ಕಲ್ಪ ಮೀಡಿಯಾ ಹೌಸ್ | ಹುಬ್ಬಳ್ಳಿ |
ವಿಶ್ವ ಪರಿಸರ ದಿನಾಚರಣೆ #WorldEnvironmentDay ಪ್ರಯುಕ್ತ ಹುಬ್ಬಳ್ಳಿ ರೈಲ್ವೆ ವಿಭಾಗವು ಇಂದು ನಗರದ ಶ್ರೀ ಸಿದ್ಧಾರೂಢ ಸ್ವಾಮೀಜಿ ರೈಲು ನಿಲ್ದಾಣ ಮತ್ತು ಅದರ ಆವರಣದಲ್ಲಿ ವಿಶೇಷ ಕಾರ್ಯಕ್ರಮವನ್ನು ಆಯೋಜಿಸಿತು.
ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾಗಿ ಭಾಗವಹಿಸಿದ ವಿಭಾಗೀಯ ರೈಲ್ವೆ ವ್ಯವಸ್ಥಾಪಕಿ #DRM ಶ್ರೀಮತಿ ಬೇಲಾ ಮೀನಾ ಅವರು ನಿಲ್ದಾಣದ ಆವರಣದಲ್ಲಿ ಸಸಿ ನೆಡುವ ಮೂಲಕ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು.
Also Read>> ಕಿರ್ಲೋಸ್ಕರ್ ಫೆರಸ್ ಇಂಡಸ್ಟ್ರೀಸ್‌ನಲ್ಲಿ ವಿಶ್ವ ಪರಿಸರ ದಿನಾಚರಣೆ | ಪರಿಸರ ಸಂರಕ್ಷಣೆ ಬಗ್ಗೆ ಜಾಗೃತಿ
ಬಳಿಕ ಮಾತನಾಡಿದ ಅವರು, ಪರಿಸರ ಸಂರಕ್ಷಣೆ ಕೇವಲ ಆಚರಣೆಗೆ ಸೀಮಿತವಾಗದೆ ಪ್ರತಿಯೊಬ್ಬರ ದಿನನಿತ್ಯದ ಜೀವನದಲ್ಲಿ ಅಳವಡಿಸಿಕೊಳ್ಳಬೇಕಾಗಿದೆ ಎಂದು ಹೇಳಿದರು. ಹಸಿರು ಹಾಗೂ ಸ್ವಚ್ಛ ಪರಿಸರ ನಿರ್ಮಾಣವು ಎಲ್ಲರ ಜವಾಬ್ದಾರಿಯಾಗಿದೆ ಎಂದರು.
ಇದೇ ವೇಳೆ ರೈಲ್ವೆ ವರ್ಕ್‌ಶಾಪ್ ಕಾರ್ಮಿಕರಿಂದ ಪ್ರದರ್ಶಿಸಲಾದ ಪರಿಸರ ಜಾಗೃತಿ ಬೀದಿ ನಾಟಕ ಗಮನ ಸೆಳೆಯಿತು. ಶಾಲಾ ವಿದ್ಯಾರ್ಥಿಗಳು ಪರಿಸರ ಗೀತೆಗಳು ಹಾಗೂ ನೃತ್ಯ ಪ್ರದರ್ಶನ ನೀಡಿದರು. ಪರಿಸರ ವಿಷಯದ ಚಿತ್ರಕಲೆ ಮತ್ತು ಪ್ರಬಂಧ ಸ್ಪರ್ಧೆಗಳ ವಿಜೇತರಿಗೆ ಬಹುಮಾನ ವಿತರಿಸಲಾಯಿತು.
ಕಾರ್ಯಕ್ರಮದ ಅಂಗವಾಗಿ ಪರಿಸರ ಸಂರಕ್ಷಣೆ ಮತ್ತು ಸ್ವಚ್ಛತೆ ಕುರಿತು ಡಿಆರ್‌ಎಂ ಅವರು ಪ್ರತಿಜ್ಞಾವಿಧಿಯನ್ನು ಬೋಧಿಸಿದರು.
ಹೆಚ್ಚುವರಿ ವಿಭಾಗೀಯ ರೈಲ್ವೆ ವ್ಯವಸ್ಥಾಪಕರಾದ ಶ್ರೀ ಟಿ.ವಿ. ಭೂಷಣ ಹಾಗೂ ಶ್ರೀ ಪ್ರೇಮ ಚಂದ್ರ ಹರಿಜನ, ಹಿರಿಯ ವಿಭಾಗೀಯ ಪರಿಸರ ಮತ್ತು ಹೌಸ್‌ಕೀಪಿಂಗ್ ವ್ಯವಸ್ಥಾಪಕರಾದ ಶ್ರೀ ಮೃಣಾಲ ಠಾಕೂರ್ ಸೇರಿದಂತೆ ವಿವಿಧ ಇಲಾಖೆಗಳ ಅಧಿಕಾರಿಗಳು ಭಾಗವಹಿಸಿದ್ದರು.
Also Read>> ವೆಂಕಟಾಚಲಧಾಮದ 15ನೇ ವಾರ್ಷಿಕೋತ್ಸವ | ಚಿನ್ನದ ಕಿರೀಟ ಸಮರ್ಪಣೆ
ವಿಶ್ವ ಪರಿಸರ ದಿನಾಚರಣೆಯ ಅಂಗವಾಗಿ ಹುಬ್ಬಳ್ಳಿ ರೈಲ್ವೆ ವಿಭಾಗದ ವ್ಯಾಪ್ತಿಯ ಧಾರವಾಡ, ಲೊಂಡಾ, ಖಾನಾಪುರ, ಬೆಳಗಾವಿ, ವಾಸ್ಕೋ-ದ-ಗಾಮಾ, ವಿಜಯಪುರ, ಬಳ್ಳಾರಿ ಸೇರಿದಂತೆ ಅನೇಕ ರೈಲು ನಿಲ್ದಾಣಗಳು ಮತ್ತು ಕಚೇರಿ ಆವರಣಗಳಲ್ಲಿ ಸಸಿ ನೆಡುವುದು, ಸ್ವಚ್ಛತಾ ಅಭಿಯಾನಗಳು ಹಾಗೂ ಪರಿಸರ ಜಾಗೃತಿ ಕಾರ್ಯಕ್ರಮಗಳು ನಡೆಯುತ್ತಿವೆ.
ಕಳೆದ ಹಲವು ದಿನಗಳಿಂದ ವಿಭಾಗದ್ಯಂತ ಪರಿಸರ ಸಂರಕ್ಷಣೆ ಮತ್ತು ನೈರ್ಮಲ್ಯ ಕುರಿತ ಚಟುವಟಿಕೆಗಳು ನಿರಂತರವಾಗಿ ನಡೆಯುತ್ತಿದ್ದು, ಸಿಬ್ಬಂದಿ ಮತ್ತು ಪ್ರಯಾಣಿಕರಲ್ಲಿ ಜಾಗೃತಿ ಮೂಡಿಸಲಾಗುತ್ತಿದೆ.
ಸುದ್ಧಿ ಹಾಗೂ ಜಾಹೀರಾತಿಗಾಗಿಸಂಪರ್ಕಿಸಿ: Whatsapp: 9008761663, 9481252093 – info@kalpa.news



















