ಕಲ್ಪ ಮೀಡಿಯಾ ಹೌಸ್ | ಹುಬ್ಬಳ್ಳಿ/ನವದೆಹಲಿ |
ಇಲ್ಲಿನ ವಿ.ಎಸ್. ಪಿಳ್ಳೆ ಇಂಗ್ಲಿಷ್ ಮೀಡಿಯಂ ಶಾಲೆಯ 7ನೇ ತರಗತಿ ವಿದ್ಯಾರ್ಥಿನಿ ಸಾನ್ವಿ ಯರಗೊಪ್ಪ ಅವರು ರಾಷ್ಟ್ರಮಟ್ಟದ ವೀರಗಾಥಾ 5.0 ಸ್ಪರ್ಧೆಯಲ್ಲಿ ದೇಶದ ಟಾಪ್ 100 ಸೂಪರ್ ವಿಜೇತರು’ ಪೈಕಿ ಒಬ್ಬರಾಗಿ ಆಯ್ಕೆಯಾಗಿದ್ದು, ಇತ್ತೀಚೆಗೆ ನವದೆಹಲಿಯಲ್ಲಿ #NewDelhi ನಡೆದ ವಿಶೇಷ ಸಮಾರಂಭದಲ್ಲಿ ಗೌರವಿಸಲಾಯಿತು.
ನವದೆಹಲಿಯಲ್ಲಿ ನಡೆದ ಈ ಗೌರವ ಸಮಾರಂಭದಲ್ಲಿ ಕೇಂದ್ರ ರಕ್ಷಣಾ ರಾಜ್ಯ ಸಚಿವ ಸಂಜಯ್ ಸೇಠ್, ಕೇಂದ್ರ ಶಿಕ್ಷಣ ಹಾಗೂ ಕೌಶಲ್ಯಾಭಿವೃದ್ಧಿ ರಾಜ್ಯ ಸಚಿವರಾದ ಜಯಂತ್ ಚೌಧರಿ ಸೇರಿದಂತೆ ರಕ್ಷಣಾ ಮತ್ತು ಶಿಕ್ಷಣ ಇಲಾಖೆಯ ಹಿರಿಯ ಅಧಿಕಾರಿಗಳು ಉಪಸ್ಥಿತರಿದ್ದ ಸಮಾರಂಭದಲ್ಲಿ ಇವರನ್ನು ಗೌರವಿಸಲಾಯಿತು.
ಈ ಸಂದರ್ಭದಲ್ಲಿ ಸಾನ್ವಿಗೆ 10,000 ನಗದು ಬಹುಮಾನ, ಪದಕ ಹಾಗೂ ಪ್ರಮಾಣಪತ್ರ ಪ್ರದಾನ ಮಾಡಲಾಯಿತು.
ವೀರಗಾಥಾ 5.0 ಸ್ಪರ್ಧೆಯಲ್ಲಿ ದೇಶದಾದ್ಯಂತ 1.9 ಕೋಟಿಗೂ ಅಧಿಕ ವಿದ್ಯಾರ್ಥಿಗಳು ಭಾಗವಹಿಸಿದ್ದು, ಈ ಪೈಕಿ ಸಾನ್ವಿಯ ಆಯ್ಕೆ ಅತ್ಯಂತ ಅಪರೂಪದ ಸಾಧನೆಯಾಗಿದೆ.
ಈ ಸಾಧನೆಯ ಭಾಗವಾಗಿ ಅವರು ಈಗಾಗಲೇ ನವದೆಹಲಿಯ ಕರ್ತವ್ಯ ಪಥದಲ್ಲಿ ನಡೆದ ಗಣರಾಜ್ಯೋತ್ಸವ ಪರೇಡ್’ಗೆ ವಿಶೇಷ ಆಹ್ವಾನಿತೆಯಾಗಿ ಹಾಜರಾಗಿದ್ದರು.
ಸಾನ್ವಿಯ ಈ ಸಾಧನೆ ಅವರ ಕುಟುಂಬ, ವಿ.ಎಸ್. ಪಿಳ್ಳೆ ಇಂಗ್ಲಿಷ್ ಮೀಡಿಯಂ ಶಾಲೆ, ಹಾಗೂ ಹುಬ್ಬಳ್ಳಿ ನಗರಕ್ಕೆ ಅಪಾರ ಹೆಮ್ಮೆಯನ್ನು ತಂದಿದೆ.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news




















