳ ಮಾಹಿತಿ ಅನ್ವಯ ವರದಿಯಾಗಿದ್ದು, ಫ್ಲೋರಿಡಾದಲ್ಲಿರುವ ಮಿಯಾಮಿ ಕ್ಯಾನ್ಸರ್ ಆಸ್ಪತ್ರೆಯಲ್ಲಿ ದಾಖಲಾಗಿರುವ ಶಿವಣ್ಣ ಅವರಿಗೆ ಸತತ ಆರು ಗಂಟೆಗಳ ಕಾಲ ನಡೆಸಲಾದ ಸರ್ಜರಿ ಯಶಸ್ವಿಯಾಗಿದೆ.
Also Read>> ಕುಂಭಮೇಳಕ್ಕಾಗಿ ಮೈಸೂರಿನಿಂದ ಲಕ್ನೋಗೆ ಸಂಚರಿಸಲಿದೆ ವಿಶೇಷ ರೈಲು
ಸರ್ಜರಿ ಯಶಸ್ವಿಯಾದ ನಂತರ ಅವರ ಆರೋಗ್ಯದಲ್ಲಿ ಚೇತರಿಕೆ ಕಂಡುಬಂದಿದ್ದು, ಶಿವಣ್ಣನ ಆರೋಗ್ಯ ಸ್ಥಿರವಾಗಿದೆ ಎಂದು ವರದಿಯಾಗಿದೆ.
ಶಿವಣ್ಣನಿಗೆ ವಿಶ್ರಾಂತಿಯ ಅಗತ್ಯವಾಗಿದ್ದು, ಸದ್ಯ ಫ್ಲೋರಿಡಾದಲ್ಲಿಯೇ ರೆಸ್ಟ್ ಮಾಡಿ ಜನವರಿ 26ಕ್ಕೆ ಬೆಂಗಳೂರಿಗೆ ಮರಳಲಿದ್ದಾರೆ.
ಈ ಕುರಿತಂತೆ ಶಿವರಾಜಕುಮಾರ್ ಪುತ್ರಿ ಸಾಮಾಜಿಕ ಜಾಲತಾಣದಲ್ಲಿ ಈಗಾಗಲೇ ಪೋಸ್ಟ್ ಮಾಡಿದ್ದು, ದೇವರ ಕೃಪೆಯಿಂದ ನನ್ನ ತಂದೆಯ ಶಸ್ತçಚಿಕಿತ್ಸೆ ಯಶಸ್ವಿಯಾಗಿ ಸಂಪೂರ್ಣಗೊಂಡಿದೆ. ಈಗ ಅವರ ಆರೋಗ್ಯ ಸ್ಥಿರವಾಗಿದ್ದು, ಅವರು ಚೇತರಿಸಿಕೊಳ್ಳುತ್ತಿದ್ದಾರೆ. ಉತ್ತಮ ಚಿಕಿತ್ಸೆ ನೀಡಿರುವ ಮಿಯಾಮಿ ಹೆಲ್ಟ್ ಕೇರ್’ನಲ್ಲಿ ಅಸಾಧಾರಣ ಸೇವೆ ಒದಗಿಸಿದ ವೈದ್ಯಕೀಯ ತಂಡ ಮತ್ತು ಡಾ.ಮುರುಗೇಶನ್ ಮನೋಹರನ್ ಅವರ ಅಚಲ ಬೆಂಬಲ ಮತ್ತು ಕಾಳಜಿಗೆ ನಮ್ಮ ಹೃತ್ಪೂರ್ವಕ ಧನ್ಯವಾದಗಳನ್ನು ಅರ್ಪಿಸುತ್ತೇನೆ ಎಂದಿದ್ದಾರೆ.
Also read: ಶಕ್ತಿ ಯೋಜನೆಯಿಂದಾಗಿ ರಾಜ್ಯ ಸರ್ಕಾರಕ್ಕೆ ಅಪಾರ ನಷ್ಟ | ವಿಪಕ್ಷ ನಾಯಕ ಆರ್. ಅಶೋಕ ಆಕ್ರೋಶ
ಈ ಪ್ರಯಾಣದಲ್ಲಿ ನನ್ನ ತಂದೆ ತೋರಿದ ಸ್ಥೈರ್ಯ ಮತ್ತು ಶಕ್ತಿಗೆ ಅವರೇ ಸಾಟಿ. ಈ ಸವಾಲುಗಳನ್ನು ಎದುರಿಸುವಲ್ಲಿ ಅವರು ತೋರಿದ ಮನೋಬಲ ನಮಗೂ ಆಶಾಭಾವ ಮೂಡಿಸಿ ನಮ್ಮೆಲ್ಲರಿಗೂ ಧೈರ್ಯ ಒದಗಿಸಿದೆ ಎಂದಿದ್ದಾರೆ.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
Discussion about this post