ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ
ಶಿವಮೊಗ್ಗ: ನಗರದ ಆಹಾರ ಮತ್ತು ನಾಗರಿಕ ಸರಬರಾಜು ಇಲಾಖೆಯು ಪ್ರಧಾನ ಮಂತ್ರಿ ಗರೀಬ್ ಕಲ್ಯಾಣ ಅನ್ನ ಯೋಜನೆಯಡಿ ಹಾಗೂ ರಾಷ್ಟ್ರೀಯ ಆಹಾರ ಭದ್ರತಾ ಕಾಯ್ದೆಯಡಿ ಜೂನ್ -2020ರ ಮಾಹೆಗೆ ಬಿಡುಗಡೆಯಾದ ಪಡಿತರ ಧಾನ್ಯವನ್ನು ಅರ್ಹ ಫಲಾನುಭವಿಗಳಿಗೆ ಹಂಚಿಕೆ ಮಾಡಿ ಬಿಡುಗಡೆ ಮಾಡಿದೆ.
ಅಂತ್ಯೋದಯ ಪಡಿತರ ಚೀಟಿದಾರರ ಕುಟುಂಬಕ್ಕೆ ಎನ್‌ಎಫ್‌ಎಸ್‌ಎ ಯೋಜನೆಯಡಿ ಪ್ರತಿ ಕುಟುಂಬಕ್ಕೆ 35 ಕೆಜಿ ಅಕ್ಕಿ ಹಾಗೂ ಕುಟುಂಬದ ಪ್ರತಿ ಸದಸ್ಯರಿಗೆ ಪಿಎಂಜಿಕೆಎವೈ ಯೋಜನೆಯಡಿ 5 ಕೆಜಿ ಅಕ್ಕಿ ಹಾಗೂ 2 ಕೆಜಿ ತೊಗರಿಬೇಳೆ ಉಚಿತವಾಗಿ ನೀಡಲಾಗುವುದು.
ಬಿಪಿಎಲ್ ಪಡಿತರ ಚೀಟಿದಾರರಿಗೆ ಎನ್‌ಎಫ್‌ಎಸ್‌ಎ ಮತ್ತು ಪಿಎಂಜಿಕೆಎವೈ ಯೋಜನೆಯಡಿ ಕುಟುಂಬದ ಪ್ರತಿ ಸದಸ್ಯರಿಗೆ 10 ಕೆಜಿ ಅಕ್ಕಿ ಹಾಗೂ ಪ್ರತಿ ಕುಟುಂಬಕ್ಕೆ 2 ಕೆಜಿ ತೊಗರಿಬೇಳೆ ಮತ್ತು 2 ಕೆಜಿ ಗೋಧಿಯನ್ನು ಉಚಿತವಾಗಿ ನೀಡಲಾಗುವುದು.
ಒಪ್ಪಿಗೆ ನೀಡಿದ ಹಾಗೂ ಒಪ್ಪಿಗೆ ನೀಡಲಾರದ ಎಪಿಎಲ್ ಪಡಿತರ ಚೀಟಿದಾರರಿಗೆ ಏಕ ಸದಸ್ಯರಿಗೆ 15 ರೂ. ದರದಲ್ಲಿ 5 ಕೆಜಿ, 2 ಮತ್ತು ಹೆಚ್ಚಿನ ಕುಟುಂಬದ ಸದಸ್ಯರಿಗೆ 10 ಕೆಜಿ ಅಕ್ಕಿಯನ್ನು ವಿತರಿಸಲಾಗುವುದು.
ಹೊಸ ಪಡಿತರ ಚೀಟಿಗಾಗಿ ಅರ್ಜಿ ಸಲ್ಲಿಸಿದವರಿಗೆ ಪ್ರತಿ ಬಿಪಿಎಲ್ ಅರ್ಜಿಗೆ 10 ಕೆಜಿ ಅಕ್ಕಿ ಹಾಗೂ ಪ್ರತಿ ಎಪಿಎಲ್ ಅರ್ಜಿಗೆ 15 ರೂ.ಗಳಂತೆ 10 ಕೆಜಿ ಅಕ್ಕಿಯನ್ನು ವಿತರಿಸಲಾಗುವುದು.
ವಲಸಿಗರಿಗೆ ಹಾಗೂ ಪಡಿತರ ಚೀಟಿ ಪಡೆಯದೆ ಇರುವ ಪ್ರತ ಫಲಾನುಭವಿಗಳಿಗೆ 5 ಕೆಜಿ ಅಕ್ಕಿ ಹಾಗೂ 2 ಕೆಜಿ ಕಡಲೆಕಾಳು ಉಚಿತವಾಗಿ ವಿತರಿಸಲಾಗುವುದು. ಮೇ ಮಾಹೆಯಲ್ಲಿ ಪಡಿತರ ಪಡೆಯದಿದ್ದವರು ಜೂನ್ ಮಾಹೆಯಲ್ಲಿ ಒಟ್ಟಿಗೆ ಪಡೆಯಬಹುದಾಗಿದೆ.
ಅಂತಾರಾಜ್ಯ/ಅಂತರಜಿಲ್ಲೆ ಪೋರ್ಟಬಿಲಿಟಿ ಜಾರಿಯಲ್ಲಿರುವುದರಿಂದ ಯಾವುದೇ ವರ್ಗದ ಪಡಿತರ ಚೀಟಿಗೆ ಯಾವುದೇ ನ್ಯಾಯಬೆಲೆ ಅಂಗಡಿಯಲ್ಲಿ ಪಡೆಯಲು ಅವಕಾಶವಿದೆ. ಪಡಿತರ ಚೀಟಿದಾರರಿಗೆ ಕಡ್ಡಾಯವಾಗಿ ಬಯೋಮೇಟ್ರಿಕ್/ಆಧಾರ್ ಅಥೇಂಟಿಕೇಷನ್/ಮೊಬೈಲ್ ಓಟಿಪಿ ಮುಖಾಂತರ ಪಡಿತರ ವಿತರಿಸಲಾಗುವುದು.
ಕಡ್ಡಾಯವಾಗಿ ಸಾಮಾಜಿಕ ಅಂತರದಲ್ಲಿ ನಿಂತು ಪಡಿತರ ಪಡೆದುಕೊಳ್ಳಲು ಜಿಲ್ಲಾಧಿಕಾರಿಗಳು ಸೂಚಿಸಿದ್ದಾರೆ.
Get In Touch With Us info@kalpa.news Whatsapp: 9481252093
Discussion about this post